ದೇವರಾಜ ಮಾರುಕಟ್ಟೆ ಕೆಡವಲು ಕೋರ್ಟ್ ಆದೇಶಿಸಿಲ್ಲ: ಯದುವೀರ್ ಒಡೆಯರ್
Recommended Video
ಮೈಸೂರು, ಜುಲೈ 17: ಮೈಸೂರಿನ ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆಯನ್ನು ಕೆಡವಲು ನ್ಯಾಯಾಲಯ ಆದೇಶಿಸಿಲ್ಲ, ಬದಲಿಗೆ ಅದರ ಸಂರಕ್ಷಣೆ ಮಾಡಲು ಚಿಂತನೆ ನಡೆಸಿದೆ ಎಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಮೇಯರ್ ಪುಷ್ಪಲತಾ ಹೇಳಿಕೆ ಹಾಗೂ ಮಾಧ್ಯಮದ ವರದಿ ಹಿನ್ನೆಲೆ ದೇವರಾಜ ಮಾರುಕಟ್ಟೆಗೆ ಪತ್ನಿ ತ್ರಿಷಿಕಾ ಅವರೊಂದಿಗೆ ತೆರಳಿ ಪರಿಶೀಲಿಸಿದರು. ಇದಕ್ಕಿಂತ ಮುಂಚಿತವಾಗಿ ತಮ್ಮ ಟ್ಬಿಟರ್ ಖಾತೆಯಲ್ಲೂ ಈ ವಿಷಯದ ಕುರಿತು ಸ್ಪಷ್ಟನೆ ನೀಡಿದ್ದರು. ನ್ಯಾಯಾಲಯದ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ. ಈ ಕಟ್ಟಡಗಳನ್ನು ಸಂರಕ್ಷಿಸುವ ಕೆಲಸ ಮಾಡಬಹುದು ಎಂದು ತಜ್ಞರು ತಿಳಿಸಿದ್ದಾರೆ. ಎಲ್ಲರೂ ಪಾರಂಪರಿಕ ಕಟ್ಟಡಗಳನ್ನು ಉಳಿಸೋಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಯಾವುದೇ ಕಾರಣಕ್ಕೂ ಮಾರುಕಟ್ಟೆಯನ್ನು ಕೆಡವಿ ಹೊಸತಾಗಿ ನಿರ್ಮಿಸಕೂಡದು. ಮಾರುಕಟ್ಟೆಯನ್ನು ನವೀಕರಿಸಿದರೆ ಕನಿಷ್ಠ 100 ವರ್ಷ ಕಾಲ ಬಾಳಿಕೆ ಬರುತ್ತದೆ. ಪಾರಂಪರಿಕ ತಜ್ಞರು ಕಟ್ಟಡವನ್ನು ಸೂಕ್ತವಾಗಿ ಪರಿಶೀಲನೆ ನಡೆಸಬೇಕು. ಮಾರುಕಟ್ಟೆ ಮೈಸೂರಿನ ಪ್ರಮುಖ ಗುರುತು. ಹಾಗಾಗಿ, ಉಳಿಸಿಕೊಳ್ಳಬೇಕು. ಸರ್ಕಾರದ ತೀರ್ಮಾನದ ಬಳಿಕ ನಮ್ಮ ನಿರ್ಧಾರ ಪ್ರಕಟಿಸುತ್ತೇವೆ. ಪಾರಂಪರಿಕ ಸಮಿತಿ ಸದಸ್ಯರು ಮಾರುಕಟ್ಟೆಗೆ ಭೇಟಿ ನೀಡುವಾಗ ನಾನೂ ಸ್ಥಳಕ್ಕೆ ಬರುತ್ತೇನೆ. ಯಾವುದೇ ಕಾರಣಕ್ಕೂ ವ್ಯಾಪಾರಿಗಳ ಕೈ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ಕಟ್ಟಡವನ್ನು ಪುನರ್ ನಿರ್ಮಿಸಬೇಕು ಅಥವಾ ಅದನ್ನು ನವೀಕರಣಗೊಳಿಸಬೇಕು ಎಂಬುದರ ಕುರಿತು ತಜ್ಞರ ವರದಿ ಪಡೆಯಲಾಗಿದೆ. ಎರಡು ಸಮಿತಿಗಳು ವರದಿ ಸಲ್ಲಿಸಿವೆ. ಈ ಮಧ್ಯೆ ಮುಂಬೈ ಮೂಲದ ಸವಾನಿ ಕನ್ಸ್ಟ್ರಕ್ಷನ್ ಕಂಪನಿಗೆ ನವೀಕರಣ ಕಾಮಗಾರಿ ಗುತ್ತಿಗೆ ನೀಡಲಾಗಿತ್ತು. ಅದು ಕಾರ್ಯಗತವಾಗಿಲ್ಲ ಎಂದರು.
ಈ ಕುರಿತು ಮೇಯರ್ ಪುಷ್ಪಲತಾ ಜಗನ್ನಾಥ್ ಪ್ರತಿಕ್ರಿಯಿಸಿ, ದೇವರಾಜ ಮಾರುಕಟ್ಟೆಯನ್ನು ಒಡೆದು ಕಟ್ಟುವ ಬಗೆಗಿನ ನ್ಯಾಯಾಲಯದ ತೀರ್ಪಿನ ಬಗ್ಗೆ ಮತ್ತೊಮ್ಮೆ ಪರಿಶೀಲಿಸುತ್ತೇವೆ. ಈ ಸಂಬಂಧ ಪಾರಂಪರಿಕ ತಜ್ಞರೊಂದಿಗೆ ಚರ್ಚಿಸಿ ಮುಂದಿನ ಹೆಜ್ಜೆ ಇಡುತ್ತೇವೆ. ನ್ಯಾಯಾಲಯದ ತೀರ್ಪಿನಂತೆ ಕಾರ್ಯನಿರ್ವಹಿಸುತ್ತೇವೆ ಎಂದರು.
ಹೈಕೋರ್ಟ್ ತೀರ್ಪನ್ನು ಮೈಸೂರು ಮಹಾನಗರ ಪಾಲಿಕೆ ತಪ್ಪಾಗಿ ಅರ್ಥೈಸಿಕೊಂಡಿದೆ. ತೀರ್ಪನ್ನು ಸರಿಯಾಗಿ ತಿಳಿದುಕೊಳ್ಳದೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು ತಪ್ಪು ಎಂದು ದೇವರಾಜ ಮಾರುಕಟ್ಟೆ ವ್ಯಾಪಾರಸ್ಥರ ಸಂಘ ಖಂಡಿಸಿದೆ. ಕಟ್ಟಡ ನೆಲಸಮ ಮಾಡಲು ಹೈಕೋರ್ಟ್ ಆದೇಶಿಸಿದ್ದಾಗಿ ಪಾಲಿಕೆ ಹೇಳುತ್ತಿದೆ. ಕಟ್ಟಡ ನೆಲಸಮ ಮಾಡುವಂತೆ ಹೈಕೋರ್ಟ್ ಎಲ್ಲೂ ಹೇಳಿಲ್ಲ. ಪಾರಂಪರಿಕ ಕಟ್ಟಡವನ್ನು ಉಳಿಸಲು ಸಂಘ ತನ್ನ ಹೋರಾಟ ಮುಂದುವರಿಸಲಿದೆ ಎಂದು ಸಂಘದ ಕಾರ್ಯಕರ್ತರು ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಇತಿಹಾಸ ತಜ್ಞ ನಂಜರಾಜ ಅರಸ್, ಪಾರಂಪರಿಕ ಕಟ್ಟಡವಾದ ದೇವರಾಜ ಮಾರುಕಟ್ಟೆಯನ್ನು ಒಡೆಯಲು ನ್ಯಾಯಾಲಯ ಹೇಳಿಲ್ಲ. ತಜ್ಞರೊಂದಿಗೆ ಚರ್ಚಿಸಿ ಎಂದು ಹೇಳಿದೆ. ಆದರೆ ಚುನಾಯಿತ ಪ್ರತಿನಿಧಿಗಳಿಗೆ ಅನುಕೂಲವಾಗಿರುವುದರಿಂದ ಮಾರುಕಟ್ಟೆಯನ್ನು ಕೆಡವಲು ಆತುರಪಡಿಸುತ್ತಿದ್ದಾರೆ ಎಂದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications