ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅರಮನೆಯಲ್ಲಿ ಯದುವೀರ್ ಒಡೆಯರ್ ಖಾಸಗಿ ದರ್ಬಾರ್ ಆರಂಭ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್ 17: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ರಾಜಮನೆತನದ ಖಾಸಗಿ ದರ್ಬಾರ್ ಇಂದು ಆರಂಭವಾಯಿತು. ಕೊರೊನಾ ಹಿನ್ನೆಲೆಯಲ್ಲಿ ಮೈಸೂರು ಅರಮನೆಯಲ್ಲಿ ರಾಜಮನೆತನದ ಖಾಸಗಿ ದಸರಾ ಕೂಡ ಸರಳ ಮತ್ತು ಸಾಂಪ್ರದಾಯಿಕವಾಗಿತ್ತು.

ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದಲೇ ಅರಮನೆಯ ಒಳಗೆ ಹೋಮ ಹವನಗಳು ನಡೆದವು. ಬೆಳಿಗ್ಗೆ 6 ಗಂಟೆ 15 ನಿಮಿಷದಿಂದ 6 ಗಂಟೆ 30 ನಿಮಿಷದೊಳಗೆ ಸಲ್ಲುವ ಶುಭ ಲಗ್ನದಲ್ಲಿ ಸಿಂಹಾಸನಕ್ಕೆ ಸಿಂಹವನ್ನು ಜೋಡಣೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

 ಮೈಸೂರು ದಸರಾ ಕಾರ್ಯಕ್ರಮಗಳ ಪಟ್ಟಿ ಸಿದ್ಧ; ಯಾವ ದಿನ ಏನು ನಡೆಯುತ್ತೆ? ಮೈಸೂರು ದಸರಾ ಕಾರ್ಯಕ್ರಮಗಳ ಪಟ್ಟಿ ಸಿದ್ಧ; ಯಾವ ದಿನ ಏನು ನಡೆಯುತ್ತೆ?

Mysuru Dasara: Yaduveer Krishnadatta Chamaraja Wadeyar Khasagi Darbar Started In Palace

ಬೆಳಿಗ್ಗೆ 7 ಗಂಟೆ 45 ನಿಮಿಷದಿಂದ 8 ಗಂಟೆ 15 ನಿಮಿಷದೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕಂಕಣಧಾರಣೆ ಮಾಡಲಾಯಿತು. ಬಳಿಕ ಹಲವು ಖಾಸಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹತ್ತು ಗಂಟೆಗೆ ಖಾಸಗಿ ದರ್ಬಾರ್ ಕೂಡ ನೆರವೇರಿತು. ಜಯಘೋಷದ ಹಿಮ್ಮೇಳದೊಂದಿಗೆ ಯದುವೀರ್ ಅವರು ಸಿಂಹಾಸನದಲ್ಲಿ ಕುಳಿತರು. ರತ್ನಖಚಿತ ಸಿಂಹಾಸನವೇರಿದ ಮಹಾರಾಜ ಯದುವೀರ, ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಇದೇ ರೀತಿ ಪ್ರತಿದಿನವೂ ದಸರಾ ಜಂಬೂ ಸವಾರಿ ದಿನದ ತನಕ ಖಾಸಗಿ ದರ್ಬಾರ್ ನಡೆಯಲಿದೆ.

English summary
Yaduveer Krishnadatta Chamaraja Wadeyar Khasagi darbar started in palace onbehalf of dasara festival,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X