ಮೇ ನಲ್ಲಿ ಮಹಾರಾಜ ಯದುವೀರ್ ಒಡೆಯರ್ ವಿವಾಹ?
ಮೈಸೂರು, ಫೆಬ್ರವರಿ 29 : ಮೈಸೂರಿನ ಅಂಬಾ ವಿಲಾಸ ಅರಮನೆ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. 2016ರ ಮೇ ತಿಂಗಳಿನಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ವಿವಾಹ ಅರಮನೆಯಲ್ಲಿ ನಡೆಯಲಿದೆ.
ರಾಣಿ ಪ್ರಮೋದಾದೇವಿ ಅವರು, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ಗಾಯಿತ್ರಿ ದೇವಿಯವರ ಪುತ್ರಿ ತ್ರಿಪುರಸುಂದರಿ ದೇವಿ ಮತ್ತು ಸ್ವರೂಪ್ ಆನಂದ್ ಗೋಪಾಲರಾಜ ಅರಸ್ ದಂಪತಿಗಳ ಪುತ್ರ, ಯದುವೀರ ಗೋಪಾಲರಾಜ ಅರಸ್ ಅವರನ್ನು ದತ್ತು ಪಡೆದಿದ್ದಾರೆ.[ಯದುವೀರ್ - ತ್ರಿಷಿಕಾ ಮದುವೆ ಚಿತ್ರಗಳು]

2015ರ ಫೆಬ್ರವರಿ 23ರಂದು ದತ್ತು ಸ್ವೀಕಾರ ಸಮಾರಂಭ ಅರಮನೆಯಲ್ಲಿ ನಡೆದಿತ್ತು. ಮೇ 28ರಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪಟ್ಟಾಭಿಷೇಕ ಕಾರ್ಯಕ್ರಮ ನಡೆದಿತ್ತು. ನಂತರ ದಸರಾದಲ್ಲಿ ಅವರು ಖಾಸಗಿ ದರ್ಬಾರ್ ನಡೆಸಿದ್ದರು. [ಯದುವೀರ ಒಡೆಯರ್ ಭಾವಿ ಪತ್ನಿ ರಾಜಸ್ಥಾನಿ ಕುವರಿ]
ದತ್ತು ಸ್ವೀಕಾರ ಸಮಾರಂಭ ನಡೆದ ನಂತರ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿವಾಹದ ಬಗ್ಗೆ ಮಾತನಾಡಿದ್ದರು. ವಿದ್ಯಾಭ್ಯಾಸದ ನಂತರ ಈ ಬಗ್ಗೆ ಚಿಂತನೆ ನಡೆಸುತ್ತೇನೆ ಎಂದು ಹೇಳಿದ್ದರು. [ಯುವರಾಣಿ ತ್ರಿಷಿಕಾ ಕಾಣದೆ ನಿರಾಶರಾದ ಜನ]
ರಾಜಸ್ಥಾನದ ಡುಂಗರಾಪುರ್ ಮನೆತನದ ಹರ್ಷವರ್ಧನ್ ಸಿಂಗ್, ಮಹೇಶ್ರೀ ಕುಮಾರಿ ಅವರ ಕಿರಿಯ ಪುತ್ರಿ ತ್ರಿಷಿಕಾ ಕುಮಾರಿ ಸಿಂಗ್ ಅವರ ಜೊತೆ ಯದುವೀರ್ ಒಡೆಯರ್ ಅವರ ವಿವಾಹ ನಿಶ್ಚಯವಾಗಿದೆ. ಮೇ ತಿಂಗಳಿನಲ್ಲಿ ವಿವಾಹ ನಡೆಯಲಿದ್ದು ಮೇ 8 ಅಥವ 18ರಂದು ವಿವಾಹ ನೆರವೇರುವ ಸಾಧ್ಯತೆ ಇದೆ.[ಪಟ್ಟಾಭಿಷೇಕದ ಚಿತ್ರಗಳು]
ರಾಣಿ ಪ್ರಮೋದಾದೇವಿ ಅವರು ಅರಮನೆಯ ರಾಜಗುರುಗಳು, ಧರ್ಮಾಧಿಕಾರಿಗಳು, ಜ್ಯೋತಿಷಿಗಳ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ರಾಜಮನೆತನದ ಸದಸ್ಯರೊಂದಿಗೆ ಮತ್ತೊಮ್ಮೆ ಸುಧೀರ್ಘವಾಗಿ ಸಮಾಲೋಚನೆ ನಡೆಸಿದ ಬಳಿಕ ವಿವಾಹದ ದಿನಾಂಕದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಅರಮನೆಯಲ್ಲಿ ನಡೆದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ದತ್ತು ಸ್ವೀಕಾರ ಮತ್ತು ಪಟ್ಟಾಭಿಷೇಕ ಕಾರ್ಯಕ್ರಮವನ್ನು ಕಣ್ತುಂಬಿಕೊಂಡ ಜನರಿಗೆ, ಶೀಘ್ರದಲ್ಲಿಯೇ ಅವರ ವಿವಾಹ ಮಹೋತ್ಸವನ್ನು ನೋಡುವ ಅವಕಾಶ ದೊರೆಯಲಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications