ಪಾರಂಪರಿಕ ಕಟ್ಟಡಗಳ ನೆಲಸಮ ವಿಚಾರ:ಅಸಮಾಧಾನ ವ್ಯಕ್ತಪಡಿಸಿದ ಯದುವೀರ್

ಮೈಸೂರು, ಫೆಬ್ರವರಿ 6: ಮೈಸೂರು ಪಾಲಿಕೆ ಪ್ರತಿಷ್ಠಿತ ಲ್ಯಾನ್ಸ್ ಡೌನ್ ಬಿಲ್ಡಿಂಗ್, ದೇವರಾಜ ಮಾರುಕಟ್ಟೆ ನೆಲಸಮ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜಮನೆತನದಿಂದಲೂ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಸಂಬಂಧ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಪಾರಂಪರಿಕ ಕಟ್ಟಡ ಉಳಿಸುವಂತೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ವಿಷಯ ಹಂಚಿಕೊಂಡಿರುವ ಯದುವೀರ್ , ಮೈಸೂರು ಪರಂಪರೆ ಕಟ್ಟಡಗಳನ್ನ ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದ್ದಾರೆ.

Yaduveer Wadiyar tells his reaction about demolishing heritage building

ಕಟ್ಟಡಗಳ ಸಂರಕ್ಷಿಸುವ ನಿಟ್ಟಿನಲ್ಲಿ ಯದುವೀರ್ ಈ ಮೂಲಕ ತಮ್ಮ ಅಭಿಪ್ರಾಯವನ್ನು ರಾಜ್ಯ ಸರ್ಕಾರಕ್ಕೆ ತಿಳಿಸಿದ್ದಾರೆ. ಈಗಾಗಲೇ ಲಾನ್ಸ್ ಡೌನ್ ಬಿಲ್ಡಿಂಗ್ ಹಾಗೂ ಕೆ ಆರ್ ಮಾರುಕಟ್ಟೆ ನೆಲಸಮ ಮಾಡಲು ಮೈಸೂರು ಮಹಾನಗರ ಪಾಲಿಕೆ ಚಿಂತನೆ ನಡೆಸುತ್ತಿದೆ ಎನ್ನಲಾಗಿದ್ದು, ಇದಕ್ಕೆ ರಾಜಮನೆತನ ವಿರೋಧ ವ್ಯಕ್ತಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+