• search
 • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಾಮುಂಡಿ ದೇವಿಯ ದರ್ಶನ ಪಡೆದ ರಾಜವಂಶಸ್ಥ ಯದುವೀರ ಒಡೆಯರ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜೂನ್ 9: ಚಾಮುಂಡಿ ಬೆಟ್ಟಕ್ಕೆ ಮೈಸೂರು ರಾಜವಂಶಸ್ಥರು ಭೇಟಿ ನೀಡಿದ್ದಾರೆ. ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ನಿ ತ್ರಿಷಿಕಾ ಕುಮಾರಿ ಒಡೆಯರ್ ಅವರೊಂದಿಗೆ ಆಗಮಿಸಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ.

   ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಮೈಸೂರಿನ ಮಹಾರಾಜ | Yaduveer Wadeyar visits Chamundeshwari Temple

   ನಾಡ‌ದೇವತೆ ಚಾಮುಂಡೇಶ್ವರಿ ದೇವಿಯ ಎರಡನೇ ದಿನದ ದರ್ಶನ ಆರಂಭವಾಗಿದ್ದು, ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ.

   ಮೈಸೂರು: ಚಾಮುಂಡಿಬೆಟ್ಟದ ಮೆಟ್ಟಿಲು ಬಾಗಿಲು ತೆರೆಯುವುದು ಯಾವಾಗ?ಮೈಸೂರು: ಚಾಮುಂಡಿಬೆಟ್ಟದ ಮೆಟ್ಟಿಲು ಬಾಗಿಲು ತೆರೆಯುವುದು ಯಾವಾಗ?

   ಆದರೆ ಲಾಕ್ ಡೌನ್ ಸಡಿಲಿಕೆಯ ನಂತರ ಚಾಮುಂಡೇಶ್ವರಿ ದೇವಸ್ಥಾನವನ್ನು ರೀ ಓಪನ್ ಮಾಡಿದ ಮೊದಲ ದಿನಕ್ಕೆ ಹೋಲಿಸಿದರೆ ಎರಡನೇ‌ ದಿನದಂದು ಬೆಟ್ಟಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡುಬಂದಿದೆ.

   ಭಕ್ತರು ಬೆಳ್ಳಂಬೆಳಗ್ಗೆ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ. ದೇವಸ್ಥಾನದ ಗೋಪುರದ ಮುಂದೆ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂದಿದೆ.

   Yaduveer Wadiyar Took Goddess Chamundi Devi Darshan

   ದೇವಿಯ ದರ್ಶನ ಪಡೆದುಕೊಂಡು ಗೋಪುರದ ಮುಂದೆ ಭಕ್ತರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ದೇವಸ್ಥಾನದಲ್ಲಿ ಕೇವಲ ಚಾಮುಂಡಿ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಉಳಿದ ಸೇವೆಯನ್ನು ರದ್ದುಪಡಿಸಲಾಗಿದೆ. ಈ ಮಾಹಿತಿಯನ್ನು ಆಡಳಿತ ವರ್ಗವು ಧ್ವನಿವರ್ಧಕ ಮೂಲಕ ಭಕ್ತರಿಗೆ ನೀಡುತ್ತಿದ್ದಾರೆ.

   English summary
   Yaduveer Wadiyar and his wife Trishika Kumari Took Goddess Chamundi Devi Darshana On Tuesday.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X