Yaduveer Wadiyar: ಲೋಕಸಭಾ ಚುನಾವಣೆ ಟಿಕೆಟ್ ಸಿಕ್ಕ ಬಳಿಕ ಯದುವೀರ್ ಒಡೆಯರ್ ಮೊದಲ ಪ್ರತಿಕ್ರಿಯೆ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪರ್ಧಿಸಲಿದ್ದಾರೆ. ಪ್ರತಾಪ್ ಸಿಂಹ ಅವರ ಬದಲಾಗಿ ಯದುವೀರ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಟಿಕೆಟ್ ಕೈತಪ್ಪಿದ ಬಳಿಕ ಪ್ರತಿಕ್ರಿಯೆ ನೀಡಿರುವ ಹಾಲಿ ಸಂಸದ ಪ್ರತಾಪ್ ಸಿಂಹ, ಯದುವೀರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ಅವರ ಪರವಾಗಿ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ. ಟಿಕೆಟ್ ಸಿಕ್ಕಿದರೂ ಸಿಗದೇ ಇದ್ದರೂ ತಾನು ಮೋದಿಗಾಗಿ ಕೆಲಸ ಮಾಡುವುದಾಗಿ ಪ್ರತಾಪ್ ಸಿಂಹ ಈ ಮೊದಲು ಹೇಳಿದ್ದರು.

Yaduveer Wadiyar s First Reaction After Securing BJP Ticket for Mysuru Lok Sabha Election

ಯದುವೀರ್ ಪ್ರತಿಕ್ರಿಯೆ

ತಮಗೆ ಟಿಕೆಟ್ ಸಿಕ್ಕ ಬಳಿಕ ಯದುವೀರ್ ಒಡೆಯರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಸುದೀರ್ಘವಾದ ಪೋಸ್ಟ್‌ ಹಂಚಿಕೊಂಡಿದ್ದು, ಜನರ ಬೆಂಬಲ ಕೇಳಿದ್ದಾರೆ.

"ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ. ಕಳೆದ ಒಂಭತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗು ನಮ್ಮ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದು ಅನೇಕ ಪ್ರಜಾಬಾಂಧವರನ್ನು ಭೇಟಿಮಾಡುವ ಅವಕಾಶ ಸಿಕ್ಕಿದ್ದು, ನನ್ನನ್ನು ನೀವೆಲ್ಲರೂ ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ, ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ." ಎಂದು ಹೇಳಿದ್ದಾರೆ.

ಎಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ, ಹಾಗು ಮೈಸೂರು-ಕೊಡಗಿನ ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ತಮ್ಮ ಮೇಲೆ ನಂಬಿಕೆ ಇಟ್ಟು ಸ್ಪರ್ಧಿಸಲು ಅವಕಾಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ, ಅಮಿತ್ ಶಾ, ಬಿಎಸ್ ಯಡಿಯೂರಪ್ಪ, ಬಿ.ಎಲ್ ಸಂತೋಷ್ ಮತ್ತು ಬಿವೈ ವಿಜಯೇಂದ್ರ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಜೊತೆಗೆ ಬಿಜೆಪಿ ಕಾರ್ಯಕರ್ತರಿಗೆ ಕೂಡ ಧನ್ಯವಾದ ಸಲ್ಲಿಸಿದ್ದಾರೆ.

ಪ್ರತಾಪ್ ಸಿಂಹ ಅವರಿಗೂ ಅಭಿನಂದನೆ

ಎರಡು ಬಾರಿ ಸಂಸದರಾಗಿ ಕೆಲಸ ಮಾಡಿರುವ ಪ್ರತಾಪ್ ಸಿಂಹ ಅವರಿಗೂ ಯದುವೀರ್ ಅಭಿನಂದನೆ ಸಲ್ಲಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಅವರ ಬದ್ಧತೆ ನಮ್ಮೆಲ್ಲರ ಭವಿಷ್ಯದ ಆಕಾಂಕ್ಷಿಗಳಿಗೆ ಭದ್ರ ಅಡಿಪಾಯ ಹಾಕಿ ಕೊಟ್ಟಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+