ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಹೈಕಮಾಂಡ್ ಒಪ್ಪಿಗೆ
ಹಾಸನದಲ್ಲಿ ಅಹಿಂದ ಸ್ವಾಭಿಮಾನಿಗಳ ಸಮಾವೇಶಕಗಕ್ಕೆ ಕಾಂಗ್ರೆಸ್ ಶಾಸಕರಿಂದಲೇ ಅಸಮಾಧಾನ ಕೇಳಿ ಬಂದಿದೆ. ಇದೀಗ ಈ ಸಂಬಂಧ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಹಾಸನ ಸಮಾವೇಶಕ್ಕೆ ಹೈಕಮಾಂಡ್ ಒಪ್ಪಿಗೆ ಇದೆ ಎಂದಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜಾಗಿದೆ.
ಹಾಸನ ಸಮಾವೇಶದ ಬಗ್ಗೆ ಎಐಸಿಸಿಗೆ ಪತ್ರ ಬರೆದ ವಿಚಾರ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಯತೀಂದ್ರ ಸಿದ್ದರಾಮಯ್ಯ, ಸಮಾವೇಶಕ್ಕೆ ಹೈಕಮಾಂಡ್ ಒಪ್ಪಿಗೆ ಇದೆ. ಪತ್ರದ ಬಗ್ಗೆ ನನಗೆ ಗೊತ್ತಿಲ್ಲ. ಆ ಪತ್ರ ನಕಲಿ ಇರಬಹುದು. ಈಗಾಗಲೇ ಮೈಸೂರಿನಲ್ಲಿ ಮುಡಾ ವಿಚಾರಕ್ಕೆ ಮುಡಾ ಸಮಾವೇಶ ಮಾಡಲಾಗಿದೆ. ಹೀಗಾಗಿ ಹಾಸನದಲ್ಲಿ ಭಾರಿ ಸಮಾವೇಶ ಮಾಡುತ್ತಿದ್ದೇವೆ ಅಷ್ಟೇ ಎಂದರು.

ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದ್ದಕ್ಕೆ ಸಮಾವೇಶ ಮಾಡಲಾಗುತ್ತಿದೆ. ಮೈಸೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಾರೆ. ಸಮಾವೇಶ ಮೂಲಕ ವಿಪಕ್ಷಗಳ ಆರೋಪಕ್ಕೆ ಉತ್ತರ ಕೊಡಲಿದ್ದಾರೆ. ಉಪಚುನಾವಣೆ ಫಲಿತಾಂಶದಿಂದ ಉತ್ತರ ಸಿಕ್ಕಿದೆ. ಇದು ಕಾಂಗ್ರೆಸ್ ಪಕ್ಷದಿಂದಲೇ ಮಾಡುತ್ತಿರುವ ಸಮಾವೇಶ. ಸಮಾವೇಶಕ್ಕೆ ಪಕ್ಷಕ್ಕೆ ಸಂಪೂರ್ಣ ಒಪ್ಪಿಗೆ ಇದೆ ಎಂದರು.
ಯಾವುದೇ ಕಾರಣಕ್ಕೂ ರಾಜೀನಾಮೇ ಕೊಡಲ್ಲ
ಬಿಜೆಪಿಯವರು ಸುಳ್ಳು ಆರೋಪ ಮಾಡಿ ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ. ಬಿಜೆಪಿಯವರು ಪ್ರಜಾಪ್ರಭುತ್ವ ಕೊಲ್ಲುವ ಯತ್ನ ಮಾಡುತ್ತಿದ್ದಾರೆ. ಬಿಜೆಪಿಯ ಮುಖ್ಯ ಉದ್ದೇಶ ಅಧಿಕಾರಕ್ಕೆ ಬರವುದು. ಸಿದ್ದರಾಮಯ್ಯ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.
ಇಡಿ ತನಿಖೆಯಲ್ಲಿ ತಂದೆಯ ಆರೋಪದ ಮೇಲೆ ವಿಚಾರಣೆ ನಡೆಯುತ್ತಿಲ್ಲ. ಇ.ಡಿಗೆ ವಿಚಾರಣೆ ಮಾಡುವ ಹಕ್ಕು ಇಲ್ಲ. ಇದರಲ್ಲಿ ಸತ್ಯ ಏನು ಇಲ್ಲ ಅಂಥ ಎಲ್ಲರಿಗೂ ಗೊತ್ತಿದೆ. ಆರ್ ಟಿಐ ಕಾರ್ಯಕರ್ತ ಮಾಡಿರುವ ಆರೋಪದಲ್ಲಿ ಸತ್ಯ ಇಲ್ಲ. ಪ್ರತಿಪಕ್ಷಗಳು ನಮ್ಮ ಡಿಮಾರ್ಲೈಸ್ ಮಾಡಲು ಯತ್ನಿಸುತ್ತಿದ್ದಾರೆ. ಅಧಿಕಾರದ ಹಪಹಪಿಯಿಂದ ಏನ್ ಬೇಕಾದ್ರು ಮಾಡುತ್ತಾರೆ. ನಮಗೆ ಕೇಂದ್ರ ತನಿಖಾ ಸಂಸ್ಥೆಯ ಮೇಲೆ ನಂಬಿಕೆ ಇಲ್ಲ ಎಂದರು
ಮುಡಾದಲ್ಲಿ 50:50 ಅನುಪಾತದಲ್ಲಿ ಹಗರಣ ಆಗಿದೆ. ಮೇಲ್ನೋಟಕ್ಕೆ ಹಗರಣದ ಆಗಿದ್ದು ಎಲ್ಲರೂ ಮಾತನಾಡುತ್ತಿದ್ದಾರೆ. ಜನರು ಮಾತನಾಡಿಕೊಳ್ಳುತ್ತಿದ್ದಾರೆ. ತನಿಖೆಯಿಂದ ಎಲ್ಲವೂ ಹೊರಬರಲಿದೆ. ದೇಶಕ್ಕೆ ಮಾರಕ ಆಗುವ ರೀತಿ ಕೋರ್ಟ್ ನಿಂದ ತೀರ್ಪು ಬರುತ್ತಿದೆ. ದೇಶಕ್ಕೆ ಒಳ್ಳೆಯ ರೀತಿ ತೀರ್ಪು ಬಂದಿಲ್ಲ. ಸೆಬಿ ವಿಚಾರ, ಅದಾನಿ ವಿಚಾರ, ಬಾಬ್ರಿ ಧ್ವಂಸದ ವಿಚಾರದಲ್ಲಿ ದೇಶದ ಪರ ತೀರ್ಪು ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.












Click it and Unblock the Notifications