ವರ್ಗಾವಣೆ ದಂಧೆ ಆರೋಪ, ತಂದೆಯನ್ನು ಸಿಲುಕಿಸಲು ಕುಮಾರಸ್ವಾಮಿ ತಂತ್ರ: ಯತೀಂದ್ರ ಸಿದ್ದರಾಮಯ್ಯ ಆರೋಪ

ಮೈಸೂರು, ನವೆಂಬರ್‌ 19: ತಂದೆಯವರ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಏನೂ ಆರೋಪ ಮಾಡಲು ಆಗುತ್ತಿಲ್ಲ. ಹೀಗಾಗಿ ಕುಟುಂಬದವರನ್ನ ಹಣೆಯುವ ಪ್ರಯತ್ನವನ್ನು ಇವರು ಮೊದಲಿನಿಂದಲೂ ಮಾಡುತ್ತಿದ್ದಾರೆ. ಯಾವುದರಲ್ಲದರೂ ಸಿಎಂ ಕುಟುಂಬವನ್ನು ಸಿಲುಕಿಸಬೇಕೆಂಬ ಪ್ರಯತ್ನ ನಡೆಯುತ್ತಿದೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಗಾವಣೆ ಪ್ರಕ್ರಿಯೆಗೆ ದಂಧೆ ಬಣ್ಣ ಕಟ್ಟುವುದಾದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ನಡೆದ ವರ್ಗಾವಣೆಗಳೆಲ್ಲಾ ದಂಧೆಯೇ? ಅವರು ಹಣ ಪಡೆದೇ ವರ್ಗಾವಣೆ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.

Yathindra Siddaramaiah Reaction About Transfer Scam Allegations

ಇನ್ಸ್‌ಪೆಕ್ಟರ್‌ ವಿವೇಕಾನಂದ ಯಾರು ಎಂಬುದು ನನಗೆ ಈಗಲೂ ಗೊತ್ತಿಲ್ಲ. ವಿವೇಕಾನಂದ ಟ್ರಾನ್ಸರ್ ಎಲ್ಲಿಗೆ ಆಗಿದೆ. ಆ ಕ್ಷೇತ್ರದ ವ್ಯಾಪ್ತಿ ಯಾವುದು. ಅದರ ಬಗ್ಗೆ ಕ್ಷೇತ್ರದ ಶಾಸಕರನ್ನ ಕೇಳಿಕೊಳ್ಳಿ. ಅದಕ್ಕೂ ನನಗೂ ಏನೂ ಸಂಬಂಧ. ನಮ್ಮ ಕ್ಷೇತ್ರದಲ್ಲಿ ಒಬ್ಬರು ಬಿಇಒ ವಿವೇಕಾನಂದ ಇದ್ದಾರೆ. ಇವತ್ತಿನ ವರ್ಗಾವಣೆ ಹೆಸರು ನನಗೆ ಗೊತ್ತಿಲ್ಲ ಎಂದರು.

ನನಗೆ ವರುಣ ಕ್ಷೇತ್ರದ ಜವಾಬ್ದಾರಿ ಇದೆ. ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿಸಿದರೆ ಅದರಲ್ಲಿ ತಪ್ಪೇನಿದೆ. ಎಲ್ಲಾ ವರ್ಗಾವಣೆಯನ್ನೂ ಇವರು ಹಣದ ದೃಷ್ಟಿಯಲ್ಲಿ ನೋಡಿದರೆ ಇವರು ಅದೇ ಕೆಲಸ ಮಾಡುತ್ತಿದ್ದರು ಎಂದು ಅರ್ಥ ಅಲ್ಲವೇ ? ಆರೋಪಗಳನ್ನು ಮಾಡುವಾಗ ದಾಖಲೆ ಇಟ್ಟು ಆರೋಪ ಮಾಡಲಿ. ನಾನು ನನ್ನ ಪಾಡಿಗೆ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ. ಅನಗತ್ಯವಾಗಿ ಈ ರೀತಿ ನನ್ನ ಮೇಲೆ ಆರೋಪ ಮಾಡುವುದು ನೀಚ ರಾಜಕಾರಣ ಎಂದು ಟೀಕಿಸಿದರು.

ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ಈಗ ನಾನು ದುಡ್ಡಿನ ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು. ಆದರೂ ಈಗ ಅದರ ಬಗ್ಗೆ ಸ್ಪಷ್ಟೀಕರಣ ಕೊಡುತ್ತಿದ್ದೇನೆ. ನಾನು ಅವತ್ತು ಸಿಎಂ ಂಡ್ ವಿಚಾರದ ಬಗ್ಗೆ ಮಾತನಾಡಿದ್ದೇನೆ. ಲಿಸ್ಟ್ ಎಂದ ಕೂಡಲೇ ಅದನ್ನು ವರ್ಗಾವಣೆ ವಿಚಾರಕ್ಕೆ ಯಾಕೆ ತೆಗೆದುಕೊಂಡು ಹೋಗುತ್ತಾರೆ. ಇವರ ಅವಧಿಯಲ್ಲಿ ಲಿಸ್ಟ್ ಅಂದರೆ ವರ್ಗಾವಣೆ ಅಂದರೆ ಅದು ದಂಧೆಯಾಗಿತ್ತಾ? ಇವರ ಪತ್ನಿ, ಮಗ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ. ಅವರ ಮೇಲೂ ನಾವೂ ಅದೇ ರೀತಿ ಮಾತನಾಡುವುದು ಸರಿಯೇ ಎಂದು ಪ್ರಶ್ನಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+