ಯಡಿಯೂರಪ್ಪ ಹೇಳಿದ್ದು ಯಾವುದೂ ನಿಜವಾಗಿಲ್ಲ: ಸಿದ್ದರಾಮಯ್ಯ
ಮೈಸೂರು, ಜೂನ್ 25: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಊಹೆಗಳಿಗೆ ಉತ್ತರ ನೀಡಲು ಆಗುವುದಿಲ್ಲ. ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಬಹಳ ದಿನಗಳಿಂದ ಸರ್ಕಾರ ಬೀಳುವ ವಿಚಾರ ಮಾತನಾಡುತ್ತಿದ್ದಾರೆ. ಆದರೆ ಅವರು ಹೇಳಿದ್ದು ಯಾವುದೂ ನಿಜವಾಗಿಲ್ಲ. ರಾಜ್ಯ ಸರ್ಕಾರ ಉತ್ತಮವಾಗಿ ಆಡಳಿತ ನಡೆಸುತ್ತಿದೆ. ಮಧ್ಯಂತರ ಚುನಾವಣೆ ಬರುವುದಿಲ್ಲ ಎಂದು ತಿಳಿಸಿದರು.

ಕೆಪಿಸಿಸಿಯ ಪದಾಧಿಕಾರಿಗಳ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಪಕ್ಷದ ಸಂಘಟನೆಗಾಗಿ ಈಗ ಕೆಪಿಸಿಸಿಯಲ್ಲಿ ಘಟಕಗಳನ್ನು ಪುನಾರಚನೆ ಮಾಡಲಾಗಿದೆ. ಈ ಬಾರಿ ಹೊಸಬರಿಗೆ ಅವಕಾಶ ನೀಡಲಾಗುವುದು. ಯುವಕರಿಗೆ ಅವಕಾಶ ಕೊಡಲು ತೀರ್ಮಾನ ಕೈಗೊಳ್ಳಲಾಗಿದೆ. ಪಕ್ಷದ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಲಾಗುತ್ತದೆ ಎಂದರು.












Click it and Unblock the Notifications