ಯಡ್ಡಿಯೂರಪ್ಪನವರದ್ದು ಉತ್ತರ ಕುಮಾರನ ಪೌರುಷ: ಉಗ್ರಪ್ಪ
ಮೈಸೂರಿನ ಪತ್ರಕರ್ತರ ಭವನದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಯಡ್ಡಿಯೂರಪ್ಪ ಉತ್ತರ ಕುಮಾರನ ಪೌರುಷ ತೋರುತ್ತಿದ್ದಾರೆ ಎಂದು ಆರೋಪಿಸಿದರು.
ಮೈಸೂರು, ಏಪ್ರಿಲ್ 6: ಸಾಲ ಮನ್ನಾ ಮಾಡುವ ವಿಚಾರದಲ್ಲಿ ಯಡ್ಡಿಯೂರಪ್ಪ ಉತ್ತರ ಕುಮಾರನ ಪೌರುಷ ತೋರುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಆರೋಪಿಸಿದರು.
ಮೈಸೂರು ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡುವಂತೆ ಮಹಾರಾಷ್ಟ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಆದರೆ ಕರ್ನಾಟಕ ರೈತರ ಸಾಲ ಮನ್ನಾ ಮಾಡಿ ಎಂದು ಕೇಂದ್ರವನ್ನು ಒತ್ತಾಯಿಸುವ ಧೈರ್ಯ ಯಡ್ಡಿಯೂರಪ್ಪನವರಿಗಿಲ್ಲ ಎಂದರು.[ಅನುಕಂಪದ ಅಲೆಯಲ್ಲ, ಪತಿಯ ಜನಸೇವೆ ನನ್ನ ಗೆಲ್ಲಿಸುತ್ತೆ: ಗೀತಾ ಮಹಾದೇವಪ್ರಸಾದ್]

ರೈತರ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಉತ್ತರ ಪ್ರದೇಶಕ್ಕೆ ಕೇಂದ್ರ ಸರ್ಕಾರ ವಿಶೇಷ ಅನುದಾನ ನೀಡಿದ ಹಿನ್ನೆಲೆಯಲ್ಲಿ ಸಾಲ ಮನ್ನಾ ಮಾಡಲು ಸಾಧ್ಯವಾಯಿತು. ಆದರೆ, ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದರು.[ಮತ ಕೇಳುವ ನೈತಿಕತೆ ಯಡಿಯೂರಪ್ಪನವರಿಗೆಲ್ಲಿದೆ ?: ಸಿದ್ದರಾಮಯ್ಯ]
ಏಪ್ರಿಲ್ 9 ರ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯ ಪ್ರಚಾರದ ಹುರುಪಿನಲ್ಲಿ ಯಡ್ಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಹಗುರವಾಗಿ ಹಾಗೂ ಏಕವಚನದಲ್ಲಿ ಮಾತನಾಡುತ್ತಿದ್ದಾರೆ, ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡಂತೆ ವರ್ತಿಸುತ್ತಿರುವ ಇಂಥ ನಡೆಗೆ ಏಪ್ರಿಲ್ 13 ರ ಫಲಿತಾಂಶದ ದಿನ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದಿದ್ದಾರೆ.
ರಾಜ್ಯ ಸೇರಿದಂತೆ ಆಂಧ್ರ, ಪಂಜಾಬ್, ಮಹಾರಾಷ್ಟ್ರ ತಮಿಳುನಾಡಿನಲ್ಲಿ ಬರ ಇದೆ.ಮನಮೋಹನ್ ಸಿಂಗ್ ಅವರು ರೈತರ ಸಾಲ ಮನ್ನಾ ಮಾಡಿದ ಹಾಗೆ ಮೋದಿ ಅವರು ಮಾಡಬೇಕು. ಬಿಎಸ್ ವೈ ಅವರು ಈ ಬಗ್ಗೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು. ಸುಖಾಸುಮ್ಮನೆ ರಾಜ್ಯ ಸರ್ಕಾರವನ್ನು ತೆಗಳುವುದರಿಂದ ಪ್ರಯೋಜನವಿಲ್ಲ ಎಂದು ಯಡ್ಡಿಯೂರಪ್ಪ ವಿರುದ್ಧ ಹರಿಹಾಯ್ದರು.[ಮೋದಿಗೆ ನನ್ನ ವಯಸ್ಸು ಗೊತ್ತಿದೆ, ನಾನೇ ಮುಂದಿನ ಸಿಎಂ - ಯಡಿಯೂರಪ್ಪ]
ಸುದ್ದಿಗೋಷ್ಠಿಯಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ ಸದಸ್ಯ ಹೆಚ್.ಎಂ.ರೇವಣ್ಣ, ಮುಖ್ಯ ಸಚೇತಕ ಪಿ.ಎಂ.ಅಶೋಕ್, ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications