ಕಾರ್ಯಕಾರಣಿಯಲ್ಲಿ ಈಶ್ವರಪ್ಪಗೆ ಮಾತಾಡಲು ಅವಕಾಶ: ಬಿಎಸ್ ವೈ
ಮೈಸೂರು, ಮೇ 6: ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ಮೇ 6, 7ರಂದು ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿಗೆ ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಬಂದಿರುವುದನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈಶ್ವರಪ್ಪ ಅವರಿಗೆ ಕಾರ್ಯಕಾರಿಣಿಯಲ್ಲಿ ಮಾತನಾಡಲು ಅವಕಾಶ ನೀಡುತ್ತೇವೆ ಎಂದು ಹೇಳಿದರು.
ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿರುವ ಅವರು, ಶನಿವಾರ (ಮೇ 6) ಬೆಳಗ್ಗೆ ಗನ್ ಹೌಸ್ ಬಳಿ ಇರುವ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆಗೈದು ಗೌರವ ಅರ್ಪಿಸಿದರು.

ಆನಂತರ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಈಶ್ವರಪ್ಪ ಅವರು ಕಾರ್ಯಕಾರಿಣಿಗೆ ಬರುತ್ತಿಲ್ಲ ಎಂದು ಹೇಳಲಾಗಿತ್ತು. ಇದೀಗ ಅವರು ಆಗಮಿಸಿದ್ದಾರೆ. ಅವರಿಗೆ ಕಾರ್ಯಕಾರಣಿಯಲ್ಲಿ ಮಾತನಾಡಲು ಅವಕಾಶ ನೀಡುತ್ತೇವೆ. ಎಲ್ಲಾ ಪ್ರಮುಖರಿಗೂ ಸಮಾನ ಅವಕಾಶ ನೀಡಲಾಗುವುದು'' ಎಂದು ಸ್ಪಷ್ಟಪಡಿಸಿದರು.
ಇದೇ ಸಂದರ್ಭದಲ್ಲಿ, ಸರ್ಕಾರದ ವಿರುದ್ಧ ಹರಿಹಾಯ್ದ ಯಡಿಯೂರಪ್ಪ, ''ಇದು ದಪ್ಪ ಚರ್ಮದ ಸರ್ಕಾರ. ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಭೀಕರ ಬರಗಾಲ ಎದುರಾಗಿದೆ. ಆದರೂ ರಾಜ್ಯ ಸರ್ಕಾರ ವಿಧಾನ ಪರಿಷತ್ ಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡುವುದರಲ್ಲಿ ಸರ್ಕಾರ ಮುಳುಗಿದೆ'' ಎಂದು ಹರಿಹಾಯ್ದರು.
ರಾಜ್ಯದಲ್ಲಿ ಬರಗಾಲವಿದ್ದರೂ, ಸಿ.ಎಂ ಸಿದ್ದರಾಮಯ್ಯ ಇತ್ತ ಗಮನ ಹರಿಸದೇ ದುಬೈ ಪ್ರವಾಸ ಮಾಡುತ್ತಿದ್ದಾರೆ. ತಮ್ಮ ವೈಯಕ್ತಿಕ ಕೆಲಸಗಳಲ್ಲಿ ಮಗ್ನರಾಗಿದ್ದಾರೆಂದು ಟೀಕಿಸಿದರು.
ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮಾಜಿ ಸಚಿವ ಎಸ್.ಎ ರಾಮದಾಸ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.












Click it and Unblock the Notifications