ಬಹಿರ್ದೆಸೆಗೆ ತೆರಳಿದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ
ಮೈಸೂರು, ಜೂನ್ 18: ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಯುವಕನೊಬ್ಬ ಅತ್ಯಾಚಾರ ನಡೆಸಲು ಮುಂದಾದ ಘಟನೆ ಮೈಸೂರು ತಾಲ್ಲೂಕಿನ ಎಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎಡಹಳ್ಳಿ ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರು ಸೋಮವಾರ ಬೆಳಗಿನ ಜಾವ ಬಹಿರ್ದೆಸೆಗೆ ತೆರಳುವ ವೇಳೆ ಅದೇ ಗ್ರಾಮದ ಯೋಗಾನಂದ ಎಂಬ ಯುವಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ, ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ.
ಈ ವಿಷಯವನ್ನು ಯೋಗಾನಂದ ತಂದೆ ಶಿವಪಾದಸ್ವಾಮಿ ಗಮನಕ್ಕೆ ಮಹಿಳೆ ತಂದಿದ್ದು, ಮಹಿಳೆಯನ್ನೇ ಅವಾಚ್ಯ ಪದಗಳಿಂದ ನಿಂದಿಸಿ ಗ್ರಾಮದಿಂದ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದರಿಂದ ನೊಂದು, ಜಯಪುರ ಪೋಲಿಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಮಹಿಳೆಯ ದೂರಿನ ಮೇರೆಗೆ ಸ್ಥಳ ಪರಿಶೀಲನೆ ಮಾಡಿದ ಪೊಲೀಸರು, ಯೋಗಾನಂದ, ಆತನ ತಂದೆ ಶಿವಪಾದಸ್ವಾಮಿ, ಆತನ ಮತ್ತೊಬ್ಬ ಸಂಬಂಧಿಕ ನಂಜುಂಡಸ್ವಾಮಿ ಮೇಲೆ ಎಫ್ ಐಆರ್ ದಾಖಲಿಸಿದ್ದಾರೆ.












Click it and Unblock the Notifications