ಮೈಸೂರಿನಲ್ಲಿ ಯುವ ಉದ್ಯಮಿ ಆತ್ಮಹತ್ಯೆಗೆ ಶರಣು
ಮೈಸೂರು, ಆಗಸ್ಟ್ 12: ಕೊರೊನಾ ಸೋಂಕಿನ ಪರಿಣಾಮದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ, ವ್ಯವಹಾರದಲ್ಲಿ ನಷ್ಟ ಅನುಭವಿಸಿದ ರಿಯಲ್ ಎಸ್ಟೇಟ್ ಯುವ ಉದ್ಯಮಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದಿದೆ.
ನೇಣಿಗೆ ಶರಣಾದ ಯುವ ಉದ್ಯಮಿಯನ್ನು ಸರಸ್ವತಿಪುರಂನ ರಾಘವೇಂದ್ರ (36) ಎನ್ನಲಾಗಿದೆ. ಇವರು ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಆದರೆ ಕಳೆದ ಕೆಲ ತಿಂಗಳಿನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ವ್ಯವಹಾರದಲ್ಲಿ ನಷ್ಟ ಅನುನಭಸಿದ್ದರು. ತೀವ್ರ ಆರ್ಥಿಕ ಮುಗ್ಗಟ್ಟನ್ನು ಅನುಭವಿಸುತಿದ್ದರು. ಇದರಿಂದ ಮನನೊಂದು ಮಂಗಳವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಮಹಡಿಯ ಮೇಲಿನ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಸರಸ್ವತಿಪುರಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications