ಬೆಂಕಿ ಹಚ್ಚಿ ಯುವತಿಯ ಹತ್ಯೆ: ಮಹಿಳಾ ಸಂಘಟನೆ ಪ್ರತಿಭಟನೆ

ಮೈಸೂರು, ನವೆಂಬರ್ 9: ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕಲ್ಲೂರು ಎಂಬಲ್ಲಿ ಭಾನುವಾರ (ನ.8) ಯುವತಿಯೊಬ್ಬಳಿಗೆ ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆಯನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ತೀವ್ರವಾಗಿ ಖಂಡಿಸಿದೆ.

ಸೋಮವಾರದಂದು ಮೈಸೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಸಂಘಟನೆ ಪ್ರತಿಭಟನೆ ನಡೆಸಿದ್ದು, ಪಿರಿಯಾಪಟ್ಟಣದ ಕಲ್ಲೂರು ರಸ್ತೆಯಲ್ಲಿ ಉರಿಯುತ್ತಿರುವ ಸ್ಥಿತಿಯಲ್ಲಿ ಯುವತಿ ಪತ್ತೆಯಾಗಿದ್ದು ಖಂಡನೀಯವೆಂದರು.

ಕೊಲೆ ಮಾಡಿ ನಂತರ ಗುರುತು ಸಿಗಬಾರದೆಂದು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿರುವ ಶಂಕೆಯಿದೆ. ದೇಶದಲ್ಲಿ ಮಹಿಳೆಯರ ಮೇಲಿನ ಇಂತಹ ದೌರ್ಜನ್ಯ, ಕೊಲೆ ದಿನೇ ದಿನೇ ಹೆಚ್ಚುತ್ತಿದ್ದು, ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.

Young Woman Killed: Womens Organization Protest In Mysuru

ನಿತ್ಯವೂ ಮಾಧ್ಯಮಗಳಲ್ಲಿ ಪ್ರಸಾರವಾಗುವ ಅಶ್ಲೀಲತೆ ಹಾಗೂ ಮಾದಕ ವಸ್ತುಗಳೇ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗಿದೆ. ಸರ್ಕಾರ ಕೂಡಲೇ ಕೂಡಲೇ ಇದೆಲ್ಲವನ್ನು ನಿಷೇಧಿಸಬೇಕು. ಈ ಕೃತ್ಯದ ಕುರಿತು ಆರೋಪಿಗಳನ್ನು ಬಂಧಿಸಲು ವಿಶೇಷ ಪೊಲೀಸ್‌ ತಂಡ ರಚಿಸಿ ಕೂಡಲೇ ಬಂಧಿಸಿ ನ್ಯಾಯಾಂಗಕ್ಕೆ ಒಪ್ಪಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+