ಟಿ.ನರಸೀಪುರ: ಹನುಮ ಜಯಂತಿ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನ ಬರ್ಬರ ಹತ್ಯೆ, ಇಬ್ಬರ ಬಂಧನ
ಮೈಸೂರು, ಜುಲೈ, 10: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ಮಾಡುವ ವೇಳೆ ಗುಂಪು ಘರ್ಷಣೆ ನಡೆದಿದೆ. ಇದೇ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಟಿ.ನರಸೀಪುರ ಪಟ್ಟಣದಲ್ಲಿ ಹನುಮಜಯಂತಿಯನ್ನು ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಬಳಿಕ ಪಟ್ಟಣದ ಹೊರವಲಯದಲ್ಲಿ ಶ್ರೀರಾಂಪುರ ಕಾಲೋನಿ ನಿವಾಸಿ ವೇಣುಗೋಪಾಲ್ ನಾಯಕ್ (32) ಎಂಬುವವರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಟ ಪುನೀತ್ ರಾಜ್‌ಕುಮಾರ್ ಮತ್ತು ಹನುಮಾನ್ ಪೋಸ್ಟರ್‌ಗಳ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ವಾದವು ಬ್ರಿಗೇಡ್ ಮೆರವಣಿಗೆಯ ಸಮಯದಲ್ಲಿ ಪ್ರಾರಂಭವಾಗಿದ್ದು, ಈ ವೇಳೆ ವೇಣುಗೋಪಾಲ್ ನಾಯಕ್‌ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ ಮತ್ತು ಸಂದೇಶ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
Manikanta and Sandesh are two people arrested in #YuvaBrigade worker Venugopal Nayak stabbing case in Narasipura.They had an altercation over actor #PuneetRajkumar & #Hanuman posters. During procession by brigade arguement started. However,later, they stabbed Naik inform cops. pic.twitter.com/XzkAOtg6sv
— Imran Khan (@KeypadGuerilla) July 10, 2023












Click it and Unblock the Notifications