ಈ ಬಾರಿ ಮರಳಿ ಬಂದಿದೆ ಯುವ ದಸರಾ!
ಮೈಸೂರು, ಸೆ.22 : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವು ದಿನಗಳು ಬಾಕಿ ಉಳಿದಿವೆ. ಸಂತಸದ ಸುದ್ದಿ ಎಂದರೆ, ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಯುವ ದಸರಾ ಈ ಬಾರಿ ನಡೆಯಲಿದೆ. ಇದಕ್ಕಾಗಿ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿದ್ದು, ದಸರಾಕ್ಕೆ ಆಗಮಿಸುವ ಅತಿಥಿಗಳ ಪಟ್ಟಿ ಸಿದ್ಧಗೊಂಡಿದೆ.
ಅ.7ರಿಂದ 12ರವರೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಆಯೀಜಿಸಲಾಗಿದೆ. ಗಾಯಕರಾದ ಸೋನು ನಿಗಮ್, ಶಾನ್, ಬೇಬಿ ಅಂಜನಾ, ಸುನಿಧಿ ಚೌಹಾಣ್ ಸೇರಿದಂತೆ ಮತ್ತಿತರು ಯುವ ದಸರಾದಲ್ಲಿ ಗಾನಸುಧೆ ಹರಿಸಲಿದ್ದಾರೆ.

ಅ.7ರಂದು ನಟ ಪುನೀತ್ ರಾಜ್ ಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಯವ ದಸರಾಕ್ಕೆ ಚಾಲನೆ ನೀಡಲಿದ್ದಾರೆ. ಅ.7ರಿಂದ 12ರವರೆಗೆ ಆರು ದಿನಗಳ ಕಾಲ ನಾನಾ ಗಾಯಕರು ಯುವ ದಸರಾದಲ್ಲಿ ಭಾಗವಹಿಸಲಿದ್ದು, ದಸರಾಕ್ಕೆ ಮತ್ತಷ್ಟು ರಂಗು ತುಂಬಲಿದ್ದಾರೆ.
ಈ ಬಾರಿಯ ಯುವ ದಸರಾದಲ್ಲಿ ಶಾನ್, ಸುನಿಧಿ ಚೌಹಾಣ್, ವಿಜಯ್ ಪ್ರಕಾಶ್, ಸುಕ್ವೀಂದರ್ ಸಿಂಗ್, ಇಂಡಿಯನ್ ಐಡಲ್ ವಿಜೇತೆ ಅಂಜನಾ, ಕೈಲಾಶ್ ಕೇರ್, ಸೋನು ನಿಗಮ್ ಹಾಗೂ ಡ್ರಮ್ಸ್ ಕಲಾವಿದ ಶಿವಮಣಿ ಇತರ ಕಲಾವಿದರು ಭಾಗವಹಿಸಲಿದ್ದಾರೆ.
28 ಲಕ್ಷ ಸಂಭಾವನೆ : ಯುವ ದಸರಾದಲ್ಲಿ ಎರಡು ತಾಸಿನ ಕಾರ್ಯಕ್ರಮ ನೀಡಲು ಸೋನು ನಿಗಮ್ 28 ಲಕ್ಷ ರೂ.ಸಂಭಾವನೆ ಪಡೆಯಲಿದ್ದಾರೆ. ಅ.12ರಂದು ಕೊನೆಯ ದಿನ ಸೋನು ನಿಗಮ್ ಕಾರ್ಯಕ್ರಮ ನೀಡಲಿದ್ದು, ಅವರಿಗೆ 28 ಲಕ್ಷ ಸಂಭಾವನೆ ನೀಡಲಾಗುತ್ತದೆ ಎಂದು ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಂ.ಎನ್.ನಟರಾಜ್ ಹೇಳಿದ್ದಾರೆ.
ಕಳೆದ ವರ್ಷ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಯುವ ದಸರಾ ರದ್ದುಗೊಳಿಸಲಾಗಿತ್ತು. ಈ ಬಾರ ರಾಜ್ಯದಲ್ಲಿ ಉತ್ತಮ ಮಳೆ ಸುರಿದು ಜನರು ಸಂತಸಗೊಂಡಿದ್ದಾರೆ. ಸಿಎಂ ತಮ್ಮ ತವರು ಜಿಲ್ಲೆಯ ದಸರಾ ಉತ್ಸವವನ್ನು ವಿಜೃಭಂಣೆಯಿಂದ ನಡೆಸಲು ಮುಂದಾಗಿದ್ದಾರೆ. ಆದ್ದರಿಂದ ಯುವ ದಸರಾವನ್ನು ಪುನಃ ಪ್ರಾರಂಭಿಸಲಾಗಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications