• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರತದ ತ್ರಿವರ್ಣ ಧ್ವಜ ಹಿಡಿಯುವುದು ಹೆಮ್ಮೆಯ ವಿಷಯ: ಯಶ್

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಆಗಸ್ಟ್‌ 11: "ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಡೆಯುತ್ತಿರುವ ಹರ್‌ ಘರ್‌ ತಿರಂಗ ಅಭಿಯಾನದಲ್ಲಿ ಭಾರತ ತ್ರಿವರ್ಣ ಧ್ವಜವನ್ನು ಹಿಡಿಯುವ ಗೌರವ ಸಿಕ್ಕಿರುವುದಕ್ಕೆ ತುಂಬಾ ಹೆಮ್ಮೆ ಅನ್ನಿಸುತ್ತಿದೆ. ಅದರಲ್ಲೂ ಈ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯುತ್ತಿರುವುದಕ್ಕೆ ಖುಷಿಯಾಗುತ್ತಿದೆ" ಎಂದು ಕನ್ನಡ ಚಲನಚಿತ್ರ ನಟ ಯಶ್ ತಿಳಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕರ್ನಾಟಕ ಸರಕಾರ ಹಾಗೂ ಮೈಸೂರು ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಿದ್ದ ಯುವ ಜನ ಮಹೋತ್ಸವ ಕಾರ್ಯಕ್ರಮದಲ್ಲಿ ಯಶ್‌ ಭಾಗವಹಿಸಿದ್ದರು.

ಮೈಸೂರು ದಸರಾ ಸಂಭ್ರಮ: ತೂಕ ಪರೀಕ್ಷೆಯಲ್ಲಿ ಯಾವ ಆನೆ ಬಲಶಾಲಿ?ಮೈಸೂರು ದಸರಾ ಸಂಭ್ರಮ: ತೂಕ ಪರೀಕ್ಷೆಯಲ್ಲಿ ಯಾವ ಆನೆ ಬಲಶಾಲಿ?

ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, "ಮೈಸೂರು ನಮ್ಮೂರು. ಇಲ್ಲಿನ ಪಡುವಾರಹಳ್ಳಿ, ಕಾಳಿದಾಸ ರಸ್ತೆ ಹಾಗೂ ಗಂಗೋತ್ರಿಯಲ್ಲಿ ಓಡಾಡಿದ್ದೇನೆ. ನಮ್ಮೂರಿನಲ್ಲಿ ದೇಶದ ಹೆಮ್ಮೆಯ ಧ್ವಜ ಹಿಡಿಯುವ ಕಾರ್ಯಕ್ರಮ ಆಯೋಜಿಸಿರುವುದರಿಂದ ಬಹಳ ಹೆಮ್ಮೆಯಿಂದ ಬಂದಿದ್ದೇನೆ" ಎಂದರು.

"ವಿದ್ಯಾರ್ಥಿ ದಿಸೆಯಲ್ಲಿ ನಾನು ತಂದೆ ತಾಯಿ ಖುಷಿಯಾಗುವಂತೆ ಇರಲಿಲ್ಲ. ಒಂದು ಸಣ್ಣ ಬದಲಾವಣೆ ಜೀವನದಲ್ಲಿ ಸಾಕಷ್ಟು ಬದಲಾವಣೆ ತರುತ್ತದೆ. ಅದಕ್ಕೆ ನಾನು ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಆದರೆ ವೈಯಕ್ತಿಕವಾಗಿ ನಾನೇನು ಹೆಚ್ಚು ಬದಲಾಗಿಲ್ಲ. ಮೊದಲು ಹೇಗಿದ್ದೆನೋ ಈಗಲೂ ಅದೇ ರೀತಿ ಇದ್ದೇನೆ" ಎಂದರು.

"ನಾವೀಗ ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಮಾಡುತ್ತಿದ್ದೇವೆ. ಪ್ರತಿಯೊಬ್ಬರೂ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸದುಪಯೋಗ ಮಾಡಿಕೊಳ್ಳಬೇಕು. ಎಲ್ಲವನ್ನು ಜನರ ಮನೆ ಮುಂದೆ ತರಲು ಸರಕಾರಕ್ಕೂ ಕಷ್ಟಸಾಧ್ಯ. ಪ್ರತಿಯೊಬ್ಬರೂ ಜೀವನದಲ್ಲಿ ತಮಾಷೆ ಮಾಡ್ತಾ ಇರಿ, ಮಜಾ ಮಾಡ್ಕೊಂಡಿರಿ, ನಗು ನಗುತ್ತಾ ಇರಿ. ಸಂತಸದ ಯಾವುದೇ ಅವಕಾಶವನ್ನು ಕಳೆದುಕೊಳ್ಳಬೇಡಿ" ಎಂದು ಸಲಹೆ ನೀಡಿದರು.

ನಟ ಯಶ್ ವೇದಿಕೆ ಏರುತ್ತಿದ್ದಂತೆ ವಿದ್ಯಾರ್ಥಿ ಸಮೂಹ ಶಿಳ್ಳೆ, ಚಪ್ಪಾಳೆ ತಟ್ಟಿ ತಮ್ಮ ಅಭಿಮಾನ ವ್ಯಕ್ತಪಡಿಸಿದರು. ಯಾರೇ ಅತಿಥಿ ಭಾಷಣಕ್ಕೆ ನಿಂತರೂ ರಾಕಿ.. ರಾಕಿ ಎಂಬ ಘೋಷಣೆ ಕೂಗುತ್ತಿದ್ದರು. ವಿದ್ಯಾರ್ಥಿಗಳ ಉತ್ಸಾಹದಿಂದ ಪ್ರೇರೇಪಿತರಾದ ಸಿಎಂ ಬಸವರಾಜ ಬೊಮ್ಮಾಯಿ ಕೂಡ ತಮ್ಮ ಭಾಷಣದ ಮಧ್ಯೆ ಯಶ್‌ರನ್ನು ಹೊಗಳಿದರು.

Yuvajana Mahotsav Youth Flocked to See the rocking star Yash in Mysuru

"ಯಶ್ ಕನ್ನಡ ಚಿತ್ರರಂಗದ ರಾಕಿಂಗ್ ಸ್ಟಾರ್ ಮಾತ್ರವಲ್ಲ. ಅವರು ಯುವಕರ ಐಕಾನ್. ಕನ್ನಡ ಚಿತ್ರರಂಗ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗ ಅವರ ಕಡೆ ತಿರುಗಿ ನೋಡಿದೆ. ಕೆಜಿಎಫ್‌ 1, ಕೆಜಿಎಫ್‌ 2 ಚಿತ್ರಗಳ ಯಶಸ್ಸಿನ ಮೂಲಕ ಇಡೀ ದೇಶಕ್ಕೆ ಅವರು ರಾಕಿಂಗ್ ಸ್ಟಾರ್ ಆಗಿದ್ದಾರೆ. ಕನ್ನಡ, ಕನ್ನಡತನವನ್ನು ಇಡೀ ದೇಶದಾದ್ಯಂತ ಯಶ್ ಪಸರಿಸಿದ್ದಾರೆ. ಅವರಂತೆ ನೀವು ಆಗಬೇಕು. ಆತ್ಮವಿಶ್ವಾಸ ಇದ್ದರೆ ಯಾರು ಏನು ಬೇಕಾದರೂ ಆಗಬಹುದು" ಎಂದರು.

"ಇಂದು ನಮ್ಮ ಕೈಲಿರುವ ಧ್ವಜಗಳು ನಿಮ್ಮ ಹಾಸ್ಟೆಲ್‌ಗಳ ಮೇಲೆ, ಮನೆಗಳ ಮೇಲೆ ಹಾರಿಸಬೇಕು. ಸ್ವತಂತ್ರ ನಮ್ಮದು, ದೇಶ ನಮ್ಮದು, ಇದರ ಭವಿಷ್ಯ ನಮ್ಮ ಜವಾಬ್ದಾರಿ. ಯಶ್ ಅವರು ಯುವಕರ ಐಕಾನ್. ಯುವಕರು ಹಾಗೂ ಯುವತಿಯರ ಪ್ರತಿನಿಧಿ. ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ್ದಾರೆ. ಸಿನಿಮಾ ಅಷ್ಟೇ ಅಲ್ಲ. ಸ್ಟಾರ್ಟ್ ಅಪ್ ಕೂಡ ಮಾಡಿದ್ದಾರೆ. ಅವರ ಯಶ್ ಹೆಸರಿನಲ್ಲಿ ಯಶಸ್ಸು ಇದೆ. ಹೆಸರಿಗೆ ತಕ್ಕ ಹಾಗೆ ಯಶಸ್ವಿಯಾಗಿದ್ದಾರೆ. ನೀವು ಕೂಡ ನಿಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು. ಸ್ವಾಮಿ ವಿವೇಕಾನಂದರು ನಮಗೆ ಪ್ರೇರಣೆ. ನಿಮ್ಮ ಮನಸ್ಸಿನಲ್ಲಿ ಗಟ್ಟಿಯಾಗಿ ತೀರ್ಮಾನ ಮಾಡಿ ಸಾಧಿಸುವ ಛಲವಿದ್ದರೆ ಖಂಡಿತ ನಿಮ್ಮ ಮನೆಯ ಬಾಗಿಲಿಗೆ ಯಶಸ್ಸು ಬರಲಿದೆ. ಆತ್ಮವಿಶ್ವಾಸವಿದ್ದಲ್ಲಿ ಜಗತ್ತನ್ನೇ ಗೆಲ್ಲಬಹುದು" ಎಂದು ತಿಳಿಸಿದರು.

ಇದಕ್ಕೂ ಮುನ್ನ ಯಶ್ ಬೆಂಗಳೂರಿನಿಂದ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಒಟ್ಟಿಗೆ ಹೆಲಿಕಾಪ್ಟರ್‌ನಲ್ಲಿ ಒಟ್ಟಿಗೆ ಮೈಸೂರಿಗೆ ಬಂದರು. ವಿಮಾನ ನಿಲ್ದಾಣದಲ್ಲೂ ಸಿಎಂ ಜೊತೆಗೆ ಮಹಾರಾಜ ಮೈದಾನಕ್ಕೆ ಆಗಮಿಸಿದರು.

English summary
CM Basavaraj Bommai along with actor Yash attended Yuvajanotsava was organized at the Maharaja College grounds at Mysuru. Youths stormed to the grounds for seeing Actor Yash,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X