ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ; ಬಿಜೆಪಿ, ಜೆಡಿಎಸ್ ಮ್ಯಾಚ್ ಫಿಕ್ಸಿಂಗ್ ಬಿಚ್ಚಿಟ್ಟ ಜಮೀರ್!

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 24; " ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಮ್ಯಾಚ್‌ ಫಿಕ್ಸಿಂಗ್ ಮಾಡಿಕೊಂಡಿದೆ" ಎಂದು ಕಾಂಗ್ರೆಸ್ ನಾಯಕ, ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ ಟೀಕಿಸಿದರು.

ಬುಧವಾರ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ವಿಧಾನ‌ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಕೇವಲ 7 ಸ್ಥಾನದಲ್ಲಿ ಸ್ಪರ್ಧಿಸಿರುವುದನ್ನು ಗಮನಿಸಿದರೆ, ಜೆಡಿಎಸ್, ಬಿಜೆಪಿ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿರುವ ಸಾಧ್ಯತೆ ಇದೆ" ಎಂದರು.

"ಎಲ್ಲಾ 25 ಸ್ಥಾನದಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿ ಹಾಕಬೇಕಿತ್ತು. ಆದರೆ ಕೇವಲ 7 ಸ್ಥಾನದಲ್ಲಿ ಸ್ಪರ್ಧೆ ಮಾಡಿರುವುದು ಅನುಮಾನಸ್ಪದವಾಗಿ ಕಾಣುತ್ತಿದೆ. ಅವರಿಗೆ ಅಭ್ಯರ್ಥಿಗಳು ಇಲ್ಲವಾ?, ಅಭ್ಯರ್ಥಿ ಇಲ್ಲದಿದ್ದರೆ ಇಲ್ಲ ಅಂತ ಸ್ಪಷ್ಟಪಡಿಸಲಿ" ಎಂದು ಸವಾಲು ಹಾಕಿದರು.

ಪರಿಷತ್ ಫೈಟ್; ಕುಟುಂಬ ರಾಜಕೀಯದ ಬಗ್ಗೆ ಬಿಜೆಪಿ ಟ್ವೀಟ್! ಪರಿಷತ್ ಫೈಟ್; ಕುಟುಂಬ ರಾಜಕೀಯದ ಬಗ್ಗೆ ಬಿಜೆಪಿ ಟ್ವೀಟ್!

Zameer Ahmed Khan Comment Against BJP And JDS

"ಬಿಜೆಪಿಗೆ ಲಾಭ ಮಾಡಿಕೊಡಲು ಜೆಡಿಎಸ್ ಈ ರೀತಿ ತಂತ್ರ ಮಾಡಿದೆ ಎಂದು ಅನ್ನಿಸುತ್ತಿದೆ. ಅಲ್ಲದೇ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸಿಂಗಲ್ ಡಿಜಿಟ್ ಪಡೆಯುತ್ತೆ ಜೆಡಿಎಸ್‌ಗೆ ಯಾವಾಗಲೂ ಕಾಂಗ್ರೆಸ್‌ ಟಾರ್ಗೆಟ್ ಆಗಿದ್ದು, ಹಳೇ ಮೈಸೂರು ಭಾಗದಲ್ಲೂ ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣವಿದೆ" ಎಂದು ಹೇಳಿದರು.

ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ನಮ್ಮ ಸಂಬಂಧ ಕೆಡುವುದಿಲ್ಲ; ತಮ್ಮ ಹಾಗೂ ಸಿದ್ದರಾಮಯ್ಯ ನಡುವಿನ ಸಂಬಂಧದ ಕುರಿತು ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್ ಖಾನ್, "ನನ್ನ ಹಾಗೂ ಸಿದ್ದರಾಮಯ್ಯ ಸಂಬಂಧ ಸಾಯುವವರೆಗು ಕೆಡುವುದಿಲ್ಲ, ಕೆಡಲು ಸಾಧ್ಯವೂ ಇಲ್ಲ" ಎಂದರು.

ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು 1,743 ಕೋಟಿ ಆಸ್ತಿ ಒಡೆಯ!ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು 1,743 ಕೋಟಿ ಆಸ್ತಿ ಒಡೆಯ!

"ಅಂದು ಸಿದ್ದರಾಮಯ್ಯ ಭಾಷಣಕ್ಕೆ ನಮ್ಮ ಬೆಂಬಲಿಗರು ಅಡ್ಡಿ ಮಾಡಿಲ್ಲ. ಸಿದ್ದರಾಮಯ್ಯ ಭಾಷಣ ಮೊಟಕುಗೊಳಿಸಿಲ್ಲ. ಪುನೀತ್ ರಾಜ್‌ಕುಮಾರ್ ಕಾರ್ಯಕ್ರಮಕ್ಕೆ ಹೋಗಬೇಕಿದ್ದ ಕಾರಣ 5 ನಿಮಿಷ ಮಾತನಾಡಿ ಹೋಗಿದ್ದಾರೆ. ನನ್ನ ಅನುಪಸ್ಥಿತಿಯಲ್ಲಿ ನನ್ನ ಅಭಿಮಾನಿಗಳು ಜೈಕಾರ ಕೂಗಿದ್ದು ಕಂಡು ಸಿದ್ದರಾಮಯ್ಯ ಖುಷಿಯಾಗಿದ್ದು, ಈ ಬಗ್ಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಸಿದ್ದರಾಮಯ್ಯ ಈ ರೀತಿ ಹೊಟ್ಟೆ ಕಿಚ್ಚುಪಡುವ ಮನುಷ್ಯ ಅಲ್ಲ" ಎಂದು ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಮಳೆ ಅವಾಂತರ ವಿಚಾರದ ಬಗ್ಗೆ ಮಾತನಾಡಿದ ಅವರು, "ಸಿಎಂ ನೆಪಮಾತ್ರಕ್ಕೆ ನಗರ ಪ್ರದಕ್ಷಿಣೆ ಮಾಡಿದ್ದಾರೆ ಹೊರತು, ಜನರ ಸಂಕಷ್ಟ ಕೇಳಿಲ್ಲ. ನೆರೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಪರಿಹಾರ ಘೋಷಣೆ ಮಾಡಿಲ್ಲ. ನಿನ್ನೆ ಸಿಎಂ ನೆಪ‌ಮಾತ್ರಕ್ಕೆ ಕೆಲವು ರಸ್ತೆಗೆ ಹೋಗಿ ಬಂದಿದ್ದಾರೆ. ಇದರಿಂದ ಯಾವ ಪ್ರಯೋಜನ ಇಲ್ಲ" ಎಂದರು.

English summary
Match fixing between JD(S) and BJP in legislative council election alleged Congress leader Zameer Ahmed Khan.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X