ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೇರಳದಲ್ಲಿ ಝೀಕಾ ವೈರಸ್: ಬಾವಲಿ ಚೆಕ್‌ಪೋಸ್ಟ್‌ನಲ್ಲಿ ತೀವ್ರ ತಪಾಸಣೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 11; ಕೊರೊನಾ ಆತಂಕದಲ್ಲಿ ಕಾಲ ಕಳೆಯುವ ವೇಳೆಯಲ್ಲಿ ಕೇರಳದಲ್ಲಿ ಝೀಕಾ ವೈರಸ್ ಕಾಣಿಸಿಕೊಂಡಿರುವುದು ಜನರಲ್ಲಿ ಭಯವನ್ನುಂಟು ಮಾಡಿದೆ. ಹೀಗಾಗಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಕೇರಳದಿಂದ ರಾಜ್ಯಕ್ಕೆ ಆಗಮಿಸುವವರ ತಪಾಸಣೆ ನಡೆಸಲಾಗುತ್ತಿದೆ.

ಮೈಸೂರು ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ಗಡಿಭಾಗವಾದ ಹೆಚ್. ಡಿ. ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಆರೋಗ್ಯ ಇಲಾಖೆ ಈಗಾಗಲೇ ಹದ್ದಿನ ಕಣ್ಣು ನೆಟ್ಟಿದ್ದು, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ತಪಾಸಣೆ ಮಾಡಲಾಗುತ್ತಿದೆ.

ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ, ರಾಜ್ಯದಲ್ಲೂ ಆತಂಕ'ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ, ರಾಜ್ಯದಲ್ಲೂ ಆತಂಕ'

ಕೇರಳದಿಂದ ಬರುವ ವಾಹನಗಳನ್ನು ಪರಿಶೀಲಿಸಿ ತಪಾಸಣೆ ನಡೆಸಿ, ಪ್ರಯಾಣಿಕರ RTPCR ನೆಗೆಟಿವ್ ಪರೀಕ್ಷಾ ವರದಿಯನ್ನು ಪರಿಶೀಲಿಸಲಾಗುತ್ತಿದೆ. ಸದ್ಯ ಬಸ್ ಸಂಚಾರಕ್ಕೆ ಅವಕಾಶ ಮಾಡಿ ಕೊಡದ ಕಾರಣದಿಂದ ವಾಹನಗಳಲ್ಲಿ ತೆರಳುವ ಪ್ರಯಾಣಿಕರನ್ನು ಮಾತ್ರ ತಪಾಸಣೆ ಮಾಡಲಾಗುತ್ತಿದ್ದು, ಎರಡು ಬಾರಿಯ ಲಸಿಕೆಯನ್ನು ಪಡೆದವರಿಗೆ ಹಾಗೂ ಎರಡು ವರ್ಷ ಒಳಪಟ್ಟ ಮಕ್ಕಳಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.

ಕೊರೊನಾ ನಡುವೆ, ಏನಿದು ಝಿಕಾ ವೈರಸ್? ಏನಿದರ ಲಕ್ಷಣ?ಕೊರೊನಾ ನಡುವೆ, ಏನಿದು ಝಿಕಾ ವೈರಸ್? ಏನಿದರ ಲಕ್ಷಣ?

Zika Virus Cases In Kerala Checking All Vehicles In Bavali Check Post

ಸದ್ಯ ಪ್ರವಾಸಿಗರನ್ನು ಹೊರತು ಪಡಿಸಿ ತುರ್ತು ಇರುವವರು ಮಾತ್ರ ಜಿಲ್ಲೆಯೊಳಗೆ ಬರುತ್ತಿದ್ದಾರೆ. ಉಳಿದಂತೆ ದಿನನಿತ್ಯ ಅಗತ್ಯ ವಸ್ತುಗಳನ್ನು ಸಾಗಾಟ ಮಾಡುವ ಗೂಡ್ಸ್ ಗಾಡಿಗಳು ಸಂಚರಿಸುತ್ತಿದ್ದು, ಎಲ್ಲ ವಾಹನಗಳ ಚಾಲಕರನ್ನು ತಪಾಸಣೆ ಮಾಡಿ ಕೊರೊನಾ ನೆಗೆಟಿವ್ ವರದಿಯ ದಾಖಲಾತಿ ಇದ್ದರೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ಅನಗತ್ಯವಾಗಿ ಗಡಿಯಲ್ಲಿ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಝಿಕಾ ವೈರಸ್ ಭೀತಿ; ರಾಜ್ಯದ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರಝಿಕಾ ವೈರಸ್ ಭೀತಿ; ರಾಜ್ಯದ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಝೀಕಾ ಮಾತ್ರವಲ್ಲದೆ ಕೊರೊನಾ ಸೋಂಕು ಈ ಹಿಂದೆ ತಗ್ಗಿತ್ತಾದರೂ ಇದೀಗ ಪ್ರಮಾಣ ಹೆಚ್ಚಳವಾಗುತ್ತಿದೆ. ಹೀಗಾಗಿ ಬಹಳ ಎಚ್ಚರಿಕೆ ವಹಿಸಲಾಗುತ್ತಿದೆ. ತಾಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ವಾಹನಗಳ ತಪಾಸಣೆ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

Zika Virus Cases In Kerala Checking All Vehicles In Bavali Check Post

Recommended Video

ಭಾರತ-ಶ್ರೀಲಂಕಾ ಏಕದಿನ ಸರಣಿಯ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆ | Oneindia Kannada

ಕೋವಿಡ್ 19 ಕಾರ್ಯಪಡೆಯ ಸದಸ್ಯರಾದ ಉಮೇಶ್, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಸೌಮ್ಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಝೀಕಾ ದತ್ತ ತೀವ್ರ ನಿಗಾವಹಿಸಿದ್ದಾರೆ.

English summary
One more case of the Zika virus confirmed in Kerala. Total 15 cases confirmed in the state. Karnataka checking all vehicles from Kerala at Bavali check post, Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X