ರಾಷ್ಟ್ರಪತಿ ಭವನದ 100ಕ್ಕೂ ಅಧಿಕ ಸಿಬ್ಬಂದಿಗೆ ಕ್ವಾರಂಟೈನ್

ನವದೆಹಲಿ, ಏಪ್ರಿಲ್ 21 : ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದ 100ಕ್ಕೂ ಅಧಿಕ ಸಿಬ್ಬಂದಿಗಳಿಗೆ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ. ನಾಲ್ಕು ದಿನಗಳ ಹಿಂದೆ ಇಲ್ಲಿನ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.

Recommended Video

      ತಿನ್ನೋಕೆ ಊಟ ಇಲ್ಲದೆ ಮಕ್ಕಳ ಮುಂದೆ ಕಣ್ಣೀರು ಹಾಕಿದ ತಾಯಿ..! Chikkamagaluru | C T Ravi

      ರಾಷ್ಟ್ರಪತಿ ಭವನದ ಸ್ವಚ್ಛತೆಯ ಕಾರ್ಯ ನಿರ್ವಹಣೆ ಮಾಡುವ ಸಿಬ್ಭಂದಿಗೆ ಕೊರೊನಾ ಸೋಂಕು ತಗುಲಿದೆ. ಇದರಿಂದಾಗಿ ಸ್ವಚ್ಛತೆಯ ಕೆಲಸ ಮಾಡುತ್ತಿದ್ದ ಎಲ್ಲರಿಗೂ ಕೇಂದ್ರ ದೆಹಲಿಯ ಪ್ರದೇಶದಲ್ಲಿ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಲಾಗಿದೆ.

      ಕಾರ್ಯದರ್ಶಿ ಹಂತದ ಅಧಿಕಾರಿಗಳು, ಅವರ ಕುಟುಂಬ ಸದಸ್ಯರಿಗೆ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ. ಒಬ್ಬ ಸಿಬ್ಬಂದಿ ಹೊರತುಪಡಿಸಿ ಉಳಿದವರಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

      100 People Of Rashtrapati Bhavan Complex In Quarantine

      ಸ್ವಚ್ಛತೆಯ ಕೆಲಸ ಮಾಡುತ್ತಿದ್ದ ಸಿಬ್ಬಂದಿ ವಾಸ ಮಾಡುತ್ತಿದ್ದ ಅಕ್ಕ-ಪಕ್ಕದ ಮನೆಯ 25 ಸದಸ್ಯರಿಗೆ ಕ್ವಾರಂಟೈನ್‌ನಲ್ಲಿರಲು ಸೂಚನೆ ನೀಡಲಾಗಿದೆ. ಭವನದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕಟ್ಟು ನಿಟ್ಟಿನ ಸೂಚನೆ ಕೊಡಲಾಗಿದೆ.

      ರಾಷ್ಟ್ರಪತಿಗಳ ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿಗಳಿಂದ ಹಿಡಿದು ಭದ್ರತೆ, ಸ್ವಚ್ಛತಾ ಸಿಬ್ಬಂದಿ ತನಕ ಹಲವಾರು ಸಿಬ್ಬಂದಿಗಳು ರಾಷ್ಟ್ರಪತಿ ಭವನದಲ್ಲಿ ಪ್ರತಿನಿತ್ಯ ಕಾರ್ಯ ನಿರ್ವಹಣೆ ಮಾಡುತ್ತಾರೆ. ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.

      ನವದೆಹಲಿಯಲ್ಲಿ ಇದುವರೆಗೂ 2081 ಕೊರೊನಾ ಪ್ರಕರಣಗಳು ದಾಖಲಾಗಿವೆ. 47 ಜನರು ಮೃತಪಟ್ಟಿದ್ದಾರೆ. ಮೇ 3ರ ತನಕ ಲಾಕ್ ಡೌನ್‌ ನಿಯಮದಲ್ಲಿ ಯಾವುದೇ ಸಡಿಲಿಕ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+