ಕಳೆದ 24 ಗಂಟೆಗಳಲ್ಲಿ ಆಪ್ ಗೆ ಲಕ್ಷ ಲಕ್ಷ ಜನರಿಂದ ಮಿಸ್ ಕಾಲ್!
Recommended Video
ನವದೆಹಲಿ, ಫೆಬ್ರವರಿ.13: ರಾಷ್ಟ್ರ ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಬಾರಿಸಿದ್ದೇ ಬಾರಿಸಿದ್ದು. ಆಪ್ ಜನಪ್ರಿಯತೆ ಮತ್ತಷ್ಟು ಹೆಚ್ಚಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 11 ಲಕ್ಷ ಜನರು ಆಪ್ ಗೆ ಸೇರ್ಪಡೆಗೊಂಡಿದ್ದಾರೆ.
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ರಾಷ್ಟ್ರ ನಿರ್ಮಾಣ ಚಳವಳಿಯನ್ನು ಆರಂಭಿಸಿದ್ದು, ಪಕ್ಷಕ್ಕೆ ಸೇರ್ಪಡೆಗೊಳ್ಳಲು ಬಯಸುವವರಿಗೆ ದೂರವಾಣಿ ಸಂಖ್ಯೆಯೊಂದನ್ನು ನೀಡಿದೆ. ಈ ಸಂಖ್ಯೆಗೆ ಲಕ್ಷ ಲಕ್ಷ ಜನರು ಮಿಸ್ಡ್ ಕಾಲ್ ನೀಡುವ ಮೂಲಕ ಪಕ್ಷಕ್ಕೆಸ ಸೇರ್ಪಡೆಗೊಂಡಿದ್ದಾರೆ.
ದೇಶಾದ್ಯಂತ ಈ ದೂರವಾಣಿ ಸಂಖ್ಯೆಯನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುವುದಕ್ಕೆ ಆಪ್ ತೀರ್ಮಾನಿಸಿದೆ. 'ಕರ್ತವ್ಯದ ರಾಜಕಾರಣ'ಕ್ಕಾಗಿ ಆಪ್ ಅಭಿಯಾನವನ್ನು ಆರಂಭಿಸಿದ್ದು, ಭಾರತದಾದ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ನವದೆಹಲಿಯಲ್ಲಿ ಆಪ್ ಜಯಭೇರಿ:
ನವದೆಹಲಿ ವಿಧಾನಸಭಾ ಚುನಾವಣೆಯ 70 ಕ್ಷೇತ್ರಗಳ ಪೈಕಿ ಆಮ್ ಆದ್ಮಿ ಪಕ್ಷವು 62 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಭರ್ಜರಿ ಗೆಲುವು ದಾಖಲಿಸಿದೆ. ಇನ್ನು, ಬಿಜೆಪಿ ಕೇವಲ 8 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ, ರಾಷ್ಟ್ರೀಯ ಪಕ್ಷ ಎನಿಸಿರುವ ಕಾಂಗ್ರೆಸ್ ಸತತ ಎರಡನೇ ಬಾರಿಯೂ ಶೂನ್ಯ ಸಾಧನೆ ಮಾಡಿದೆ.
ಈ ಬಾರಿ ನಡೆದ ದೆಹಲಿ ಚುನಾವಣೆಯಲ್ಲಿ ಬಿಜೆಪಿ ಹಿಂದೂ-ಮುಸ್ಲಿಂ ಅಸ್ತ್ರಗಳನ್ನೇ ಬಳಸಿಕೊಂಡು ಪ್ರಚಾರದ ಅಖಾಡಕ್ಕೆ ಧುಮುಕಿತು. ಇದನ್ನು ಹೊರತುಪಡಿಸಿ ಸಾರ್ವಜನಿಕರ ಸಮಸ್ಯೆಗಳು ಮತ್ತು ಮೂಲಭೂತ ಸೌಕರ್ಯಗಳ ಬಗ್ಗೆ ಸೊಲ್ಲೆತ್ತಲಿಲ್ಲ. ಆದರೆ, ಆಮ್ ಆದ್ಮಿ ಪಕ್ಷವು ಜನ ಸಾಮಾನ್ಯ ಸಮಸ್ಯೆಗಳು ಮತ್ತು ಮೂಲಭೂತ ಸೌಕರ್ಯಗಳನ್ನೇ ಮುಖ್ಯಧ್ಯೇಯವನ್ನಾಗಿ ಇಟ್ಟುಕೊಂಡು ಪ್ರಚಾರ ನಡೆಸಿತು. ಇದರ ಪರಿಣಾಮವೇ ರಾಷ್ಟ್ರ ರಾಜಧಾನಿಯ ಮತದಾರ ಮತ್ತೊಮ್ಮೆ ಆಪ್ ಕೈಗೆ ಅಧಿಕಾರದ ಚುಕ್ಕಾಣಿ ಕೊಟ್ಟಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications