ಬ್ರಿಟನ್‌ನಿಂದ ಬಂದಿಳಿದ 11 ಮಂದಿಗೆ ಕೊರೊನಾ ಪಾಸಿಟಿವ್, 50 ಜನರು ಕ್ವಾರಂಟೈನ್‌

ನವದೆಹಲಿ, ಡಿಸೆಂಬರ್ 24: ಬ್ರಿಟನ್‌ನಿಂದ ನಿನ್ನೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ 11 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಇನ್ನುಳಿದ 50 ಜನರನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಎಲ್ಲಾ ಪ್ರಯಾಣಿಕರ ಕೊರೊನಾವೈರಸ್ ಪರೀಕ್ಷೆಯನ್ನು ನಿರ್ವಹಿಸುತ್ತಿರುವ ಜಿನೆಸ್ಟ್ರಿಂಗ್ಸ್ ಡಯಾಗ್ನೋಸ್ಟಿಕ್ ಸೆಂಟರ್ ಸಂಸ್ಥಾಪಕ ಗೌರಿ ಅಗರ್ವಾಲ್ ಹೇಳಿಕೆ ಪ್ರಕಾರ ನಾಲ್ಕು ವಿಮಾನಗಳ 50 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

ಬ್ರಿಟನ್‌ನಲ್ಲಿ ಇತ್ತೀಚೆಗಷ್ಟೇ ಹೊಸ ಕೊರೊನಾವೈರಸ್ ರೂಪಾಂತರವು ಕಂಡುಬಂದ ಬಳಿಕ, ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರನ್ನು ಆಯಾ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್‌ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಈ ನಿರ್ದೇಶನದ ನಂತರ, ಒಟ್ಟು ನಾಲ್ಕು ಬ್ರಿಟನ್ ವಿಮಾನಗಳು ದೆಹಲಿಗೆ ಬಂದಿವೆ ಎಂದು ಅಗರ್ವಾಲ್ ಹೇಳಿದ್ದಾರೆ.

11 Passengers On 4 Flights From UK Test Covid-19 Positive At Delhi Airport

ಬ್ರಿಟನ್‌ನಿಂದ ಬಂದ ಪ್ರಯಾಣಿಕರಲ್ಲಿ ಒಂದೇ ಸಾಲಿನಲ್ಲಿ ಕುಳಿತವರು ಕೋವಿಡ್-19 ಪಾಸಿಟಿವ್ ಆಗಿದ್ದಾರೆ. ಹೀಗಾಗಿ ಅವರು ಕುಳಿತಿದ್ದ ಸೀಟುಗಳ ಮೂರು ಸಾಲು ಮುಂದೆ ಮತ್ತು ಮೂರು ಸಾಲು ಹಿಂದೆ ಕುಳಿತಿದ್ದ ಪ್ರಯಾಣಿಕರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+