Today's Update: ದೆಹಲಿ 1295 ಸೋಂಕು, ತಮಿಳುನಾಡು 1,149 ಕೇಸ್ ಪತ್ತೆ
ದೆಹಲಿ, ಮೇ 31: ದೇಶದ ಕೊರೊನಾ ವೈರಸ್ ಹಾಟ್‌ಸ್ಪಾಟ್ ರಾಜ್ಯ ತಮಿಳುನಾಡಿನಲ್ಲಿ ಹೊಸದಾಗಿ 1149 ಜನರಿಗೆ ಸೋಂಕು ದೃಢಪಟ್ಟಿದೆ. ಇಂದು ತಮಿಳುನಾಡಿನಲ್ಲಿ 13 ಜನರು ಮೃತಪಟ್ಟಿದ್ದಾರೆ.
ಈ ಮೂಲಕ ತಮಿಳುನಾಡಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22,333ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ 9400 ಕೇಸ್‌ಗಳು ಸಕ್ರಿಯವಾಗಿದೆ. 12757 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದುವರೆಗೂ ತಮಿಳುನಾಡಿನಲ್ಲಿ 173 ಮಂದಿ ಮೃತಪಟ್ಟಿದ್ದಾರೆ.
ದೆಹಲಿಯಲ್ಲಿ 1295 ಜನರಿಗೆ ಇಂದು ಹೊಸದಾಗಿ ಕೊವಿಡ್ ಸೋಂಕು ಅಂಟಿಕೊಂಡಿದೆ. ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19844ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಒಟ್ಟು 473 ಜನರು ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ 10,893 ಪ್ರಕರಣಗಳು ಸಕ್ರಿಯವಾಗಿದ್ದು, 8478 ಮಂದಿ ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ.
ಪಂಜಾಬ್‌ನಲ್ಲಿ ಇಂದು 30 ಜನರಿಗೆ ಸೋಂಕು ದೃಢವಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2263ಕ್ಕೆ ಏರಿದೆ.
ಚತ್ತೀಸ್‌ಗಡದಲ್ಲಿ ಹೊಸದಾಗಿ 2 ಕೊವಿಡ್ ಸೋಂಕು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು ಕೇಸ್‌ಗಳ ಸಂಖ್ಯೆ 293ಕ್ಕೆ ಏರಿಕೆಯಾಗಿದೆ.
ಪಶ್ಚಿಮ ಬಂಗಾಳದಲ್ಲಿ ಹೊಸದಾಗಿ 371 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,501ಕ್ಕೆ ಏರಿಕೆಯಾಗಿದೆ.












Click it and Unblock the Notifications