ನವದೆಹಲಿಯಲ್ಲಿ 961 ಮಂದಿಗೆ ಕೊವಿಡ್-19 ಸೋಂಕು, 1186 ಗುಣಮುಖ!

ನವದೆಹಲಿ, ಆಗಸ್ಟ್.02: ನೊವೆಲ್ ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಒಂದು ಹಂತದಲ್ಲಿ ಯಶಸ್ವಿಯಾದಂತೆ ತೋರುತ್ತಿದೆ.

ಕಳೆದ 24 ಗಂಟೆಗಳಲ್ಲಿನ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಅಂಕಿ-ಸಂಖ್ಯೆಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ 961 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ಖಾತ್ರಿಯಾಗಿದೆ. ಆದರೆ ಗುಣಮುಖ ಪ್ರಕರಣಗಳ ಸಂಖ್ಯೆ ಸೋಂಕಿತ ಪ್ರಕರಣಗಳಿಗಿಂತ ಹೆಚ್ಚಾಗಿದೆ.

ಒಂದೇ ದಿನ ನವದೆಹಲಿಯಲ್ಲಿ 1186 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 123317 ಮಂದಿ ಕೊವಿಡ್ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ 1,37,677 ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ ಕೇವಲ 10,356 ಸಕ್ರಿಯ ಪ್ರಕರಣಗಳಿರುವುದು ವರದಿಯಾಗಿದೆ.

1186 Coronavirus Recoverd Cases Reported in New Delhi Today, State Tally Rise to 123317

10.63 ಲಕ್ಷ ಜನರಿಗೆ ಕೊರೊನಾವೈರಸ್ ತಪಾಸಣೆ:

ನವದೆಹಲಿಯಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಹೆಚ್ಚಿಸಿರುವುದೇ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ಕಾರಣವಾಯಿತು ಎನ್ನಲಾಗುತ್ತಿದೆ. ಒಂದೇ ದಿನದಲ್ಲಿ 4289 ಜನರನ್ನು ಆರ್ ಟಿಪಿಸಿಆರ್, 8441 ಜನರನ್ನು ರಾಪಿಡ್ ಆಂಟಿಜೆನ್ ತಪಾಸಣೆಗೆ ಒಳಪಡಿಸಲಾಗಿತ್ತು. ಇದುವರೆಗೂ ನವದೆಹಲಿಯಲ್ಲಿ 10,63,669 ಜನರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+