ಮುಂಗಾರು ಅಧಿವೇಶನದ ವೇಳೆ ಅಶಿಸ್ತಿನ ವರ್ತನೆ: 12 ವಿಪಕ್ಷ ಸಂಸದರು ರಾಜ್ಯಸಭೆಯಿಂದ ಅಮಾನತು
ನವದೆಹಲಿ, ನವೆಂಬರ್ 29: ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಅಶಿಸ್ತಿನ ವರ್ತನೆ ತೋರಿದ ಹಾಗೂ ಸದನ ನಿಯಮ ಉಲ್ಲಂಘನೆ ಮಾಡಿದ ಆರೋಪದಲ್ಲಿ ಇಂದಿನಿಂದ ಆರಂಭವಾದ ಚಳಿಗಾಲದ ಅಧಿವೇಶನದ ಉಳಿದ ಅವಧಿಯಲ್ಲಿ ಹನ್ನೆರಡು ಮಂದಿ ವಿರೋಧ ಪಕ್ಷದ ಸಂಸದರನ್ನು ರಾಜ್ಯ ಸಭೆಯಿಂದ ಅಮಾನತು ಮಾಡಲಾಗಿದೆ.
ಮುಂಗಾರು ಅಧಿವೇಶನ ಆರಂಭ ಆಗುವುದಕ್ಕೂ ಒಂದು ದಿನದ ಮುಂದಷ್ಟೇ ಬಹಿರಂಗವಾಗಿದ್ದ ಪೆಗಾಸಸ್ ಹಗರಣದ ಸುದ್ದಿಯು ಮುಂಗಾರು ಅಧಿವೇಶನದಲ್ಲಿ ಭಾರೀ ಗದ್ದಲವನ್ನು ಸೃಷ್ಟಿ ಮಾಡಿದ್ದವು. ಇಸ್ರೇಲಿನ ಪೆಗಾಸಸ್ ತಂತ್ರಾಂಶವನ್ನು ಬಳಸಿ ಬೇಹುಗಾರಿಕೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿ ವಿರೋಧ ಪಕ್ಷಗಳು ಅಧಿವೇಶನದಲ್ಲಿ ಭಾರೀ ಕೂಲಹಲವನ್ನು ಎಬ್ಬಿಸಿದ್ದವು.
ರಾಜ್ಯಸಭೆಯಲ್ಲಿ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಕುರ್ಚಿಗಳನ್ನು ಎಳೆದಾಡಿ, ನಾಮಫಲಕಗಳನ್ನು ಪ್ರದರ್ಶಿಸುತ್ತಾ ಗದ್ದಲ ಸೃಷ್ಟಿಸಲಾಗಿತ್ತು. ಆ ಸಂದರ್ಭದಲ್ಲೇ ಹಲವಾರು ಮಂದಿ ಸಂಸದರನ್ನು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅಮಾನತು ಮಾಡಿದ್ದರು. ಮುಖ್ಯವಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಡೋಲಾ ಸೇನ್, ಮೊಹಮ್ಮದ್ ನಬೀಮುಲ್, ಅಬಿರ್ ರಂಜನ್ ಬಿಸ್ವಾಸ್, ಶಾಂತ ಛೆತ್ರಿ, ಅರ್ಪಿತಾ ಘೋಷ್, ಮೌಸಮ್ ನೂರ್ ಎಂಬ ಆರು ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಈಗ ಮುಂಗಾರು ಅಧಿವೇಶನದಲ್ಲಿ ಗದ್ದಲ ಎಬ್ಬಿಸಿದ ಆರೋಪದಲ್ಲಿ ಹನ್ನೆರಡು ಮಂದಿ ಸಂಸದರನ್ನು ಸಂಸತ್ತಿನ ಚಳಿಗಾಲದ ಅಧಿವೇಶನದಿಂದ ಅಮಾನತು ಮಾಡಲಾಗಿದೆ.

ಯಾರೆಲ್ಲಾ ಸಂಸದರು ಅಮಾನತು ಆಗಿದ್ದಾರೆ?
ಎಲಮರಮ್ ಕರೀಮ್ (ಸಿಪಿಎಂ), ಫುಲೋ ದೇವಿ ನೇತಮ್ (ಕಾಂಗ್ರೆಸ್), ಛಾಯಾ ವರ್ಮಾ (ಕಾಂಗ್ರೆಸ್), ರಿಪುನ್ ಬೋರಾ (ಕಾಂಗ್ರೆಸ್), ಬಿನೋಯ್ ವಿಸ್ವಾಮ್ (ಸಿಪಿಐ), ರಾಜಮಣಿ ಪಟೇಲ್ (ಕಾಂಗ್ರೆಸ್), ಡೋಲಾ ಸೇನ್ (ಟಿಎಂಸಿ), ಶಾಂತಾ ಛೆಟ್ರಿ (ಟಿಎಂಸಿ), ಸೈಯದ್ ನಾಸಿರ್ ಹುಸೇನ್ (ಕಾಂಗ್ರೆಸ್), ಪ್ರಿಯಾಂಕಾ ಚತುರ್ವೇದಿ (ಶಿವಸೇನಾ), ಅನಿಲ್ ದೇಸಾಯಿ (ಶಿವಸೇನಾ) ಮತ್ತು ಅಖಿಲೇಶ್ ಪ್ರಸಾದ್ ಸಿಂಗ್ (ಕಾಂಗ್ರೆಸ್).
ಅಧಿಕೃತ ಸೂಚನೆಯು ಏನು ಹೇಳುತ್ತದೆ?
"ಆಗಸ್ಟ್ 11 ರಂದು ಸದನದಲ್ಲಿ ಭದ್ರತಾ ಸಿಬ್ಬಂದಿಯ ಮೇಲೆ ಉದ್ಧೇಶಪೂರ್ವಕವಾಗಿ ದಾಳಿ ಮಾಡಲಾಗಿದೆ. ಕುರ್ಚಿಗಳನ್ನು ಎಳೆದಾಡಲಾಗಿದೆ. ಸದನದ ನಿಯಮವನ್ನು ಉಲ್ಲಂಘನೆ ಮಾಡಲಾಗಿದೆ. ಸದನದ ನಿಯಮಗಳ ಸಂಪೂರ್ಣ ದುರುಪಯೋಗವನ್ನು ತೀವ್ರವಾಗಿ ಖಂಡಿಸಲಾಗುವುದು. ದುರ್ನಡತೆ, ಅವಹೇಳನಕಾರಿ, ಅಶಿಸ್ತಿನ ಮತ್ತು ಹಿಂಸಾತ್ಮಕ ನಡವಳಿಕೆ ತೋರಿದ್ದನ್ನು ಖಂಡನೆ ಮಾಡಲಾಗುತ್ತದೆ," ಎಂದು ಉಲ್ಲೇಖ ಮಾಡಲಾಗಿದೆ.
ಮುಂಗಾರು ಅಧಿವೇಶನದಲ್ಲಿ ನಡೆದಿದ್ದು ಏನು?
ನವದೆಹಲಿಯಲ್ಲಿ 14 ವಿರೋಧ ಪಕ್ಷಗಳ ನಾಯಕರು ಇದೇ ಪೆಗಾಸಸ್ ಬಗ್ಗೆ ಚರ್ಚಿಸಿದ್ದು ಕೇಂದ್ರ ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಿದ್ದವು. ಪೆಗಾಸಸ್ ವಿಚಾರದಲ್ಲಿ ರಾಜ್ಯಸಭೆಯಲ್ಲಿ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಕುರ್ಚಿಗಳನ್ನು ಎಳೆದಾಡಿ, ನಾಮಫಲಕಗಳನ್ನು ಪ್ರದರ್ಶಿಸುತ್ತಾ ಗದ್ದಲ ಸೃಷ್ಟಿಸಲಾಗಿತ್ತು.
ಕಳೆದ ಜುಲೈ 23ರಂದು ರಾಜ್ಯಸಭೆಯ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯ ಸಂತಾನು ಸೇನ್ ಅಮಾನತುಗೊಂಡಿದ್ದರು. ರಾಜ್ಯಸಭೆಯಲ್ಲಿ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶ ಪೆಗಾಸಸ್ ಕುರಿತು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಉತ್ತರ ನೀಡುತ್ತಿದ್ದರು. ಈ ವೇಳೆ ಸಚಿವರ ಕೈಯಲ್ಲಿದ್ದ ಪತ್ರಗಳನ್ನು ಕಸಿದುಕೊಂಡ ಸಂಸದ ಸಂತಾನು ಸೇನ್ ಅದನ್ನು ಹರಿದು ಹಾಕಿದ್ದರು.
ಕಳೆದ ಜುಲೈ 19ರಿಂದ ಮುಂಗಾರು ಅಧಿವೇಶನ ಆರಂಭವಾಗಿದ್ದು, ಎರಡು ವಾರಗಳಲ್ಲಿ ಒಂದೇ ಒಂದು ದಿನ ಸುಗಮ ಕಲಾಪ ನಡೆದಿರಲಿಲ್ಲ. ಒಟ್ಟು 107 ಗಂಟೆಗಳಲ್ಲಿ ಕೇವಲ 18 ಗಂಟೆ ಮಾತ್ರ ಸಂಸತ್ ಕಲಾಪ ನಡೆದಿತ್ತು. ಇದರ ಹೊರತಾಗಿ ಸಂಸತ್ತಿನಲ್ಲಿ ನಡೆದ ಗದ್ದಲ ಗಲಾಟೆಯಿಂದ ದೇಶದ 133 ಕೋಟಿ ತೆರಿಗೆದಾರರ ಹಣ ವ್ಯರ್ಥವಾಗಿ ಪೋಲಾಗುತ್ತಿದೆ ಎಂದು ಸರ್ಕಾರವು ಆರೋಪ ಮಾಡಿದ್ದವು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications