• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

12 ವರ್ಷದ ಅಪ್ರಾಪ್ತೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

|
Google Oneindia Kannada News

ದೆಹಲಿ, ಆಗಸ್ಟ್ 6: 12 ವರ್ಷದ ಅಪ್ರಾಪ್ತೆ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸೆಗಿರುವ ಘಟನೆ ಬೆಳಕಿಗೆ ಬಂದಿದೆ ಎಂದು ಬುಧವಾರ ದೆಹಲಿ ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ದೆಹಲಿಯ ಪಾಸ್ಚಿಮ್ ವಿಹಾರ್ ಪ್ರದೇಶದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸಮಯದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಯಲಾಗಿದೆ ಹಾಗೂ ಆಕೆಯ ಮುಖ ಮತ್ತು ತಲೆಗೆ ಕತ್ತರಿಯಿಂದ ಇರಿಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೊರೊನಾ ಸೋಂಕಿತೆ ಮೇಲೆ ವೈದ್ಯನಿಂದ ಅತ್ಯಾಚಾರಕ್ಕೆ ಯತ್ನ!ಕೊರೊನಾ ಸೋಂಕಿತೆ ಮೇಲೆ ವೈದ್ಯನಿಂದ ಅತ್ಯಾಚಾರಕ್ಕೆ ಯತ್ನ!

ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಮೊದಲು ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲಿಸಲಾಗಿದೆ. ಸದ್ಯ, ಬಾಲಕಿಯ ಸ್ಥಿತಿಯೂ ಗಂಭೀರವಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೆರೆಹೊರೆಯವರನ್ನು ಪೊಲೀಸರು ಪ್ರಶ್ನಿಸುತ್ತಿದ್ದಾರೆ ಮತ್ತು ಆರೋಪಿಗಳನ್ನು ಗುರುತಿಸಲು ಹತ್ತಿರದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುತ್ತಿದ್ದಾರೆ ಎಂದು ತಿಳಿದಿದೆ.

ಹುಡುಗಿಯ ಪೋಷಕರು ಮತ್ತು ಸಹೋದರಿ ಹತ್ತಿರದ ಗಾರ್ಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಬಾಲಕಿ ಒಬ್ಬಳೆ ಮನೆಯಲ್ಲಿ ಇರುವ ಬಗ್ಗೆ ತಿಳಿದಿರುವ ವ್ಯಕ್ತಿಯಿಂದ ಇಂತಹ ಕೃತ್ಯ ನಡೆದಿರಬಹುದು. ಈ ಕುಟುಂಬವು ವಾಸಿಸುವ ಕಟ್ಟಡದಲ್ಲಿ ಹೆಚ್ಚಾಗಿ ಕಾರ್ಖಾನೆಯ ಕಾರ್ಮಿಕರು ವಾಸವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಷಕಷರ ದೂರಿನ ಅನ್ವಯ ಐಪಿಸಿ ಸೆಕ್ಷನ್ 307 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ಸೆಕ್ಷನ್ 8ರ ಅಡಿಯಲ್ಲಿ ಕೊಲೆ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

English summary
A 12-year-old was sexually assaulted and brutally attacked in Outer Delhi's Paschim Vihar West area on Tuesday evening.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X