• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನವದೆಹಲಿಯಲ್ಲಿ ಒಂದೇ ದಿನ 1300 ಮಂದಿಗೆ ಕೊವಿಡ್-19 ಸೋಂಕು

|

ನವದೆಹಲಿ, ಆಗಸ್ಟ್.09: ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ನವದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಕೊಂಚ ಯಶಸ್ವಿಯಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಕಳೆದ 24 ಗಂಟೆಗಳಲ್ಲಿ 1300 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ನವದೆಹಲಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 145427ಕ್ಕೆ ಏರಿಕೆಯಾಗಿದೆ.

ಕೊರೊನಾವೈರಸ್ ಅಂಟಿದವರೆಲ್ಲ ಸಾವಿನ ಮನೆ ಸೇರುತ್ತಾರೆಯೇ?

ಮಹಾಮಾರಿಗೆ ಒಂದೇ ದಿನ 13 ಸೋಂಕಿತರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 4111ಕ್ಕೆ ಏರಿಕೆಯಾಗಿದೆ. ನವದೆಹಲಿಯಲ್ಲಿ ಇದುವರೆಗೂ 130587 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 10729 ಸಕ್ರಿಯ ಪ್ರಕರಣಗಳಿರುವುದು ತಿಳಿದು ಬಂದಿದೆ.

1.19 ಕೋಟಿ ಜನರಿಗೆ ಕೊರೊನಾವೈರಸ್ ತಪಾಸಣೆ:

ನವದೆಹಲಿಯಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಹೆಚ್ಚಿಸಿರುವುದೇ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ಕಾರಣ ಎಂದು ಹೇಳಲಾಗುತ್ತಿದೆ. ಒಂದೇ ದಿನದಲ್ಲಿ 5702 ಜನರನ್ನು ಆರ್ ಟಿಪಿಸಿಆರ್, 18085 ಜನರನ್ನು ರಾಪಿಡ್ ಆಂಟಿಜೆನ್ ತಪಾಸಣೆ ಸೇರಿದಂತೆ ಒಟ್ಟು 23787 ಜನರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ. ನವದೆಹಲಿಯಲ್ಲಿ ಇದುವರೆಗೂ 1192082 ಜನರ ವೈದ್ಯಕೀಯ ತಪಾಸಣೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
1300 Coronavirus Recovered Cases Reported in New Delhi Today, State Tally Rise to 145427.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X