ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವದೆಹಲಿಯಲ್ಲಿ 1,00,000 ಗಡಿ ದಾಟಿದ ಕೊರೊನಾವೈರಸ್ ಪ್ರಕರಣ!

|
Google Oneindia Kannada News

ನವದೆಹಲಿ, ಜುಲೈ.06: ಕೊರೊನಾವೈರಸ್ ಅಟ್ಟಹಾಸಕ್ಕೆ ರಾಷ್ಟ್ರ ರಾಜಧಾನಿ ಅಕ್ಷಕರಶಃ ಬೆಚ್ಚಿ ಬಿದ್ದಿದೆ. ಪ್ರತಿನಿತ್ಯ ನವದೆಹಲಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರ ಒಂದ ಲಕ್ಷದ ಗಡಿ ದಾಟಿದೆ.

Recommended Video

Chinese Army Vacates Galwan | Oneindia Kannada

ಸೋಮವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೊರೊನಾವೈರಸ್ ಗೆ ಸಂಬಂಧಿಸಿದಂತೆ ಹೆಲ್ತ್ ಬುಲೆಟಿನ್ ನ್ನು ಬಿಡುಗಡೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ 1379 ಹೊಸ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆಯು ದೆಹಲಿಯಲ್ಲೇ 1,00,823ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಕೊರೊನಾ ಸೋಂಕು ಹತೋಟಿಯಲ್ಲಿದೆ: ಪೂರ್ಣ ಲೆಕ್ಕ ಕೊಟ್ಟ ಕೇಜ್ರಿವಾಲ್ದೆಹಲಿಯಲ್ಲಿ ಕೊರೊನಾ ಸೋಂಕು ಹತೋಟಿಯಲ್ಲಿದೆ: ಪೂರ್ಣ ಲೆಕ್ಕ ಕೊಟ್ಟ ಕೇಜ್ರಿವಾಲ್

ರಾಷ್ಟ್ರ ರಾಜಧಾನಿಯಲ್ಲಿ ಒಂದೇ ದಿನ 48 ಮಂದಿ ಮಹಾಮಾರಿಗೆ ಪ್ರಾಣ ಬಿಟ್ಟಿದ್ದಾರೆ. ಇದರಿಂದ ಸಾವಿನ ಸಂಖ್ಯೆಯು 3,115ಕ್ಕೆ ಏರಿಕೆಯಾಗಿದೆ. ಇನ್ನು, ನವದೆಹಲಿಯಲ್ಲಿನ ಒಟ್ಟು 1,00,823 ಕೊರೊನಾವೈರಸ್ ಸೋಂಕಿತರ ಪೈಕಿ 72,088 ಮಂದಿ ಗುಣಮುಖರಾಗಿದ್ದಾರೆ. ಬಾಕಿ ಉಳಿದ 25,620 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

1379 New Coronavirus Cases Reported in New-Delhi Today, State Crossed To 1 Lakh

ಕೊರೊನಾವೈರಸ್ ಸೋಂಕಿತರ ತಪಾಸಣೆ ವೇಗ ಹೆಚ್ಚಳ:

ನವೆದೆಹಲಿಯಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಣಕ್ಕೆ ಈಗಾಗಲೇ ಸಾಕಷ್ಟು ಕ್ರಮಗಳನ್ನು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ಭಾನುವಾರವಷ್ಟೇ 10,000 ಬೆಡ್ ಗಳ ಕೊವಿಡ್-19 ಆಸ್ಪತ್ರೆಗೆ ಚಾಲನೆ ನೀಡಲಾಗಿತ್ತು. ಇದರ ನಡುವೆ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಹೆಚ್ಚಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ನವದೆಹಲಿಯಲ್ಲಿ 5327 ಮಂದಿಗೆ ಆರ್ ಪಿಟಿಸಿಆರ್ ತಪಾಸಣೆ, 8552 ಜನರಿಗೆ ರ್ಯಾಪಿಡ್ ಆ್ಯಂಟಿಜೆನ್ ತಪಾಸಣೆಗೆ ಒಳುಪಡಿಸಲಾಗಿದೆ. ಒಟ್ಟು 6,57, 383 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ.

English summary
1379 New Coronavirus Cases Reported in New-Delhi Today, State Crossed To 1 Lakh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X