ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ದೆಹಲಿಯಲ್ಲಿ ತಗ್ಗಿದ ಕೋವಿಡ್-19 ಪಾಸಿಟಿವಿಟಿ ದರ

|
Google Oneindia Kannada News

ದೆಹಲಿ, ಆಗಸ್ಟ್ 18: ದೆಹೆಲಿಯಲ್ಲಿ ಹೊಸ ಆತಂಕವನ್ನು ಸೃಷ್ಟಿಸಿದ್ದ ಕೊರೊನಾ ವೈರಸ್ ಮಹಾಮಾರಿ ಪ್ರಭಾವ ಕೊಂಚ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ ಕೋವಿಡ್-19 ಪಾಸಿಟಿವಿಟಿ ದರವು ಶೇ.10ಕ್ಕಿಂತ ಕಡಿಮೆಯಾಗಿರುವುದು ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ಮೂಲಕ ಗೊತ್ತಾಗಿದೆ.

ಕಳೆದ 24 ಗಂಟೆಗಳಲ್ಲಿ 1652 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಮಹಾಮಾರಿಗೆ 8 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ದೆಹಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಭಾರತದ ಕೊರೊನಾವೈರಸ್ ಸೋಂಕಿತರಲ್ಲಿ ಹೊಸ ಲಕ್ಷಣಗಳು ಪತ್ತೆ!ಭಾರತದ ಕೊರೊನಾವೈರಸ್ ಸೋಂಕಿತರಲ್ಲಿ ಹೊಸ ಲಕ್ಷಣಗಳು ಪತ್ತೆ!

ದೆಹಲಿಯಲ್ಲಿ ಜನರಿಂದ ಮಾದರಿ ಸಂಗ್ರಹಿಸಿ ಕೊರೊನಾ ವೈರಸ್ ಸೋಂಕಿನ ಪರೀಕ್ಷೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕೋವಿಡ್-19 ಸೋಂಕಿನ ಪಾಸಿಟಿವಿಟಿ ದರವು ಶೇ.9.92ರಷ್ಟಾಗಿದೆ. ಕಳೆದ 15 ದಿನಗಳಲ್ಲಿ ಕೋವಿಡ್ ಆಸ್ಪತ್ರೆಗೆ ದಾಖಲಾದವರ ಸಂಖ್ಯೆಯಲ್ಲಿ ಬಹುತೇಕ ಎರಡು ಪಟ್ಟು ಏರಿಕೆಯಾಗಿರುವುದು ಅಂಕಿ-ಅಂಶಗಳಿಂದ ಸ್ಪಷ್ಟವಾಗುತ್ತದೆ. ದೆಹಲಿ ಆರೋಗ್ಯ ಬುಲೆಟಿನ್ ಹಂಚಿಕೊಂಡ ನಂತರ ಪಾಸಿಟಿವಿಟಿ ದರದಲ್ಲಿ ಕುಸಿತ ಕಂಡುಬಂದಿದೆ. ದೆಹಲಿ ಸರ್ಕಾರದಿಂದ ಈಗಾಗಲೇ ಜಾಗೃತಿ ವಹಿಸುವುದಕ್ಕೆ ಆಸ್ಪತ್ರೆಗಳಿಗೆ ಎಚ್ಚರಿಕೆ ನೀಡಿದ್ದು, ಅಲರ್ಟ್ ಆಗಿರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

1652 New Corona virus Cases reported In Delhi: positivity rate currently stands at 9.92 per cent

ದೆಹಲಿಯಲ್ಲಿ ಗರಿಷ್ಠ ಸಂಖ್ಯೆಗೆ ತಲುಪಿದ ಸಕ್ರಿಯ ಪ್ರಕರಣ:

ಕಳೆದ 24 ಗಂಟೆಗಳಲ್ಲಿ 1,702 ಮಂದಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದು, ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,809ಕ್ಕೆ ತಲುಪಿದೆ. ರಾಷ್ಟ್ರೀಯ ರಾಜಧಾನಿಯಲ್ಲಿ ಸೋಮವಾರ 1,227 ಹೊಸ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದ ನಂತರ ಪ್ರತಿನಿತ್ಯ 2000ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. 12 ದಿನಗಳ ನಂತರದಲ್ಲಿ ಬುಧವಾರ ಮತ್ತೆ 2000ಕ್ಕಿಂತ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ.

ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಮನವಿ:

ಕೋವಿಡ್-29 ಪ್ರಕರಣಗಳ ಸಂಖ್ಯೆ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ತಮ್ಮ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆದುಕೊಳ್ಳುವಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಾರ್ವಜನಿಕರನ್ನು ಒತ್ತಾಯಿಸಿದ್ದಾರೆ. ಅವರ ಬೂಸ್ಟರ್ ಡೋಸ್‌ಗಳನ್ನು ಪಡೆದ ರೋಗಿಗಳು ಎರಡು ಜಬ್‌ಗಳನ್ನು ಹೊಂದಿರುವ ರೋಗಿಗಳಿಗಿಂತ ಸುರಕ್ಷಿತರಾಗಿದ್ದಾರೆ ಎಂದು ಹೇಳಿದರು.

ಮೂರನೇ ಡೋಸ್ ಪಡೆದವರು ಸುರಕ್ಷಿತ:

"ಆಸ್ಪತ್ರೆಗೆ ದಾಖಲಾದ ಕೊರೊನಾವೈರಸ್ ರೋಗಿಗಳಲ್ಲಿ ಶೇ.90ರಷ್ಟು ರೋಗಿಗಳು ಕೇವಲ ಎರಡು ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ. ಅದೇ ಸಮಯದಲ್ಲಿ, ಲಸಿಕೆಯ ಮೂರನೇ ಡೋಸ್ ಪಡೆದವರು ಆಸ್ಪತ್ರೆಗೆ ದಾಖಲಾದ ಸಂಖ್ಯೆ ಕೇವಲ ಶೇ.10ರಷ್ಟಿದೆ. ಮುನ್ನೆಚ್ಚರಿಕೆಯ ಡೋಸ್ ಪಡೆದ ಜನರು ಕೊರೊನಾ ಸೋಂಕಿನಿಂದ ಸುರಕ್ಷಿತವಾಗಿರುತ್ತಾರೆ ಎಂಬುದು ಸ್ಪಷ್ಟವಾಗಿದೆ," ಎಂದು ಸಿಸೋಡಿಯಾ ಹೇಳಿದ್ದಾರೆ.

English summary
1652 New Corona virus Cases reported In Delhi: positivity rate currently stands at 9.92 per cent
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X