ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

72 ಕೋಟಿ ಬಡವರಿಗೆ ಹೆಚ್ಚುವರಿ 5ಕೆಜಿ ಉಚಿತ ಆಹಾರ ಧಾನ್ಯ

|
Google Oneindia Kannada News

ನವದೆಹಲಿ, ಮೇ 29: ಕೊರೊನಾವೈರಸ್ ಲಾಕ್‌ಡೌನ್ ನಿಂದ ತತ್ತರಿಸಿರುವ ಬಡವರಿಗೆ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಅಡಿ ಮಾಸಿಕ ಅರ್ಹತೆಗಿಂತ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯಗಳನ್ನು ವಿತರಿಸುತ್ತಿದೆ.

''ಪಿಎಂ ಗರಿಬ್ ಕಲ್ಯಾಣ್ ಯೋಜನೆ (ಪಿಎಂಜಿಕೆಎ) ಅಡಿಯಲ್ಲಿ ಹೆಚ್ಚುವರಿ 5 ಕೆಜಿ ಉಚಿತ ಆಹಾರ ಧಾನ್ಯ ದೇಶಾದ್ಯಂತ 17 ಕೋಟಿ ಫಲಾನುಭವಿಗಳಿಗೆ ಇನ್ನೂ ತಲುಪಿಲ್ಲ'' ಎಂದು ಕೇಂದ್ರ ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.

ಲಾಕ್‌ಡೌನ್ ಹೊಡೆತ: ಬಾಣಲೆಯಿಂದ ಬೆಂಕಿಗೆ ಬಡವರು, ಕಾರ್ಮಿಕರುಲಾಕ್‌ಡೌನ್ ಹೊಡೆತ: ಬಾಣಲೆಯಿಂದ ಬೆಂಕಿಗೆ ಬಡವರು, ಕಾರ್ಮಿಕರು

ಶುಕ್ರವಾರ ನವದೆಹಲಿಯಲ್ಲಿ ಮಾತನಾಡಿದ ಅವರು, ''ಮೇ 28 ರ ಹೊತ್ತಿಗೆ 62 ಕೋಟಿ ಫಲಾನುಭವಿಗಳಿಗೆ ಪಿಎಂಜಿಕೆಎ ಅಡಿಯಲ್ಲಿ ಆಹಾರ ಧಾನ್ಯಗಳನ್ನು ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 80 ಕೋಟಿ ಫಲಾನುಭವಿಗಳು ಇದ್ದಾರೆ. ಅನೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಂಪೂರ್ಣವಾಗಿ ಈ ಯೋಜನೆಯನ್ನು ಸಮರ್ಥವಾಗಿ ಜಾರಿಗೊಳಿಸುತ್ತಿವೆ. ದೆಹಲಿ ಮತ್ತು ಪಶ್ಚಿಮ ಬಂಗಾಳ ಮೇ ತಿಂಗಳಲ್ಲಿ ಈ ಯೋಜನೆಯನ್ನು ತಮ್ಮ ಫಲಾನುಭವಿಗಳಿಗೆ ತಲುಪಿಸುವಲ್ಲಿ ವಿಫಲವಾಗಿವೆ'' ಎಂದು ಪಾಸ್ವಾನ್ ಆರೋಪಿಸಿದ್ದಾರೆ.

17 Crore Poor People Still Not Get Additional Free FoodGrains Under PMGKY Scheme

ಕೊರೊನಾವೈರಸ್ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಈಡಾಗಿರುವ ಕುಟುಂಬಗಳಿಗೆ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ 1.70 ಲಕ್ಷ ಕೋಟಿ ರೂ.ಗಳ ಪ್ಯಾಕೇಜಿನಡಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ಮಾರ್ಚ್ 26 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಯೋಜನೆ ಘೋಷಿಸಿದ್ದರು.

English summary
17 Crore Poor People Still Not Get Additional Free Grains Under PMGKA Sceme, Central Food Supply Minister Ram Vilas Paswan Said in New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X