ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಖ್ ದಂಗೆ: ಸುಪ್ರೀಂ ಕೋರ್ಟ್ ಮೊರೆ ಹೋದ ಸಜ್ಜನ್ ಕುಮಾರ್

|
Google Oneindia Kannada News

ನವದೆಹಲಿ, ಡಿಸೆಂಬರ್ 22: 1984 ರ ಸಿಖ್ ದಂಗೆಗೆ ಸಂಬಂಧಿಸಿದಂತೆ ಆರೋಪಿ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ಪರಿಗಣಿಸಿ ದೆಹಲಿ ಹೈಕೋರ್ಟ್ ನೀಡಿದ ತೀರ್ಪಿಗೆ ಪ್ರತಿಯಾಗಿ ಅವರು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.

 'ನಮ್ಮ ತಾಯಿಯ ಹತ್ಯೆ ಮಾಡಲಾಗಿದೆ. ಸರ್ದಾರರನ್ನು ಕೊಲ್ಲಿರಿ'! 'ನಮ್ಮ ತಾಯಿಯ ಹತ್ಯೆ ಮಾಡಲಾಗಿದೆ. ಸರ್ದಾರರನ್ನು ಕೊಲ್ಲಿರಿ'!

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ನಂತರ ನಡೆದಿದ್ದ ಸಿಖ್ ನರಮೇಧ ಪ್ರಕರಣದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡ ಸಜ್ಜನ್ ಕುಮಾರ್ ಅವರು ಪ್ರಮುಖ ಆರೋಪಿಯಾಗಿದ್ದರು. ಅವರು ದೆಹಲಿಯ ಕಂಟೋನ್ಮೆಂಟ್ ಬಳಿ ಸಿಖ್ ಧರ್ಮೀಯರ ಮೇಲೆ ತಮ್ಮ ಬೆಂಬಲಿಗರಿಂದ ದಾಳಿ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಹಿಂಸಾಚಾರಕ್ಕೆ ಬೆಂಬಲ ನೀಡಿದ ಆರೋಪದ ಎರಡು ಪ್ರಕರಣವನ್ನೂ ಅವರು ಎದುರಿಸುತ್ತಿದ್ದರು.

ಸಿಖ್ಖರ ಹತ್ಯಾಕಾಂಡದ ಅಪರಾಧಿ: ಯಾರು ಈ ಸಜ್ಜನ್ ಕುಮಾರ್?ಸಿಖ್ಖರ ಹತ್ಯಾಕಾಂಡದ ಅಪರಾಧಿ: ಯಾರು ಈ ಸಜ್ಜನ್ ಕುಮಾರ್?

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಸಜ್ಜನ್ ರಾವ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಡಿ.17 ರಂದು ತೀರ್ಪು ನೀಡಿತ್ತು. ಈ ಮೂಲಕ ಸಜ್ಜನ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ್ದ ಟ್ರಯಲ್ ಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾದ ಆದೇಶವನ್ನು ಹೈಕೋರ್ಟ್ ನೀಡಿತ್ತು.

1984 anti-Sikh riot: Sajjan Kumar moves Supreme Court against his conviction

ನಂತರ ಶರಣಾಗಲು ಜ.31, 2019 ರವರೆಗೆ ಸಮಯ ನೀಡುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯೂ ವಜಾ ಆಗಿತ್ತು. ಇದೀಗ ಅವರು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.

1984ರ ಅಕ್ಟೋಬರ್ 31ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ನಂತರ ನಡೆದಿದ್ದ ಸಿಖ್ ನರಮೇಧ ಪ್ರಕರಣದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡರು ಸೇರಿದಂತೆ ಅನೇಕ ಮಂದಿ ಮೇಲೆ ಗಲಭೆ, ಹತ್ಯೆ ಪ್ರಕರಣಗಳು ದಾಖಲಾಗಿವೆ.

English summary
Former Congress leader Sajjan Kumar has approached the Supreme Court challenging his conviction and the life term by the Delhi High Court in a 1984 anti-Sikh riots case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X