ಸಿಖ್ ಹತ್ಯಾಕಾಂಡ : ಒಬ್ಬರಿಗೆ ಗಲ್ಲು, ಮತ್ತೊಬ್ಬರಿಗೆ ಜೀವಾವಧಿ ಶಿಕ್ಷೆ

ನವದೆಹಲಿ, ನವೆಂಬರ್ 20: ಮಾಜಿ ಪ್ರಧಾನಿ ಇಂದಿರಾಗಾಂಧಿ ಹತ್ಯೆ ಬಳಿಕ 1984ರಲ್ಲಿ ದೇಶದ ವಿವಿಧೆಡೆ ನಡೆದ ಸಿಖ್ ನರಮೇಧ, ಹಿಂಸಾಚಾರ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ. ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮಂಗಳವಾರ(ನವೆಂಬರ್ 20)ದಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರಿಗೆ ಗಲ್ಲು ಶಿಕ್ಷೆ ಹಾಗೂ ಮತ್ತೊಬ್ಬರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

1984ರಲ್ಲಿ ದೆಹಲಿಯ ಮಹಿಪಾಲ್ಪುರ್ ಪ್ರದೇಶದಲ್ಲಿ ಇಬ್ಬರು ಸಿಖ್ಖರನ್ನು ಕೊಂದ ಆರೋಪದ ಮೇಲೆ ಯಶ್ ಪಾಲ್ ಸಿಂಗ್ ಎಂಬ ಅಪರಾಧಿಗೆ ಗಲ್ಲು ಶಿಕ್ಷೆ ಘೋಷಿಸಲಾಗಿದೆ.ಮತ್ತೊಬ್ಬ ಅಪರಾಧಿ ನರೇಶ್ ಸೆಹ್ರಾವತ್ ಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.

ಇಬ್ಬರ ಮೇಲೆ ಕ್ರಿಮಿನಲ್ ಸಂಚು, ಗಲಭೆ, ಅಕ್ರಮ ಶಸ್ತ್ರಾಸ್ತ್ರ, ಕೊಲೆ, ಕೊಲೆ ಯತ್ನ ಸೇರಿದಂತೆ ಐಪಿಸಿ ಸೆಕ್ಷನ್ 452,302,307,324,395,436 ಹಾಗೂ 149 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

1984 anti-Sikh riots: Convict Yashpal gets death sentence, life imprisonment to Naresh

ಘಟನೆ ನಡೆದು ಮೂರು ದಶಕಗಳ ನಂತರ 2017ರ ಏಪ್ರಿಲ್ ನಲ್ಲಿ ಯಶ್ ಪಾಲ್ ಹಾಗೂ ನರೇಶ್ ಗೆ ಹೊಸದಾಗಿ ಸಮನ್ಸ್ ನೀಡಲಾಗಿತ್ತು.

1984ರ ಅಕ್ಟೋಬರ್ 31ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಹತ್ಯೆಯ ನಂತರ ನಡೆದಿದ್ದ ಸಿಖ್ ನರಮೇಧ ಪ್ರಕರಣದಲ್ಲಿ, ಕಾಂಗ್ರೆಸ್ ಹಿರಿಯ ಮುಖಂಡರು ಸೇರಿದಂತೆ ಅನೇಕ ಮಂದಿ ಮೇಲೆ ಗಲಭೆ, ಹತ್ಯೆ ಪ್ರಕರಣಗಳು ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+