ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೆನೇಡ್ ದಾಳಿ, ಇಬ್ಬರ ಸಾವು
ನವದೆಹಲಿ, ನವೆಂಬರ್ 26: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ನಾಗರಿಕರು ಮೃತರಾಗಿದ್ದಾರೆ.
ಅನಂತ್ ನಾಗ್ ನ ಹಕುರಾ ಎಂಬಲ್ಲಿ ಗ್ರೆನೇಡ್ ದಾಳಿ ನಡೆದಿದ್ದು, ದಾಳಿಗೆ ಯಾರು ಕಾರಣ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಜೊತೆಗೆ ಕಾಶ್ಮೀರ ವಿಶ್ವವಿದ್ಯಾಲಯದ ಗೇಟಿನ ಬಳಿ ನಡೆದ ಗ್ರೆನೇಡ್ ದಾಳಿಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆಯೂ ನಡೆದಿದೆ. ಒಂದೇ ದಿನ ಬೇರೆ ಬೇರೆ ಕಡೆಗಳಲ್ಲಿ ನಡೆದ ನಿಗೂಢ ಗ್ರೆನೇಡ್ ದಾಳಿ ಪೊಲೀಸರಿಗೆ ತಲೆನೋವುಂಟು ಮಾಡಿದೆ.
ಇವೆರಡನ್ನೂ ಉಗ್ರ ಕೃತ್ಯ ಎಂದು ಅಂದಾಜಿಸಲಾಗಿದ್ದು, ಎನ್ ಕೌಂಟರ್ ಜೋನ್ ಒಳಗೆ ನಾಗರಿಕರು ಪ್ರವೇಶಿಸದಂತೆ ಕಟ್ಟೆಚ್ಚರ ಘೋಷಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಆರಂಭವಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ನವೆಂಬರ್ 12 ರಂದು ಮ್ಮು ಮತ್ತು ಕಾಶ್ಮೀರದ ಗಂಡೆರ್ಬಾಲ್ ಜಿಲ್ಲೆಯಲ್ಲಿ ಭಾರತೀಯ ಸೇನೆಯು ಭಯೋತ್ಪಾದಕರ ಮೇಲೆ ನಡೆಸಿದ ಎನ್ ಕೌಂಟರ್ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿತ್ತು. ಈ ಇಬ್ಬರು ಉಗ್ರರೂ ಲಷ್ಕರ್ ಇ ತೊಯಿಬಾ ಉಗ್ರ ಸಂಘಟನೆಗೆ ಸೇರಿದವರೆಂದು ತಿಳಿದುಬಂದಿತ್ತು.












Click it and Unblock the Notifications