• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ: ಇಬ್ಬರು ಜೆಎನ್‌ಯು ವಿದ್ಯಾರ್ಥಿನಿಯರ ಬಂಧನ

|

ನವದೆಹಲಿ, ಮೇ 24: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟಿಸಿದ್ದ ಜೆಎನ್‌ಯು ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿದ್ದಾರೆ.

ಫೆಬ್ರವರಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಸಂದರ್ಭದಲ್ಲಿ ಈಶಾನ್ಯ ದೆಹಲಿಯ ಜಫ್ರಾಬಾದ್ ನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಸಾವು ನೋವು ಉಂಟಾದ ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಜವಹರಲಾಲ್ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

6ನೇ ರಾಜ್ಯ: ಮಧ್ಯಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕಥೆ ಅಷ್ಟೇ

ಬಂಧಿತರಿಬ್ಬರೂ ವಿದ್ಯಾರ್ಥಿನಿಯರಾಗಿದ್ದು ಅವರನ್ನು ದೇವಂಗಾನ ಕಳಿತಾ ಮತ್ತು ನತಾಶ ನರ್ವಾಲ ಎಂದು ಗುರುತಿಸಲಾಗಿದೆ. ಇವರು ದೆಹಲಿಯ ಪಿಂಜ್ರ ಟೊಡ್ ಗುಂಪಿಗೆ ಸೇರಿದವರಾಗಿದ್ದು ಅವರು ಕಾಲೇಜು ವಿದ್ಯಾರ್ಥಿನಿಯರ ಹಕ್ಕುಗಳಿಗಾಗಿ ಹೋರಾಡುತ್ತಿದ್ದರು.

 2 JNU Students Arrested Over Anti-Citizenship Law Protest In February

ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 186 ಮತ್ತು 353ರಡಿ ಕೇಸು ದಾಖಲಿಸಲಾಗಿದೆ. ಕಳೆದ ಫೆಬ್ರವರಿಯಲ್ಲಿ ಈ ಮಹಿಳೆಯರ ಗುಂಪು ಜಫ್ರಾಬಾದ್ ಮೆಟ್ರೊ ಸ್ಟೇಷನ್ ಹತ್ತಿರ ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ಮಾಡುತ್ತಿದ್ದರು. ಸಿಎಎ ಪ್ರತಿಭಟನೆಗೆ ಸಂಬಂಧಪಟ್ಟಂತೆ ಇತ್ತೀಚೆಗೆ ದೆಹಲಿ ಪೊಲೀಸರು ಹಲವು ವಿದ್ಯಾರ್ಥಿಗಳನ್ನು ಮತ್ತು ಕಾರ್ಯಕರ್ತರನ್ನು ಬಂಧಿಸಿದ್ದಾರೆ

ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಬಾಂಗ್ಲಾ ಪ್ರಧಾನಿ ಹೀಗೆ ಹೇಳುವುದೇ?

ಫೆಬ್ರವರಿ 23ರಂದು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರ ನೇತೃತ್ವದಲ್ಲಿ ಪೂರ್ವ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಪ್ರತಿಭಟನಾ ಮೆರವಣಿಗೆ ನಡೆದಿತ್ತು. ಅದರಲ್ಲಿ ಮಾಡಿದ್ದ ಭಾಷಣ ಪ್ರಚೋದಿಸಿ ಮರುದಿನ ರಾಜಧಾನಿಯಲ್ಲಿ ತೀವ್ರ ಹಿಂಸಾಚಾರ ನಡೆದು ದೆಹಲಿಯಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

English summary
Three months after the clashes over the Citizenship Amendment Act or CAA killed over 50 people in Delhi, two students of Jawaharlal Nehru University, who participated in an anti-CAA sit-in in Jafrabad in February.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X