ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಜಾಬ್‌ನಲ್ಲಿ ಆಪ್‌ ಗೆದ್ದರೆ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್: ಕೇಜ್ರಿವಾಲ್ ಘೋಷಣೆ

|
Google Oneindia Kannada News

ನವದೆಹಲಿ, ಜೂ.28: ''ಪಂಜಾಬ್‌ನಲ್ಲಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಗೆದ್ದರೆ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ,'' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

2022 ರಲ್ಲಿ ಗೋವಾ, ಮಣಿಪುರ, ಪಂಜಾಬ್‌, ಉತ್ತರಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಗುಜರಾತ್‌, ಜಮ್ಮುಕಾಶ್ಮೀರದಲ್ಲಿ ವಿಧಾನ ಸಭೆ ಚುನಾವಣೆ ನಡೆಯಲಿದೆ.

 'ಈಗ ಗುಜರಾತ್ ಬದಲಾಗಲಿದೆ': ಅರವಿಂದ್ ಕೇಜ್ರಿವಾಲ್ ಟ್ವೀಟ್ 'ಈಗ ಗುಜರಾತ್ ಬದಲಾಗಲಿದೆ': ಅರವಿಂದ್ ಕೇಜ್ರಿವಾಲ್ ಟ್ವೀಟ್

ಈ ಬಗ್ಗೆ ಟ್ವೀಟ್‌ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ''ಅಂತಹ ದುಬಾರಿ ಬೆಲೆಗೆ ಮಹಿಳೆ ತನ್ನ ಸ್ವಂತ ಮನೆಯನ್ನು ನಡೆಸುವುದು ತುಂಬಾ ಕಷ್ಟ. ದೆಹಲಿಯಲ್ಲಿ ನಾವು ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ. ಇದರಿಂದಾಗಿ ಮಹಿಳೆಯರು ತುಂಬಾ ಸಂತೋಷವಾಗಿದ್ದಾರೆ,'' ಎಂದು ಹೇಳಿದ್ದಾರೆ.

200 units of free electricity for all in Punjab if AAP wins, announces Arvind Kejriwal

ಹಾಗೆಯೇ ''ಪಂಜಾಬ್‌ನ ಮಹಿಳೆಯರು ಕೂಡ ಹಣದುಬ್ಬರದ ಬಗ್ಗೆ ಅತೃಪ್ತರಾಗಿದ್ದಾರೆ. ಎಎಪಿ ಸರ್ಕಾರವು ಪಂಜಾಬ್‌ನಲ್ಲಿ ಉಚಿತ ವಿದ್ಯುತ್ ನೀಡಲಿದೆ,'' ಎಂದು ಭರವಸೆ ನೀಡಿದ ಕೇಜ್ರಿವಾಲ್‌, ''ನಾಳೆ ಚಂಡೀಗಢದಲ್ಲಿ ಭೇಟಿಯಾಗೋಣ,'' ಎಂದು ಟ್ಟಿಟಿಸಿದ್ದಾರೆ.

ಎಎಪಿ ತನ್ನ ಯೋಜನೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಿದೆ. ಅದರ ಭಾಗವಾಗಿ ಕೇಜ್ರಿವಾಲ್‌ ಮಂಗಳವಾರ ಚಂಡೀಗಢಕ್ಕೆ ಆಗಮಿಸಲಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಜನರು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ ಹಾಗೂ ವಿಶೇಷವಾಗಿ ಚಳಿಗಾಲದ ತಿಂಗಳುಗಳಲ್ಲಿ ಲಕ್ಷಾಂತರ ಗ್ರಾಹಕರು ಶೂನ್ಯ ವಿದ್ಯುತ್ ಬಿಲ್‌ಗಳನ್ನು ಪಡೆಯುತ್ತಿದ್ದಾರೆ.

2020 ರಲ್ಲಿ ಎಎಪಿ ಮೂರನೇ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಧಿಕಾರಕ್ಕೆ ಮರಳಿದ ಹಿಂದಿನ ಪ್ರಮುಖ ಕಾರಣಗಳಲ್ಲಿ ಇದು ಒಂದಾಗಿದೆ.

(ಒನ್‌ಇಂಡಿಯಾ ಸುದ್ದಿ)

English summary
Delhi chief minister Arvind Kejriwal on Monday announced 200 units of free electricity for all in Punjab if his Aam Aadmi Party (AAP) forms the government in the state going to polls early next year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X