ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ 2000 ಬೆಡ್: ಕೇಜ್ರಿವಾಲ್

|
Google Oneindia Kannada News

ದೆಹಲಿ, ಮೇ 25: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ವೈರಸ್‌ ಹರಡುವಿಕೆ ಹೆಚ್ಚಿದೆ. ಲಾಕ್‌ಡೌನ್‌ನಲ್ಲಿ ವಿನಾಯಿತಿ ನೀಡಿದ ಬಳಿಕವಂತೂ ದಿನದಿಂದ ದಿನಕ್ಕೆ ಕೇಸ್‌ಗಳ ಸಂಖ್ಯೆ ಏರಿಕೆಯಾಗಿದೆ. ಈ ಬಗ್ಗೆ ದೆಹಲಿ ಸಿಎಂ ಕೇಜ್ರಿವಾಲ್ ಸ್ಪಷ್ಟನೆ ನೀಡಿದ್ದಾರೆ.

'ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿದೆ, ಅದಕ್ಕೆ ತಕ್ಕಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ನಾವು ಮಾಡಿಕೊಂಡಿದ್ದೇವೆ' ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿ: ಏಮ್ಸ್‌ನ ಹಿರಿಯ ವೈದ್ಯರೊಬ್ಬರು ಕೊರೊನಾ ವೈರಸ್‌ಗೆ ಬಲಿದೆಹಲಿ: ಏಮ್ಸ್‌ನ ಹಿರಿಯ ವೈದ್ಯರೊಬ್ಬರು ಕೊರೊನಾ ವೈರಸ್‌ಗೆ ಬಲಿ

ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ 20ರಷ್ಟು ಹಾಸಿಗೆಗಳನ್ನು ಕೊವಿಡ್ ರೋಗಿಗಳಿಗೆ ಮೀಸಲಿಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಇಂದಿನಿಂದ ಖಾಸಗಿ ಆಸ್ಪತ್ರೆಯಲ್ಲಿ 2000 ಹಾಸಿಗೆಗಳು ಕೊರೊನಾ ರೋಗಿಗಳ ಚಿಕಿತ್ಸೆಗೆ ಬಳಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

2000 New Beds Available In Private Hospitals Said Delhi CM Arvind kejriwal

ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸಂಬಂಧಿಗೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪದ ಕೇಳಿ ಬಂದಿದೆ. ಈ ಕುರಿತು ಖಾಸಗಿ ಆಸ್ಪತ್ರೆಗಳಿಗೆ ದೆಹಲಿ ಸರ್ಕಾರದಿಂದ ಶೋ-ಕಾಸ್ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

'ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಅಂತಹ ಸಂದರ್ಭದಲ್ಲಿ ರೋಗಿಗೆ ಆಂಬ್ಯುಲೆನ್ಸ್ ಒದಗಿಸುವುದು ಆಸ್ಪತ್ರೆಯ ಕರ್ತವ್ಯವಾಗಿದೆ. ನಂತರ ಅವರನ್ನು ಕೊವಿಡ್ ಆಸ್ಪತ್ರೆಗೆ ಕರೆದೊಯ್ಯಿರಿ' ಎಂದು ಸೂಚಿಸಲಾಗಿದೆ.

ಪ್ರಸ್ತುತ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ, ಗಂಭೀರ ಸ್ಥಿತಿಯಲ್ಲಿರುವವರ ಸಂಖ್ಯೆ ಕಡಿಮೆ ಇದೆ. ಇದು ನಿಯಂತ್ರಣದಲ್ಲಿ ಚಿಂತಿಸುವ ಅಗತ್ಯವಿಲ್ಲ. ಸೋಂಕು ತಗುಲಿದೆ ಬಳಿಕ ಆ ವ್ಯಕ್ತಿ ಚೇತರಿಸಿಕೊಳ್ಳುವಂತಿದ್ದರೂ ಚಿಂತಿಸುವ ಅಗತ್ಯವಿಲ್ಲ ಎಂದಿದ್ದಾರೆ.

ದೆಹಲಿಯಲ್ಲಿ ಈವರೆಗೂ 13,418ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ. 6540 ರೋಗಿಗಳು ಚೇತರಿಸಿಕೊಂಡಿದ್ದಾರೆ. ಇದುವರೆಗೂ 261 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

English summary
Delhi Chief Minister Arvind Kejriwal said that 2000 New Beds Available In Private Hospitals from today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X