ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2022ರ ಚುನಾವಣೆ ಕುರಿತು ಚರ್ಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸಭೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 26: ಮುಂಬರುವ 2022ರ ವಿಧಾನಸಭೆ ಚುನಾವಣೆಗಳ ಕುರಿತು ಚರ್ಚಿಸುವುದಕ್ಕೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮಂಗಳವಾರ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ ಮತ್ತು ಗೋವಾ ವಿಧಾನಸಭೆ ಚುನಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.

"ಅಕ್ಟೋಬರ್ 26ರಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ)ಯ ನವದೆಹಲಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಘಟಕಗಳ ಉಸ್ತುವಾರಿಗಳ ಸಭೆ ನಡೆಯಲಿದ್ದು, ಸದಸ್ಯತ್ವ, ತರಬೇತಿ, ಆಂದೋಲನ ಕಾರ್ಯಕ್ರಮ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗುವುದು ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಈ ವೇಳೆ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಸಹ ಉಪಸ್ಥಿತಿ ವಹಿಸುವ ಸಾಧ್ಯತೆಗಳಿವೆ.

ಕಾಂಗ್ರೆಸ್ ಸದಸ್ಯತ್ವಕ್ಕೆ ಹಲವು ಷರತ್ತುಗಳು: ಬಿಜೆಪಿಗೆ ಕಾಡಿದ ಪ್ರಶ್ನೆಗಳುಕಾಂಗ್ರೆಸ್ ಸದಸ್ಯತ್ವಕ್ಕೆ ಹಲವು ಷರತ್ತುಗಳು: ಬಿಜೆಪಿಗೆ ಕಾಡಿದ ಪ್ರಶ್ನೆಗಳು

ಕಳೆದ ಅಕ್ಟೋಬರ್ 16 ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಮುಂದಿನ ವರ್ಷ ಸಾಂಸ್ಥಿಕ ಚುನಾವಣೆ ನಡೆಸುವುದು ಹಾಗೂ ಅದಕ್ಕಾಗಿ ನವೆಂಬರ್ 1 ರಿಂದ ಸದಸ್ಯತ್ವ ಅಭಿಯಾನ ಪ್ರಾರಂಭಿಸಲು ನಿರ್ಧರಿಸಲಾಗಿತ್ತು.

2022 Assembly Election: Congress president Sonia Gandhi to hold meeting with party core Leaders

2022ರ ಸೆಪ್ಟೆಂಬರ್ 6ರಂದು ಸಾಂಸ್ಥಿಕ ಚುನಾವಣೆ:

"ಕಾಂಗ್ರೆಸ್ ಮುಂದಿನ ಅಧ್ಯಕ್ಷರು ಯಾರಾಗಬೇಕು ಎನ್ನುವ ಬಗೆಗಿನ ಗೊಂದಲಗಳಿಗೆ ಇತ್ತೀಚಿನ ಸಭೆಯಲ್ಲಿ ಅಂತ್ಯ ಹಾಡಲಾಗಿತ್ತು. ರಾಹುಲ್ ಗಾಂಧಿಯವರನ್ನೇ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಬಗ್ಗೆ ಬಹುತೇಕ ನಾಯಕರು ಸಮ್ಮತಿ ವ್ಯಕ್ತಪಡಿಸಿದ್ದಾರೆ. 2022ರ ಸೆಪ್ಟೆಂಬರ್ 6ರಂದು ಅಧ್ಯಕ್ಷೀಯ ಚುನಾವಣೆ ನಡೆಸಲಾಗುವುದು," ಎಂದು ಕಾಂಗ್ರೆಸ್ ಪಕ್ಷದ ಆಂತರಿಕ ಮೂಲಗಳಿಂದ ತಿಳಿದು ಬಂದಿದೆ.

ಭಾರತೀಯ ಯುವ ಕಾಂಗ್ರೆಸ್, ಎನ್‌ಎಸ್‌ಯುಐ, ಮಹಿಳಾ ಕಾಂಗ್ರೆಸ್ ಮತ್ತು ಪಕ್ಷದ ಸಾಮಾಜಿಕ ಮಾಧ್ಯಮ ವಿಭಾಗಗಳಂತಹ ಪ್ರಮುಖ ಸಂಘಟನೆಗಳು ರಾಹುಲ್ ಗಾಂಧಿ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ನಿರ್ಣಯವನ್ನು ಅಂಗೀಕರಿಸಿವೆ. ಮಂಗಳವಾರದ ಸಭೆಯಲ್ಲಿ ಈ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ಈ ಹಿಂದೆ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಹಾಗೂ ಛತ್ತೀಸ್‌ಗಢದ ಸಿಎಂ ಭೂಪೇಶ್ ಬಾಘೆಲ್ ಮತ್ತು ಇತರ ನಾಯಕರು ಪಕ್ಷದ ಅಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿಯವರಿಗೆ ವಹಿಸುವಂತೆ ಮನವಿ ಮಾಡಿದ್ದರು. ಈ ಕುರಿತು ಮನವಿಗಳನ್ನು ಪರಿಗಣಿಸುವುದಾಗಿ ಸೋನಿಯಾ ಗಾಂಧಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಖಚಿತಪಡಿಸಿದ್ದರು.

Recommended Video

ಶಮಿ‌ ಪರ ನಿಂತ ಟೀಂ ಇಂಡಿಯಾ ಕ್ರಿಕೆಟಿಗರು:ಯಾಕೆ ಗೊತ್ತಾ? | Oneindia Kannada

English summary
2022 Assembly Election: Congress interim president Sonia Gandhi to hold meeting with Party core Leaders in Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X