Get Updates
Get notified of breaking news, exclusive insights, and must-see stories!

215 ಕೋಟಿ ಸುಲಿಗೆ ಪ್ರಕರಣ: ದೆಹಲಿ ಪೊಲೀಸರಿಂದ ರಾ..ರಾ.. ರಕ್ಕಮ್ಮನ ವಿಚಾರಣೆ

ನವದೆಹಲಿ, ಸೆ.14: ಸುಕೇಶ್‌ಗೆ ಸಂಬಂಧಿಸಿದ 215ಕೋಟಿ ಸುಲಿಗೆ ಪ್ರಕರಣದಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಇಂದು ದೆಹಲಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಸುಕೇಶ್ ಚಂದ್ರಶೇಖರ್ ಅವರನ್ನು ಒಳಗೊಂಡ 215 ಕೋಟಿ ರೂಪಾಯಿ ಸುಲಿಗೆ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲಾದ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಇಂದು (ಸೆಪ್ಟೆಂಬರ್ 14) ದೆಹಲಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.

ದೆಹಲಿ ಪೋಲೀಸ್‌ನ ಆರ್ಥಿಕ ಅಪರಾಧ ವಿಭಾಗದಿಂದ (EOW) ನಟಿಗೆ ಇದು ಮೂರನೇ ಸಮನ್ಸ್ ಆಗಿದೆ. ಇದಕ್ಕೂ ಮುನ್ನ ದೆಹಲಿ ಪೊಲೀಸರು ಆಗಸ್ಟ್ 29 ಮತ್ತು ಸೆಪ್ಟೆಂಬರ್ 12ರಂದು ಎರಡು ಬಾರಿ ವಿಚಾರಣೆಗೆ ಸಮನ್ಸ್ ಕಳುಹಿಸಿದ್ದರು. ಇಂದು ದೆಹಲಿ ಪೊಲೀಸರು ಜಾಕ್ವೆಲಿನ್‌ಗೆ ಸುಕೇಶ್ ಚಂದ್ರಶೇಖರ್ ಅವರೊಂದಿಗಿನ ಸಂಬಂಧ ಮತ್ತು ಅವರಿಂದ ಪಡೆದ ಉಡುಗೊರೆಗಳ ಬಗ್ಗೆ ವಿಚಾರಣೆ ನಡೆಸಲಿದ್ದಾರೆ. ಜಾಕ್ವೆಲಿನ್ ಸುಕೇಶ್ ಅವರನ್ನು ವೈಯಕ್ತಿಕವಾಗಿ ಎಷ್ಟು ಬಾರಿ ಭೇಟಿಯಾಗಿದ್ದಾಳೆ ಮತ್ತು ಅವರೊಂದಿಗೆ ಎಷ್ಟು ಬಾರಿ ಫೋನ್ ಸಂಭಾಷಣೆ ನಡೆಸಿದ್ದಾಳೆ ಎಂದು ಕೇಳಲಾಗುತ್ತದೆ.

ಇಂದು ದೆಹಲಿ ಪೊಲೀಸರ ಮುಂದೆ ರಕ್ಕಮ್ಮ

ಇಂದು ದೆಹಲಿ ಪೊಲೀಸರ ಮುಂದೆ ರಕ್ಕಮ್ಮ

ಸುಕೇಶ್ ಜಾಕ್ವೆಲಿನ್ ಜೊತೆ ಸಂಪರ್ಕದಲ್ಲಿರಲು ಸಹಾಯ ಮಾಡಿದ ಪಿಂಕಿ ಇರಾನಿಯನ್ನು ಸಹ EOW ವಿಚಾರಣೆಗೆ ಕರೆದಿದೆ. ಜಾಕ್ವೆಲಿನ್ ಅವರನ್ನು ಪ್ರಶ್ನಿಸುವ ಅಧಿಕಾರಿಗಳ ಪೈಕಿ ಇಒಡಬ್ಲ್ಯು ಜಂಟಿ ಆಯುಕ್ತ ಛಾಯಾ ಶರ್ಮಾ ಮತ್ತು ವಿಶೇಷ ಆಯುಕ್ತ ರವೀಂದ್ರ ಯಾದವ್ ಸೇರಿದ್ದಾರೆ. ಜಾಕ್ವೆಲಿನ್ ವಿಚಾರಣೆಗೆ ಒಳಪಡಿಸುವ ತಂಡದಲ್ಲಿ ಸುಮಾರು 5-6 ಅಧಿಕಾರಿಗಳು ಇದ್ದಾರೆ.

ಮೂಲಗಳ ಪ್ರಕಾರ ಜಾಕ್ವೆಲಿನ್ ಮತ್ತು ಪಿಂಕಿ ಅವರನ್ನೂ ಮುಖಾಮುಖಿಯಾಗಿ ಕೂರಿಸಿ ವಿಚಾರಣೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ದೆಹಲಿ ಪೊಲೀಸರು ಜಾಕ್ವೆಲಿನ್ ಅವರ ಸುದೀರ್ಘ ವಿಚಾರಣೆಗೆ ಮನಸ್ಸು ಮಾಡಿದ್ದು, ನಾಳೆಯೂ (ಸೆಪ್ಟೆಂಬರ್ 15) ಜಾಕ್ವೆಲಿನ್ ಅವರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಕೆಲ ದಿನಗಳ ಹಿಂದೆ ದೆಹಲಿ ಪೊಲೀಸರ ತಂಡ ಬಾಲಿವುಡ್ ನಟಿ ನೂರಾ ಫತೇಹಿ ಅವರನ್ನು ಸುಮಾರು ಆರು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

215 ಕೋಟಿ ಸುಲಿಗೆ ಮಾಡಿದ್ದು ಹೇಗೆ?

215 ಕೋಟಿ ಸುಲಿಗೆ ಮಾಡಿದ್ದು ಹೇಗೆ?

ಸುಕೇಶ್ ಚಂದ್ರಶೇಖರ್ ಬೆಂಗಳೂರು ಮೂಲದ ವಂಚಕ. ದೆಹಲಿಯ ತಿಹಾರ್ ಜೈಲಿನಲ್ಲಿದ್ದುಕೊಂಡೇ ವಂಚಕ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿರುವ ಉದ್ಯಮಿ ಖೈದಿಯನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿ ಉದ್ಯಮಿ ಪತ್ನಿಯನ್ನು ನಂಬಿಸಿ 215 ಕೋಟಿ ರೂಪಾಯಿಯನ್ನು ವಸೂಲಿ ಮಾಡಿದ್ದನು. ದೆಹಲಿಯ ತಿಹಾರ್ ಜೈಲಿನಲ್ಲಿದ್ದುಕೊಂಡೇ ವಂಚಕ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದ ಉದ್ಯಮಿ ಮಾನವೀಂದರ್ ಸಿಂಗ್ ಪತ್ನಿ ಆದಿತಿಗೆ ಪೋನ್ ಕಾಲ್ ಗಳನ್ನು ಮಾಡಿ ತನ್ನನ್ನು ತಾನು ಕೇಂದ್ರ ಗೃಹ ಇಲಾಖೆಯ ಅಧಿಕಾರಿ, ಕಾನೂನು ಇಲಾಖೆಯ ಅಧಿಕಾರಿ ಎಂದು ಹೇಳಿಕೊಂಡು ಪತಿಯನ್ನು ಜೈಲಿನಲ್ಲಿ ಬಿಡುಗಡೆ ಮಾಡಿಸಲು ಹಣ ನೀಡಬೇಕೆಂದು ಹೇಳಿದ್ದ.

ವಾಯ್ಸ್ ಮಾಡ್ಯುಲೇಷನ್ ಸಾಫ್ಟ್‌ವೇರ್ ಮತ್ತು ಸ್ಪೂಫಿಂಗ್ ಕರೆಗಳನ್ನು ಬಳಸಿ ಸುಕೇಶ್ ಚಂದ್ರಶೇಖರ್ 215 ಕೋಟಿ ರೂ. ವಂಚನೆ ಮಾಡಿದ್ದನು. ಬಳಿಕ ಉದ್ಯಮಿ ಪತ್ನಿಗೆ ತಾನು ಮೋಸ ಹೋಗಿರುವುದು ಗೊತ್ತಾಯಿತು. ಆಗ ಪ್ರಕರಣ ಬೆಳಕಿಗೆ ಬಂದಿದೆ. ವಂಚಕ ಸುಕೇಶ್ ಈ 215 ಕೋಟಿ ರೂಪಾಯಿ ಹಣದಲ್ಲಿ ಹತ್ತು ಕೋಟಿ ರೂಪಾಯಿ ಹಣವನ್ನು ನಟಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಗಿಫ್ಟ್ ನೀಡಿದ್ದ. ಈಗ ಜಾರಿ ನಿರ್ದೇಶನಾಲಯ ಜಾಕ್ವೆಲಿನ್ ಫರ್ನಾಂಡೀಸ್ ರನ್ನು ಕೂಡ ಪ್ರಕರಣದಲ್ಲಿ ಆರೋಪಿಯನ್ನಾಗಿ ವಿಚಾರಣೆ ನಡೆಸಿದೆ.

ಸುಕೇಶ್ ಚಂದ್ರಶೇಖರ್ ಜೊತೆಗೆ ಜಾಕ್ವೆಲಿನ್ ಫೋಟೋ

ಸುಕೇಶ್ ಚಂದ್ರಶೇಖರ್ ಜೊತೆಗೆ ಜಾಕ್ವೆಲಿನ್ ಫೋಟೋ

ವಂಚನೆ ಆರೋಪದ ಮೇಲೆ ಸುಕೇಶ್ ಚಂದ್ರಶೇಖರ್ ಅವರನ್ನು ಬಂಧಿಸಲಾಗಿದೆ. ಸುಕೆಶ್ ವಿಚಾರಣೆ ವೇಳೆ ಜಾಕ್ವೆಲಿನ್ ಹೆಸರನ್ನು ಸುಕೆಶ್ ಬಹಿರಂಗಪಡಿಸಿದ್ದಾರೆ. ಆದರೆ ತಮಗೂ ಸುಕೇಶ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಜಾಕ್ವೆಲಿನ್ ಹೇಳಿಕೊಂಡರೂ ಸುಕೇಶ್ ಅವರೊಂದಿಗಿನ ಅವರ ಅನ್ಯೋನ್ಯವಾದ ಫೋಟೋಗಳು ಮತ್ತಷ್ಟು ಅನುಮಾನಗಳನ್ನು ಹುಟ್ಟು ಹಾಕಿವೆ. ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸುಕೇಶ್ ಚಂದ್ರಶೇಖರ್ ಮುತ್ತು ಕೊಡುತ್ತಿರುವ ಪೋಟೋಗಳು ಲೀಕ್ ಆಗಿವೆ. ಸುಕೇಶ್ ಚಂದ್ರಶೇಖರ್ ಅವರು ಕೂಡ ಜಾಕ್ವೆಲಿನ್ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯಕ್ಕೆ ತಿಳಿಸಿದ್ದಾರೆ.

ಪ್ರಕರಣದಲ್ಲಿ ವಿಚಾರಣೆಗೊಳಪಟ್ಟ ನಟಿಯರು

ಪ್ರಕರಣದಲ್ಲಿ ವಿಚಾರಣೆಗೊಳಪಟ್ಟ ನಟಿಯರು

ಜಾಕ್ವೆಲಿನ್ ಫರ್ನಾಂಡೀಸ್‌ಗೆ ಲಕ್ಸುರಿ ಬಿಎಂಡಬ್ಲ್ಯು ಕಾರ್ ಅನ್ನು ಗಿಫ್ಟ್ ಆಗಿ ಸುಕೇಶ್ ಚಂದ್ರಶೇಖರ್ ನೀಡಿದ್ದ. ಡೈಮೆಂಡ್ ಬ್ರಾಸಲೆಟ್‌, ಫ್ರಾಂಕ್ ಮುಲ್ಲರ್ ಲಕ್ಸುರಿ ವಾಚ್‌, ದುಬಾರಿ ಬೆಲೆಬಾಳುವ ಗುಸ್ಸಿ, ಚಾನಲ್‌ಬ್ಯಾಗ್‌ಗಳನ್ನು ಗಿಫ್ಟ್​ಗಳನ್ನು ನೀಡಿದ್ದರು. ಜೊತೆಗೆ ಕುದುರೆಯೊಂದನ್ನು ಗಿಫ್ಟ್ ಆಗಿ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಸುಖೇಶ್ ಚಂದ್ರಶೇಖರ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಸುಕೇಶ್ ಚಂದ್ರಶೇಖರ್ ಕೇವಲ ಜಾಕ್ವೆಲಿನ್ ಫರ್ನಾಂಡೀಸ್‌ಗೆ ಮಾತ್ರವಲ್ಲದೇ, ಸಾರಾ ಅಲಿಖಾನ್, ಜಾಹ್ನವಿ ಕಪೂರ್ ಗೂ ಗಿಫ್ಟ್ ಗಳನ್ನು ನೀಡಿದ್ದಾನೆ. ಇದೀಗ ಈ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಕೇಶ್ ಜೊತೆಗೆ ಜಾಕ್ವೆಲಿನ್ ಫರ್ನಾಂಡೀಸ್ ಕೂಡ ಶಾಮೀಲಾಗಿರುವ ಕಾರಣ ಇಡಿ ಬಾಲಿವುಡ್ ನಟಿಯನ್ನು ಆರೋಪಿಯನ್ನಾಗಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+