ಮಹಾರಾಷ್ಟ್ರದಲ್ಲಿ 2,436 ಕೇಸ್, ತಮಿಳುನಾಡಿನಲ್ಲಿ 1438 ಕೇಸ್

ದೆಹಲಿ, ಜೂನ್ 5: ಕೊರೊನಾ ಹಾಟ್‌ಸ್ಪಾಟ್‌ ರಾಜ್ಯ ಮಹಾರಾಷ್ಟ್ರದಲ್ಲಿ ಇಂದು 2,436 ಜನರಿಗೆ ಕೊವಿಡ್ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 80,229 ಸಾವಿರ ದಾಟಿದೆ.

1475 ಜನರು ಇಂದು ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಮಹಾರಾಷ್ಟ್ರದಲ್ಲಿ 35,156 ಮಂದಿ ಗುಣಮುಖರಾಗಿದ್ದಾರೆ. 139 ಜನರು ಇಂದು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೂ 2,849 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಈ ಕಡೆ ತಮಿಳುನಾಡಿನಲ್ಲೂ ಇಂದು 1,438 ಜನರಿಗೆ ಕೊವಿಡ್ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28,694ಕ್ಕೆ ಜಿಗಿದಿದೆ. ಇದುವರೆಗೂ 232 ಮಂದಿ ಮೃತಪಟ್ಟಿದ್ದಾರೆ.

2436 Covid19 Case In Maharashtra And Tamilnadu Reports 1438 Case Today

* ಕೇರಳದಲ್ಲಿ 111 ಜನರಿಗೆ ಇಂದು ಕೊರೊನಾ ವೈರಸ್ ಅಂಟಿಕೊಂಡಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1697ಕ್ಕೆ ಏರಿಕೆಯಾಗಿದೆ.
* ಗುಜರಾತ್‌ನಲ್ಲಿ ಹೊಸದಾಗಿ 510 ಜನರಿಗೆ ಕೊರೊನಾ ವೈರಸ್ ದೃಢವಾಗಿದೆ. ರಾಜ್ಯದಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 19,119ಕ್ಕೆ ಏರಿಕೆಯಾಗಿದೆ.

* ಪಂಜಾಬ್ ನಲ್ಲಿ 46 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯು 2,461ಕ್ಕೆ ಏರಿಕೆಯಾಗಿದೆ.

2436 Covid19 Case In Maharashtra And Tamilnadu Reports 1438 Case Today

* ಉತ್ತರಪ್ರದೇಶದಲ್ಲಿ ಹೊಸದಾಗಿ 502 ಕೊರೊನಾ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9733ಕ್ಕೆ ಏರಿಕೆಯಾಗಿದೆ.

* ಛತ್ತೀಸ್ ಗಢದಲ್ಲಿ 90 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಪತ್ತೆಯಾಗಿದ್ಗು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 863ಕ್ಕೆ ಏರಿಕೆಯಾಗಿದೆ.

* ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಅತಿಹೆಚ್ಚು ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ 427 ಮಂದಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆಯು 7,303ಕ್ಕೆ ಏರಿಕೆಯಾಗಿದೆ.

2436 Covid19 Case In Maharashtra And Tamilnadu Reports 1438 Case Today

* ಮಣಿಪುರದಲ್ಲಿ ಎಂಟು ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ.

* ಕರ್ನಾಟಕದಲ್ಲಿ ಶುಕ್ರವಾರ ಒಂದೇ ದಿನ 515 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯು 4,835ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಸೋಂಕು ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+