ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯ ಕೊಳೆಗೇರಿಯಲ್ಲಿ ಅಗ್ನಿ ಅವಘಡ: 150 ಕ್ಕೂ ಹೆಚ್ಚು ಗುಡಿಸಲು ಭಸ್ಮ

|
Google Oneindia Kannada News

ನವದೆಹಲಿ, ಮೇ 26: ನಗರದ ತುಘ್ಲಕಾಬಾದ್‌ನ ಕೊಳಗೇರಿಯಲ್ಲಿ ಅಗನಿ ಅವಘಡ ಸಂಭವಿಸಿದ್ದು, 150 ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.

ಅತುಲ್ ಗಾರ್ಗ್ ಕೊಳಗೇರಿ ಪ್ರದೇಶದಲ್ಲಿ ಮಧ್ಯರಾತ್ರಿ 12.15ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು ಸುದ್ದಿ ತಿಳಿದ ಕೂಡಲೇ 28 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿತು. ನಸುಕಿನ ಜಾವ 4 ಗಂಟೆ ಸುಮಾರಿಗೆ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲಾಯಿತು ಎಂದು ತಿಳಿಸಿದ್ದಾರೆ.

ರಾಜಧಾನಿ ದೆಹಲಿಯ ತುಘಲಕಾಬಾದ್ ಕೊಳಗೇರಿ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿ ಬೃಹತ್ ಪ್ರಮಾಣದಲ್ಲಿ ಅಗ್ನಿ ಅವಘಡ ಉಂಟಾಗಿ 250ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟುಹೋಗಿವೆ. ಅದೃಷ್ಟವಶಾತ್ ಯಾರೊಬ್ಬರಿಗೂ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

250 Shanties Gutted When Massive Fire At Delhi slum

ಗುಡಿಸಲುಗಳಲ್ಲಿ ಕೆಲವರು ಮಾತ್ರ ವಾಸಿಸುತ್ತಿದ್ದರು. ಬೆಂಕಿ ಹತ್ತಿ ಉರಿಯುತ್ತಿದ್ದಂತೆ ಗುಡಿಸಲಿನಿಂದ ಹೊರಬಂದಿದ್ದರಿಂದ ಯಾವುದೇ ಸಾವು-ನೋವು ಉಂಟಾಗಿಲ್ಲ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಅಗ್ನಿ ಅವಘಡ; ಬೆಂಗಳೂರಲ್ಲಿ ವಿದ್ಯುತ್ ವ್ಯತ್ಯಯಅಗ್ನಿ ಅವಘಡ; ಬೆಂಗಳೂರಲ್ಲಿ ವಿದ್ಯುತ್ ವ್ಯತ್ಯಯ

ತುಘಲಕಾಬಾದ್ ಕೊಳಗೇರಿ ಪ್ರದೇಶದಲ್ಲಿ 500ಕ್ಕೂ ಹೆಚ್ಚು ಗುಡಿಸಲುಗಳಿದ್ದು ಅವುಗಳಲ್ಲಿ 250ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ಎತ್ತರದ ಪ್ರದೇಶದಲ್ಲಿ ಗುಡಿಸಲುಗಳು ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳಕ್ಕೆ ತಲುಪಲು ಸ್ವಲ್ಪ ಸಮಯ ಹಿಡಿಯಿತು, ಬೆಳಗ್ಗೆ 8 ಗಂಟೆಗೆ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು ಎಂದಿದ್ದಾರೆ.

English summary
A massive fire broke out on the intervening night of Monday and Tuesday in the slums of the Tughlaqabad area in south east Delhi in which over 250 shanties were gutted, however, no one was injured, fire officials said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X