ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ದೆಹಲಿಯಲ್ಲಿ ಒಂದೇ ದಿನ 2726 ಮಂದಿಗೆ ಕೊರೊನಾ ವೈರಸ್

|
Google Oneindia Kannada News

ದೆಹಲಿ, ಆಗಸ್ಟ್ 11: ದೆಹೆಲಿಯಲ್ಲಿ ಕೊರೊನಾ ವೈರಸ್ ಮಹಾಮಾರಿ ಮತ್ತೊಂದು ದಾಖಲೆ ಬರೆದಿದೆ. ಏಳು ತಿಂಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಒಂದೇ ದಿನ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ 2726 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಮಹಾಮಾರಿಗೆ 6 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ದೆಹಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೆಹಲಿಯಲ್ಲಿ ಒಂದೇ ದಿನ 18960 ಜನರ ಮಾದರಿಯನ್ನು ಸಂಗ್ರಹಿಸಿ ಕೊರೊನಾ ವೈರಸ್ ಸೋಂಕಿನ ಪರೀಕ್ಷೆಯನ್ನು ನಡೆಸಲಾಗಿದೆ. ಕೋವಿಡ್-19 ಸೋಂಕಿನ ಪಾಸಿಟಿವಿಟಿ ದರವು ಶೇ.14.38ರಷ್ಟಾಗಿದೆ.

2726 New Corona virus Cases reported In Delhi: highest daily spike in last 7 months

ದೆಹಲಿಯಲ್ಲಿ ಗರಿಷ್ಠ ಸಂಖ್ಯೆಗೆ ತಲುಪಿದ ಸಕ್ರಿಯ ಪ್ರಕರಣ:

ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆಯು ಆರು ತಿಂಗಳಿನಲ್ಲಿ ಗರಿಷ್ಠ ಮಟ್ಟಕ್ಕೆ ತಲುಪಿದೆ. ದೆಹಲಿಯಲ್ಲಿ ಗುರುವಾರದ ಅಂಕಿ-ಅಂಶಗಳ ಪ್ರಕಾರ, 8840 ಕೋವಿಡ್-19 ಸಕ್ರಿಯ ಪ್ರಕರಣಗಳಿವೆ. ಇದಕ್ಕೂ ಪೂರ್ವದಲ್ಲಿ ಫೆಬ್ರವರಿ 6ರಂದು ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 8869 ಆಗಿತ್ತು.

English summary
2726 New Corona virus Cases reported In Delhi: highest daily spike in last 7 months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X