ಇಂದು ಸುಪ್ರೀಂಕೋರ್ಟ್‌ಗೆ ಮೂರು ಅನರ್ಹ ಶಾಸಕರ ಅರ್ಜಿ ಸಲ್ಲಿಕೆ?
Recommended Video
ನವದೆಹಲಿ, ಜುಲೈ 26: ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿರುವ ಮೂವರು ಶಾಸಕರು ಇಂದು ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.
ಈಗಾಗಲೇ ಕಾನೂನು ತಜ್ಞರೊಂದಿಗೆ ಅರ್ಜಿ ಕೋರ್ಟ್ ಮೆಟ್ಟಿಲೇರುವ ಬಗ್ಗೆ ಚರ್ಚೆ ನಡೆದಿದ್ದು, ತುರ್ತು ವಿಚಾರಣೆ ಕೋರಿ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.
ಅನರ್ಹತೆಗೆ ತಾತ್ಕಾಲಿಕ ತಡೆ ನೀಡುವಂತೆ ಸುಪ್ರೀಂಕೋರ್ಟ್ ಮುಂದೆ ಶುಕ್ರವಾರ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಆರ್ ಶಂಕರ್ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಶಾಸಕರ ವಿಚಾರಣೆ ನಡೆಸದೆ ಅನರ್ಹತೆ ಕ್ರಮ ಕೈಗೊಳ್ಳಲಾಗಿದೆ. ವಿಚಾರಣೆಗಾಗಿ ಶಾಸಕರಿಗೆ ಸೂಕ್ತ ಸಮಯ ನೀಡಲಾಗಿಲ್ಲ, ಇದರಿಂದ ಶಾಸಕರ ಸಹಜ ನ್ಯಾಯ ಧಕ್ಕೆಯಾಗಿದೆ.
ರಾಜೀನಾಮೆ ನೀಡಿರುವ ಶಾಸಕರ ಮೇಲೆ ಒತ್ತಡ ಹೇರುವಂತಿಲ್ಲ ಹಾಗೂ ವಿಪ್ ಹೊರಡಿಸಿ ಶಾಸಕರ ಮೇಲೆ ಒತ್ತಡ ಹೇರುವಂತಿಲ್ಲ ಎಂಬ ಆದೇಶವನ್ನು ಸ್ಪೀಕರ್ ಹಾಗೂ ಶಾಸಕಾಂಗ ಪಕ್ಷದ ನಾಯಕರು ಉಲ್ಲಂಘಿಸಿದ್ದಾರೆ.
ಇದರಿಂದ ಶಾಸಕರ ಶಾಸಕರ ಅನರ್ಹತೆ ಕ್ರಮ ಕಾನೂನು ಬಾಹಿರ ಹಾಗೂ ನ್ಯಾಯಾಂಗ ನಿಂದನೆ ಎನ್ನುವುದು ಮೂರು ಶಾಸಕರ ವಾದವಾಗಿದೆ.
ಮೂವರು ಶಾಸಕರಲ್ಲಿ ಆರ್ ಶಂಕರ್ ಪ್ರಕರಣ ಭಿನ್ನವಾಗಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಕೆಯಾಗಬಹುದು.ಆರ್ ಶಂಕರ್ ಅವರು ಕಾಂಗ್ರೆಸ್ ಸದಸ್ಯತ್ವ ಹಾಗೂ ಪಕ್ಷ ವಿರೋಧಿ ಚಟುವಟಿಕೆ ಆರೋಪವನ್ನು ಹೊರಿಸಿರುವ ಬಗ್ಗೆ ತಮ್ಮ ಅರ್ಜಿಯಲ್ಲಿ ಹೆಚ್ಚು ಗಮನವಹಿಸಬಹುದು. ಉಳಿದಿಬ್ಬರು ಶಾಸಕರು ರಾಜೀನಾಮೆಯನ್ನು ಅನರ್ಹತೆ ಕಾರಣಗಳ ಬಗ್ಗೆ ಗಮನ ಕೇಂದ್ರೀಕರಿಸಬಹುದು.
ಒಟ್ಟಾರೆ ಈ ಪ್ರಕರಣ ಕುರಿತು ಸುಪ್ರೀಂಕೋರ್ಟ್ ನಿಲುವು ಕುತೂಹಲ ಮೂಡಿಸಿದೆ. ಪಕ್ಷೇತರ ಶಾಸಕರಾಗಿ ಕೆಪಿಜೆಪಿಯಿಂದ ಸ್ಪರ್ಧಿಸಿ ನಂತರ ಕಾಂಗ್ರೆಸ್ ಜತೆ ಪಕ್ಷ ವಿಲೀನಗೊಳಿಸಿದ ರಾಣೇಬೆನ್ನೂರು ಕ್ಷೇತ್ರದಿಂದ ಗೆದ್ದ ಆರ್ ಶಂಕರ್ ಅವರು ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದಾರೆ.
ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ, ಹೀಗಾಗಿ, ಮೂವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್ ರಮೇಶ್ ಕುಮಾರ್ ಗೆ ದೂರು ಸಲ್ಲಿಸಿದ್ದರು.












Click it and Unblock the Notifications