ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2021ರ ಆಗಸ್ಟ್ ವೇಳೆಗೆ 30 ಕೋಟಿ ಭಾರತೀಯರಿಗೆ ಕೊವಿಡ್-19 ಲಸಿಕೆ

|
Google Oneindia Kannada News

ನವದೆಹಲಿ, ನವೆಂಬರ್,30: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಭಾರತೀಯ ಹೋರಾಟ ಶುರುವಾಗಿ 12 ತಿಂಗಳುಗಳೇ ಗತಿಸಿವೆ. ಕೊವಿಡ್-19 ಲಸಿಕೆ ಸಂಶೋಧನೆ ಮತ್ತು ವೈದ್ಯಕೀಯ ಪ್ರಯೋಗದ ನಡುವೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ವವರ್ಧನ್ ಭರವಸೆ ಮಾತನಾಡಿದ್ದಾರೆ.

ದೇಶದ 135 ಕೋಟಿಗೂ ಅಧಿಕ ಜನಸಂಖ್ಯೆಯ ಪೈಕಿ ಮೊದಲ ಹಂತದಲ್ಲಿ 30 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗುತ್ತದೆ. ಕೇಂದ್ರ ಸರ್ಕಾರವು ಕೊರೊನಾವೈರಸ್ ವಿರುದ್ಧ ಹೋರಾಡುವುದಕ್ಕೆ ಯಾವ ರೀತಿಯ ಶಿಷ್ಟಾಚಾರ ಮತ್ತು ನಿಯಮಗಳನ್ನು ಪಾಲಿಸಬೇಕು ಎನ್ನುವುದರ ಕುರಿತು ಯೋಜನೆ ರೂಪಿಸಲಾಗುತ್ತಿದೆ. 2021ರ ಆಗಸ್ಟ್ ವೇಳೆಗೆ 30 ಕೋಟಿ ಜನರಿಗೆ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ವವರ್ಧನ್ ತಿಳಿಸಿದ್ದಾರೆ.

ಮುಂಬೈನಲ್ಲಿ ಮಾಸ್ಕ್ ಧರಿಸದ ವ್ಯಕ್ತಿಗಳಿಂದ 10 ಕೋಟಿ ದಂಡ ಸಂಗ್ರಹ!ಮುಂಬೈನಲ್ಲಿ ಮಾಸ್ಕ್ ಧರಿಸದ ವ್ಯಕ್ತಿಗಳಿಂದ 10 ಕೋಟಿ ದಂಡ ಸಂಗ್ರಹ!

ನವದೆಹಲಿಯಲ್ಲಿ ಕೊರೊನಾವೈರಸ್ ನಿಯಂತ್ರಿಸುವ ಉದ್ದೇಶದಿಂದ ಸೋಪ್ ಮತ್ತು ಮಾಸ್ಕ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಭಾರತದಲ್ಲಿ 2021ರ ಮಧ್ಯಭಾಗದಲ್ಲಿ ಕೊರೊನಾವೈರಸ್ ಸೋಂಕಿಗೆ ಲಸಿಕೆಯು ಲಭ್ಯವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

 30 Crore People Will Be Vaccinated By August 2021 In India: Central Govt Says

ವಿಶ್ವದಲ್ಲೇ ಅತಿಹೆಚ್ಚು ಸೋಂಕಿತರು ಗುಣಮುಖ:

ಜಗತ್ತಿನಲ್ಲಿ ಕೊರೊನಾವೈರಸ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯನ್ನು ಗಮನಿಸಿದಾಗ ಭಾರತದಲ್ಲೇ ಅತಿಹೆಚ್ಚು ಸೋಂಕಿತರು ಮಹಾಮಾರಿಯಿಂದ ಬಚಾವ್ ಆಗಿದ್ದಾರೆ. ದೇಶದಲ್ಲಿ ಒಂದೇ ದಿನ 38772 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 94,31,692ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 443 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,37,139ಕ್ಕೆ ಏರಿಕೆಯಾಗಿದೆ. ಆದರೆ 88,47,600 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, 4,46,952 ಸಕ್ರಿಯ ಪ್ರಕರಣಗಳಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

English summary
30 Crore People Will Be Vaccinated By August 2021 In India: Central Govt Says.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X