ಏರ್ ಇಂಡಿಯಾ ವಿಮಾನದಲ್ಲಿ 318 ಆಮ್ಲಜನಕ ಸಾಂದ್ರಕಗಳ ಆಮದು

ನವದೆಹಲಿ, ಏಪ್ರಿಲ್ 26: ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾವೈರಸ್ ರೋಗಿಗಳ ಚಿಕಿತ್ಸೆಗೆ ಆಕ್ಸಿಜನ್ ಕೊರತೆ ಅತಿಯಾಗಿ ಕಾಡುತ್ತಿದೆ. ಈ ಹಿನ್ನಲೆ ಸೋಮವಾರ ನ್ಯೂಯಾರ್ಕ್-ದೆಹಲಿಯ ಏರ್ ಇಂಡಿಯಾ ವಿಮಾನದ ಮೂಲಕ 328 ಆಮ್ಲಜನಕ ಸಾಂದ್ರಕಗಳನ್ನು(Oxygen Concentrators) ಆಮದು ಮಾಡಿಕೊಳ್ಳಲಾಗಿದೆ ಎಂದು ವಿಮಾನಯಾನ ಸಚಿವ ಹರ್ದಿಪ್ ಸಿಂಗ್ ಪುರಿ ತಿಳಿಸಿದ್ದಾರೆ.

ದೇಶದಲ್ಲಿ ಆಮ್ಲಜನಕರ ತುರ್ತು ಸರಬರಾಜು ಪ್ರಕ್ರಿಯೆ ನಡುವೆಯೂ ಹಲವು ಆಸ್ಪತ್ರೆಗಳಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಹೆಚ್ಚಿದೆ. ಶನಿವಾರ ದೆಹಲಿಯ ಜೈಪುರ್ ಗೋಲ್ಡನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 20 ಮಂದಿ ಪ್ರಾಣ ಬಿಟ್ಟಿದ್ದಾರೆ.

"ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಡುವಲ್ಲಿ ಭಾರವತನ್ನು ಸಮರ್ಥಗೊಳಿಸುವ ಎಲ್ಲ ರೀತಿಯ ಪ್ರಯತ್ನಗಳು ನಡೆಯುತ್ತಿವೆ. ಜೆಎಫ್ ಕೆ ವಿಮಾನ ನಿಲ್ದಾಣದಿಂದ 218 ಫಿಲಿಪ್ಸ್ ಆಮ್ಲಜನಕ ಸಾಂದ್ರಕಗಳು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿವೆ" ಎಂದು ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.

Delhi: 318 Oxygen Concentrators Imported From New York To Handle Covid-19 Situation

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣ:

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,52,991 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 2812 ಮಂದಿ ಪ್ರಾಣ ಬಿಟ್ಟಿದ್ದು, 2,19,272 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಒಟ್ಟು 1,73,13,163 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೆ 1,43,04,382 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,95,123 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 28,13,658 ಕೊವಿಡ್-19 ಸಕ್ರಿಯ ಪ್ರಕರಣಗಳ ದಾಖಲಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+