ಕಳೆದ 24 ಗಂಟೆಯಲ್ಲಿ 909 ಕೊರೊನಾ ಸೋಂಕಿತರು, 34 ಸಾವು

ದೆಹಲಿ, ಏಪ್ರಿಲ್ 12: ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಗಂಟೆ ಗಂಟೆಗೂ ಅಧಿಕವಾಗುತ್ತಲೇ ಇದೆ. ಏಪ್ರಿಲ್ 12 ರಂದು ಬೆಳಿಗ್ಗೆ 9 ಗಂಟೆಯವರೆಗೂ ದೇಶದಲ್ಲಿ ಸೋಂಕಿತರ ಸಂಖ್ಯೆ 8356ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 909 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಇನ್ನು 34 ಜನರು ಕೊವಿಡ್ ಸೋಂಕಿನಿಂದ ಮೃತಪಟ್ಟಿರುವ ಬಗ್ಗೆ ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಒಟ್ಟು 8356 ಪ್ರಕರಣಗಳು ವರದಿಯಾಗಿದೆ. ಅದರಲ್ಲಿ 7367 ಕೇಸ್‌ಗಳು ಚಾಲ್ತಿಯಲ್ಲಿದೆ. 716 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಡಿಸ್ಚಾರ್ಜ್ ಆಗಿದ್ದಾರೆ. 273 ಮಂದಿ ಸೋಂಕಿನಿಂದ ಹೊರಬರದೆ ಸಾವನ್ನಪ್ಪಿದ್ದಾರೆ.

34 Deaths And 909 New Cases Reported In Last 24 Hours

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 215ಕ್ಕೆ ಏರಿದೆ. ಇದುವರೆಗೂ ಒಟ್ಟು ಆರು ಜನರು ಕೊವಿಡ್ ರೋಗದಿಂದ ರಾಜ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಜಗತ್ತಿನಾದ್ಯಂತ ಒಟ್ಟು 1,780,440 ಜನರಲ್ಲಿ ಕೊರೊನಾ ದೃಢವಾಗಿದೆ. ಅದರಲ್ಲಿ 108,834 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 404,393 ಜನರು ಈ ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ. ಅಮೆರಿಕದಲ್ಲಿ 20,577 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಟಲಿ ದೇಶದಲ್ಲಿ 19,468 ಜನರು ಸಾವನ್ನಪ್ಪಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+