ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ: ಎಎಪಿ ಅಭ್ಯರ್ಥಿಗಳೇ ಹೆಚ್ಚು ಅಪರಾಧ ಹಿನ್ನೆಲೆಯುಳ್ಳವರು

|
Google Oneindia Kannada News

ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನಲೆ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಅಪರಾಧ ಹಿನ್ನೆಲೆ ಉಳ್ಳವರು ಎಂದು ಅಸೋಸಿಯೇಷನ್ ಫಾರ್ ಡೆಮೊಕ್ರಾಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ನೀಡಿದೆ.

ಈ ಬಾರಿ ಎಲ್ಲಾ 71 ವಿಧಾನಸಭಾ ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧಿಸಿದೆ. ಎಎಪಿ ಅಭ್ಯರ್ಥಿಗಳ ಪೈಕಿ ಶೇ.51 ರಷ್ಟು (36) ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು ಎರಡನೇ ಸ್ಥಾನದಲ್ಲಿದ್ದು, 17 ಅಭ್ಯರ್ಥಿಗಳು ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದಾರೆ. ಆದರೆ, ಬಿಜೆಪಿ 67 ಕ್ಷೇತ್ರಗಳಲ್ಲಿಮಾತ್ರ ಸ್ಪರ್ಧಿಸುತ್ತಿದ್ದು, ಉಳಿದ ಸೀಟುಗಳಲ್ಲಿ ಮಿತ್ರಪಕ್ಷಗಳದ ಜೆಡಿಯು ಹಾಗೂ ಲೋಕ ಜನಶಕ್ತಿ ಪಕ್ಷ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.

ಮನೆ ಬಾಗಿಲಿಗೆ ಪಡಿತರ ವಿತರಣೆ, ದೆಹಲಿಗಾಗಿ ಎಎಪಿ ಪ್ರಣಾಳಿಕೆ ಮನೆ ಬಾಗಿಲಿಗೆ ಪಡಿತರ ವಿತರಣೆ, ದೆಹಲಿಗಾಗಿ ಎಎಪಿ ಪ್ರಣಾಳಿಕೆ

66 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪೈಕಿ 10 ಮಂದಿ ಕೇಸುಗಳನ್ನು ಎದುರಿಸುತ್ತಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 672 ಅಭ್ಯರ್ಥಿಗಳು ಕಣದಲ್ಲಿದ್ದು, ಇದರಲ್ಲಿ ಶೇ.20 (133 ಅಭ್ಯರ್ಥಿಗಳು) ಅಭ್ಯರ್ಥಿಗಳು ಅಪರಾಧ ಹಿನ್ನೆಲೆ ಹೊಂದಿರುವುದಾಗಿ ತಮ್ಮ ಅಫಿಡವಿಟ್ ನಲ್ಲಿ ಹೇಳಿಕೊಂಡಿದ್ದಾರೆ.

36! Aam Admi Party fields most candidates with criminal background for Delhi polls

2015ರಲ್ಲಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳನ್ನು ಆಮ್ ಆದ್ಮಿ ಪಕ್ಷ ಗೆದ್ದುಕೊಂಡಿತ್ತು. ಬಿಜೆಪಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಆದರೆ 2017ರಲ್ಲಿ ಮುನ್ಸಿಪಾಲ್ ಕಾರ್ಪೊರೇಷನ್ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಲಯಕ್ಕೆ ಮರಳಿದೆ.

ಗ್ಯಾಲರಿ: ದೆಹಲಿಯಲ್ಲಿ ಚುನಾವಣ ಪ್ರಚಾರದ ಭರಾಟೆ ಜೋರು

ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಮುರಿದಿರುವುದರಿಂದ ಮತದಾರರನ್ನು ಸೆಳೆಯುವುದು ಬಿಜೆಪಿಗೆ ಸುಲಭವಾಗಲಿದೆ.70 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, ಫೆಬ್ರವರಿ 11ರಂದು ಫಲಿತಾಂಶ ಹೊರಬರಲಿದೆ.

English summary
Delhi Elections 2020: Out of 672 candidates analysed, 133 (20 per cent) candidates have declared criminal cases against themselves.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X