ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವೆಂಬರ್ ವೇಳೆಗೆ ಮತ್ತೆ 4 ಕಂಪನಿಗಳಿಂದ ಕೊರೊನಾ ಲಸಿಕೆ ಉತ್ಪಾದನೆ

|
Google Oneindia Kannada News

ನವದೆಹಲಿ, ಆಗಸ್ಟ್ 03: ನವೆಂಬರ್ ವೇಳೆಗೆ ಮತ್ತೆ ನಾಲ್ಕು ಔಷಧ ಕಂಪನಿಗಳು ಕೊರೊನಾವೈರಸ್ ವಿರುದ್ಧ ಲಸಿಕೆ ಉತ್ಪಾದನೆ ಆರಂಭಿಸಲಿವೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.

ಲಸಿಕೆ ಅಭಿಯಾನಕ್ಕೆ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ಮತ್ತಷ್ಟು ವೇಗ ದೊರೆಯಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದೇ ಉಳಿದಿರುವ ಶೇ.7 ರಿಂದ ಶೇ.9ರಷ್ಟು ಡೋಸ್‌ಗಳನ್ನು ಸರ್ಕಾರಿ ಲಸಿಕಾ ಕೇಂದ್ರಗಳ ಮೂಲಕ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ 40 ರಿಂದ 30 ಸಾವಿರಕ್ಕೆ ತಗ್ಗಿದ ಕೊರೊನಾವೈರಸ್ ಸಂಖ್ಯೆ!ಭಾರತದಲ್ಲಿ 40 ರಿಂದ 30 ಸಾವಿರಕ್ಕೆ ತಗ್ಗಿದ ಕೊರೊನಾವೈರಸ್ ಸಂಖ್ಯೆ!

ಈವರೆಗೆ ದೇಶದಲ್ಲಿ 47 ಕೋಟಿ ಡೋಸ್ ಲಸಿಕೆ ನೀಡಲಾಗಿದೆ, ಆಗಷ್ಟು ಬೇಗ ದೇಶದ ಎಲ್ಲಾ ಜನರಿಗೂ ಲಸಿಕೆ ನೀಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನಗಳನ್ನೂ ಸರ್ಕಾರ ಮಾಡುತ್ತಿದೆ ಎಂದು ರಾಜ್ಯಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಹೇಳಿದ್ದಾರೆ.

4 More Indian Pharmaceutical Firms Expected To Start Vaccine Production By November

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 49.85 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.

ಈವರೆಗೆ ಕೇಂದ್ರವು ರಾಜ್ಯಗಳಿಗೆ 49.85 (49,85,51,660) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 2,75,88,573 ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

ಮಂಗಳವಾರ ಲಭ್ಯವಿರುವ ಮಾಹಿತಿಯ ಪ್ರಕಾರ, ತ್ಯಾಜ್ಯಗಳು ಸೇರಿದಂತೆ ಒಟ್ಟು 47,52,49,554 ಪ್ರಮಾಣದಷ್ಟು ಲಸಿಕೆಗಳು ಬಳಕೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ 20,94,890 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 47,85,44,114 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಭಾರತದಲ್ಲಿ ಕೊರೊನಾ ಏರಿಳಿಕೆ ಮತ್ತೆ ಮುಂದುವರೆದಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 30,549 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 422 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,17,26,507ಕ್ಕೆ ತಲುಪಿದ್ದು, ಸಾವಿನ 4,25,195ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,04,958ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 38,887 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,08,96,354ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 16,49,295 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 47,12,94,789 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.ರಾಷ್ಟ್ರೀಯ ಕೋವಿಡ್‌ ಲಸಿಕಾ ಅಭಿಯಾನದಡಿ ದೇಶದಲ್ಲಿ ಸುಮಾರು 2.27 ಲಕ್ಷಕ್ಕೂ ಅಧಿಕ ಗರ್ಭಿಣಿಯರಿಗೆ ಮೊದಲ ಡೋಸ್‌ ಲಸಿಕೆ ನೀಡಲಾಗಿದೆ. ಈ ಪೈಕಿ ಕರ್ನಾಟಕದಲ್ಲಿ ಸುಮಾರು 16,673 ಗರ್ಭಿಣಿಯರು ಮೊದಲ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ.

ಕೋವಿಡ್‌-19 ಸೋಂಕಿನ ಅಪಾಯಗಳು ಹಾಗೂ ಲಸಿಕೆಯ ಪ್ರಯೋಜನದ ಬಗ್ಗೆ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಅಧಿಕಾರಿಗಳು ನಿರಂತರವಾಗಿ ಗರ್ಭಿಣಿಯರಿಗೆ ತಿಳಿವಳಿಕೆ ಮೂಡಿಸಿದ ಪರಿಣಾಮ ಇಷ್ಟು ಪ್ರಮಾಣದ ಗರ್ಭಿಣಿಯರು ಲಸಿಕೆ ಪಡೆಯುವಂತಾಗಿದೆ.

ಬಿಬಿಎಂಪಿ ವ್ಯಾಪ್ತಿಯ ಎಂಟು ಆರೋಗ್ಯ ಕೇಂದ್ರಗಳಲ್ಲಿ 444 ಗರ್ಭಿಣಿಯರಿಗೆ ಲಸಿಕೆ ಹಾಕಲಾಗಿದೆ. 432 ಗರ್ಭಿಣಿಯರು ಮತ್ತು 12 ಹಾಲುಣಿಸುವ ತಾಯಂದಿರಿಗೆ ಲಸಿಕೆ ನೀಡಲಾಗಿದೆ.

ಇದುವರೆಗೆ ಯಾವುದೇ ಅಡ್ಡ ಪರಿಣಾಮ ಬೀರಿದ ಬಗ್ಗೆ ವರದಿಯಾಗಿಲ್ಲ ಎಂದು ಬಿಬಿಎಂಪಿಯ ವಿಶೇಷ ಆಯುಕ್ತ ಡಿ. ರಂದೀಪ್‌ ಹೇಳಿದ್ದಾರೆ.

ರಾಜಧಾನಿಯಲ್ಲಿ 87,989 ಗರ್ಭಿಣಿಯರು ಮತ್ತು 1,36,971 ಹಾಲುಣಿಸುವ ತಾಯಂದಿರಿಗೆ ಲಸಿಕೆ ಹಾಕುವ ಗುರಿ ಇಟ್ಟುಕೊಳ್ಳಲಾಗಿದೆ. ತಮಿಳುನಾಡಿನಲ್ಲಿ ಅತಿ ಹೆಚ್ಚು 78,838 ಗರ್ಭಿಣಿಯರು ಲಸಿಕೆ ಪಡೆದುಕೊಂಡಿದ್ದಾರೆ.

English summary
Union Health Minister Mansukh Mandaviya on Tuesday said in Parliament that four more Indian pharma firms are expected to start coronavirus vaccine production by October-November that will accelerate the inoculation drive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X