Get Updates
Get notified of breaking news, exclusive insights, and must-see stories!

ದೆಹಲಿಯಲ್ಲಿ 4 ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 6ಕ್ಕೇರಿಕೆ

ನವದೆಹಲಿ ಡಿಸೆಂಬರ್ 14: ದೆಹಲಿಯಲ್ಲಿ ಹೊಸದಾಗಿ ಮತ್ತೆ ನಾಲ್ಕು ಕೋವಿಡ್ ರೂಪಾಂತರ ವೈರಸ್ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಓಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಎಲ್ಲಾ ಆರು ರೋಗಿಗಳು ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದಾರೆ ಮತ್ತು ಅವರಲ್ಲಿ ಒಬ್ಬರು ಚೇತರಿಸಿಕೊಂಡಿದ್ದಾರೆ.

ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಈ ಬಗ್ಗೆ ಮಾತನಾಡಿ, "ದೆಹಲಿಯಲ್ಲಿ ನಾಲ್ಕು ಹೊಸ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಆರು ಪ್ರಕರಣಗಳಲ್ಲಿ ಒಬ್ಬ ರೋಗಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ, LNJP ಆಸ್ಪತ್ರೆಗೆ 35 ಕೋವಿಡ್ ಪಾಸಿಟಿವ್ ರೋಗಿಗಳು ಮತ್ತು 3 ಶಂಕಿತ ಪ್ರಕರಣಗಳು ದಾಖಲಾಗಿವೆ" ಎಂದಿದ್ದಾರೆ.

LNJP ಆಸ್ಪತ್ರೆಯನ್ನು Covid-19 ನ ಹೊಸ Omicron ರೂಪಾಂತರದಿಂದ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಗೊತ್ತುಪಡಿಸಲಾಗಿದೆ. ದೆಹಲಿಯ ಮೊದಲ ಓಮಿಕ್ರಾನ್ ರೋಗಿ, 37 ವರ್ಷದ ವ್ಯಕ್ತಿಯನ್ನು ಎಲ್‌ಎನ್‌ಜೆಪಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ರಾಂಚಿಯ ನಿವಾಸಿಯಾಗಿರುವ ವ್ಯಕ್ತಿ, ಡಿಸೆಂಬರ್ 2 ರಂದು ತಾಂಜಾನಿಯಾದಿಂದ ದೋಹಾಗೆ ಮತ್ತು ಅಲ್ಲಿಂದ ದೆಹಲಿಗೆ ಕತಾರ್ ಏರ್‌ವೇಸ್ ವಿಮಾನದಲ್ಲಿ ಪ್ರಯಾಣಿಸಿದ್ದರು. ಅವರು ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ಒಂದು ವಾರ ತಂಗಿದ್ದರು ಮತ್ತು ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದರು.

4 new Omicron cases detected in Delhi, total rises to 6

ದೆಹಲಿಯಲ್ಲಿ ಮಂಗಳವಾರ ನಾಲ್ಕು ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ತಿಳಿಸಿದ್ದಾರೆ. ಆರು ಪ್ರಕರಣಗಳಲ್ಲಿ ಒಬ್ಬರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿಸಿದ್ದಾರೆ.

ಹೊಸ ಕೋವಿಡ್ -19 ರೂಪಾಂತರವನ್ನು ವರದಿ ಮಾಡಿದ ಇತರ ರಾಜ್ಯಗಳೆಂದರೆ ಮಹಾರಾಷ್ಟ್ರ (20), ಗುಜರಾತ್ (4), ರಾಜಸ್ಥಾನ (9), ಕರ್ನಾಟಕ (3), ಕೇರಳ (1) ಮತ್ತು ಆಂಧ್ರ ಪ್ರದೇಶ (1) ಮತ್ತು ಚಂಡೀಗಢ ಕೇಂದ್ರಾಡಳಿತ ಪ್ರದೇಶ (1) )

ಡಿಸೆಂಬರ್ 14 ರಂದು ಬೆಳಿಗ್ಗೆ 8 ಗಂಟೆಗೆ ಭಾರತದಲ್ಲಿ 5,784 ಹೊಸ ಕೋವಿಡ್ -19 ಪ್ರಕರಣಗಳು ಮತ್ತು 252 ಸಾವುಗಳು ದಾಖಲಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, 7,995 ಜನ ಚೇತರಿಸಿಕೊಂಡಿದ್ದಾರೆ. ಭಾರತದ ಒಟ್ಟು ಕೋವಿಡ್ ಸಂಖ್ಯೆ ಇಂದು 3,47,06,344 ಕ್ಕೆ ಏರಿಕೆಯಾಗಿದೆ, ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 88,993 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತೋರಿಸಿವೆ.

4 New Omicron Cases Detected in Delhi, total rises to 6

ಯುನೈಟೆಡ್ ಕಿಂಗ್‌ಡಮ್ ಕೊರೋನವೈರಸ್‌ನ ಹೊಸ ಓಮಿಕ್ರಾನ್ ರೂಪಾಂತರದಿಂದ ಸೋಂಕಿತ ವ್ಯಕ್ತಿಯ ಮೊದಲ ಸಾವನ್ನು ವರದಿ ಮಾಡಿದೆ. ಈ ಸುದ್ದಿಯನ್ನು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಸೋಮವಾರ ಖಚಿತಪಡಿಸಿದ್ದಾರೆ. ಸೋಂಕು ಸಾವಿಗೆ ಕಾರಣವೇ ಅಥವಾ ಆಕಸ್ಮಿಕವೇ ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ.

ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಓಮಿಕ್ರಾನ್ ರೂಪಾಂತರವು ಪ್ರಪಂಚದ ಹಲವಾರು ಭಾಗಗಳಿಗೆ ಹರಡಿತು. ಯುಕೆಯಲ್ಲಿ ಬಿಟ್ಟರೆ ಸಾವಿನ ವರದಿಗಳು ದಾಖಲಾಗಿಲ್ಲ. ಅಲ್ಲಿ ರೂಪಾಂತರವು ವೇಗವಾಗಿ ಹರಡುತ್ತಿದೆ. ಈ ರೂಪಾಂತರವು ಎಷ್ಟು ಸಾಂಕ್ರಾಮಿಕವಾಗಿದೆ ಮತ್ತು ಅಸ್ತಿತ್ವದಲ್ಲಿರುವ ಲಸಿಕೆಗಳು ಅದರ ವಿರುದ್ಧ ಎಷ್ಟು ಪರಿಣಾಮಕಾರಿ ಎಂದು ನಿರ್ಧರಿಸಲು ವಿಶ್ವದಾದ್ಯಂತ ತಜ್ಞರು ಸಂಶೋಧನೆ ನಡೆಸುತ್ತಿದ್ದಾರೆ. ಆದರೂ ಓಮಿಕ್ರಾನ್ ರೋಗಲಕ್ಷಣಗಳು ಸೌಮ್ಯವಾಗಿದೆ ಎಂದು ಹೇಳಲಾಗಿದೆ.

Recommended Video

      ಒಮಿಕ್ರೊನ್ ಕಾಟ ಮತ್ತೆ ಶುರು ! | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+