ಅಲೋಕ್ ವರ್ಮಾ ಮನೆ ಮುಂದಿದ್ದ ನಾಲ್ವರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ
ನವದೆಹಲಿ, ಅಕ್ಟೋಬರ್ 25: ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿರುವ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಮನೆಯ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ನಾಲ್ವರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
ನವದೆಹಲಿಯಲ್ಲಿರುವ ವರ್ಮಾ ನಿವಾಸದ ಬಳಿ ನಾಲ್ವರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದುದನ್ನು ಕಂಡ ಭದ್ರತಾ ಸಿಬ್ಬಂದಿ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.
ಸಿಬಿಐ ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಅಲೋಕ್ ವರ್ಮಾ ಅವರನ್ನು ಬುಧವಾರವಷ್ಟೇ ಕಡ್ಡಾಯ ರಜೆಯ ಮೇಲೆ ಕಳಿಸಲಾಗಿದೆ. ಜೊತೆಗೆ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಅವರ ವಿರುದ್ಧವೂ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನೂ ಕಡ್ಡಾಯ ರಜೆಯ ಮೇಲೆ ಕಳಿಸಲಾಗಿದೆ.
#WATCH: Earlier visuals of two of the four people (who were seen outside the residence of #AlokVerma) being taken for questioning. #CBI #Delhi pic.twitter.com/2KnqNfrnH0
— ANI (@ANI) October 25, 2018
ಇದರೊಟ್ಟಿಗೆ ಸಿಬಿಐನ ಹಲವು ಉನ್ನತಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದ್ದು, ದೇಶದ ಇತಿಹಾಸದಲ್ಲೇ ಕೇಂದ್ರ ತನಿಖಾದಳದಲ್ಲಿ ನಡೆದ ಅತ್ಯಪರೂಪದ ಬೆಳವಣಿಗೆ ಇದಾಗಿದೆ.
ಸಿಬಿಐ ನಲ್ಲಿ ನಡೆಯುತ್ತಿರುವ ಅನಪೇಕ್ಷಿತ ಬೆಳವಣಿಗೆಯ ವಿರುದ್ಧ ದೇಶದಾದ್ಯಂತ ಕಾಂಗ್ರೆಸ್ ಪಕ್ಷವು ಶುಕ್ರವಾರದಂದು ಪ್ರತಿಭಟನೆ ನಡೆಸಲಿದೆ.

ಅಲೋಕ್ ವರ್ಮಾ ಮತ್ತು ರಾಕೇಶ್ ಆಸ್ಥಾನ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ನಂತರ ನಾಗೇಶ್ವರ್ ರಾವ್ ಅವರನ್ನು ಸಿಬಿಐ ನ ಹಂಗಾಮಿ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.












Click it and Unblock the Notifications