Breaking; ದೆಹಲಿಯಲ್ಲಿ ಮಳೆ, ಗಾಳಿ; ವಿಮಾನ ಹಾರಾಟ ವಿಳಂಬ

ನವದೆಹಲಿ, ಮೇ 23; ಸೋಮವಾರ ಮುಂಜಾನೆ ನವದೆಹಲಿಯಲ್ಲಿ ಮಳೆಯಾಗುತ್ತಿದೆ. ಇದರಿಂದಾಗಿ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದ್ದು, ನೂರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಕಾದು ಕುಳಿತಿದ್ದಾರೆ.

ಕೆಟ್ಟ ಹವಾಮಾನ, ಮಳೆಯ ಕಾರಣ ನವದೆಹಲಿಯಿಂದ ಹೊರಡಬೇಕಿದ್ದ 40 ವಿಮಾನಗಳು ವಿಳಂಬವಾಗಿವೆ ಎಂದು ದೆಹಲಿ ವಿಮಾನ ನಿಲ್ದಾಣದ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ದೆಹಲಿಯಲ್ಲಿ ಲ್ಯಾಂಡ್ ಆಗಬೇಕಿದ್ದ ಎರಡು ವಿಮಾನಗಳನ್ನು ರದ್ದುಗೊಳಿಸಲಾಗಿದೆ. 18 ವಿಮಾನಗಳ ಆಗಮನ ವಿಳಂಬವಾಗಲಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

Delhi rain

ದೆಹಲಿಗೆ ಮುಂಜಾನೆ ಬರಬೇಕಿದ್ದ ಮತ್ತು ಮುಂಜಾನೆ ಹೊರಡಬೇಕಿದ್ದ ವಿಮಾನಗಳ ಸಮಯಗಳನ್ನು ಪರಿಷ್ಕರಣೆ ಮಾಡಲಾಗಿದೆ. ದೆಹಲಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ದೆಹಲಿ ಎನ್‌ಸಿಆರ್‌ ಮತ್ತು ಜೈಪುರ ವಿಮಾನ ನಿಲ್ದಾಣಗಳಿಗೆ ಕಳಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿ, ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ. ವಿಮಾನಗಳ ಹಾರಾಟದ ವಿಳಂಬದ ಬಗ್ಗೆ ಇಂಡಿಗೋ ಟ್ವೀಟ್ ಮೂಲಕ ಪ್ರಯಾಣಿಕರಿಗೆ ಮಾಹಿತಿ ನೀಡಿದೆ.

ದೆಹಲಿಯಲ್ಲಿ ಸೋಮವಾರ 60 ರಿಂದ 90 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 2 ಗಂಟೆಗಳ ಕಾಲ ಗಾಳಿ ಬೀಸಲಿದೆ ಎಂದು ಹೇಳಿದೆ.

ದೆಹಲಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಅಹಮದಾಬಾದ್, ಜೈಪುರ, ಲಕ್ನೋ, ಆಗ್ರಾಕ್ಕೆ ಕಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+